Mysore
27
overcast clouds

Social Media

ಭಾನುವಾರ, 13 ಏಪ್ರಿಲ 2025
Light
Dark

ಮುಖ್ಯಮಂತ್ರಿಗಳಿಂದ ಬಿಡುಗಡೆ ಆಯಿತು ‘ವೀರ ಚಂದ್ರಹಾಸ’ ಟ್ರೇಲರ್‍

ರವಿ ಬಸ್ರೂರು ನಿರ್ದೇಶನದ ಯಕ್ಷಗಾನ ಕಲೆ ಆಧಾರಿತ ‘ವೀರ ಚಂದ್ರಹಾಸ’ ಚಿತ್ರವು ಏಪ್ರಿಲ್‍ 18ರಂದು ರಾಜ್ಯಾದ್ಯಂತ ಬಿಡುಗಡೆ ಆಗುವುದಕ್ಕೆ ಸಜ್ಜಾಗಿದೆ. ಅದಕ್ಕೂ ಮೊದಲು ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಿತ್ರದ ಟ್ರೇಲರ್‍ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ಈ ಸಂದರ್ಭದಲ್ಲಿ ರವಿ ಬಸ್ರೂರು, ಮುಖ್ಯಮಂತ್ರಿಗಳನ್ನು ಟ್ರೇಲರ್‍ ಬಿಡುಗಡೆ ಮಾಡುವುದಕ್ಕೆ ಆಹ್ವಾನಿಸಿದ್ದು, ಮುಖ್ಯಮಂತ್ರಿಗಳು ಚಿತ್ರ ನೋಡುವ ಆಶ್ವಾಸನೆಯನ್ನು ನೀಡಿದ್ದಾರೆ.

ಕನ್ನಡ ಕೆಲವು ಸಿನಿಮಾಗಳಲ್ಲಿ ಯಕ್ಷಗಾನದ ನೃತ್ಯ ಮತ್ತು ಕಲಾವಿದರನ್ನು ಬಳಸಿಕೊಳ್ಳಲಾಗಿದೆ. ಭಾರತೀಯ ಚಿತ್ರರಂಗದಲ್ಲೇ ಇದೇ ಮೊದಲ ಬಾರಿಗೆ ಯಕ್ಷಗಾನವನ್ನು ಸಂಪೂರ್ಣವಾಗಿ ಬಳಸಿಕೊಂಡು ‘ವೀರ ಚಂದ್ರಹಾಸ’ ಚಿತ್ರವನ್ನು ರೂಪಿಸಲಾಗಿದೆ. ಯಕ್ಷಗಾನ ಪ್ರಸಂಗ, ಕಲಾವಿದರು, ವೇಷ ಭೂಷಣವನ್ನೇ ಸಂಪೂರ್ಣವಾಗಿ ಇಟ್ಟುಕೊಂಡು, ‘ವೀರ ಚಂದ್ರಹಾಸ’ ಎಂಬ ಚಿತ್ರ ಮಾಡಿದ್ದಾರೆ.

ಈ ಚಿತ್ರದ ಕುರಿತು ಮಾತನಾಡಿರುವ ರವಿ ಬಸ್ರೂರು, ‘ಯಕ್ಷಗಾನ ಸಾಕಷ್ಟು ವಿಷಯ ಭಂಡಾರ ಇರುವಂತಹ ಒಂದು ಕಲೆ. ಸುಮಾರು 12 ವರ್ಷಗಳಿಂದ ಇಂಥದ್ದೊಂದು ಚಿತ್ರ ಮಾಡಬೇಕು ಎಂಬ ಆಸೆ ಇತ್ತು. ಅದೀಗ ಕೈಗೂಡಿದೆ. ಚಿತ್ರದಲ್ಲಿ ಸಾಕಷ್ಟು ಯಕ್ಷಗಾನ ಕಲಾವಿದರು ನಟಿಸಿದ್ದಾರೆ. ಈ ಪ್ರಸಂಗದ ಅವಧಿ ಐದು ತಾಸಿನಷ್ಟಿದ್ದು, ಅದರಲ್ಲಿ ಆಯ್ದ ಕೆಲವು ಮುಖ್ಯ ಭಾಗಗಳನ್ನಷ್ಟೇ ಬಳಸಿಕೊಂಡಿದ್ದೇವೆ. ಈ ಕಥೆಯಲ್ಲಿ ಎಲ್ಲಾ ಕಮರ್ಷಿಯಲ್ ಅಂಶಗಳು ಇವೆ. ಒಬ್ಬ ಭಿಕ್ಷುಕ ಒಂದು ರಾಜ್ಯದ ದೊರೆ ಆಗುತ್ತಾನೆ ಎನ್ನುವುದು ಚಿತ್ರದ ಕಥೆ. ಅದು ಹೇಗೆ ಸಾಧ್ಯವಾಯಿತು ಎನ್ನುವುದೇ ಚಿತ್ರ’ ಎನ್ನುತ್ತಾರೆ ರವಿ ಬಸ್ರೂರು.

‘ವೀರ ಚಂದ್ರಹಾಸ’ ಚಿತ್ರದಲ್ಲಿ 450ಕ್ಕೂ ಹೆ್ಚು ನಿಜ ಯಕ್ಷಗಾನ ಕಲಾವಿದರು ಪ್ರಮುಖ ಪಾತರಗಳಲ್ಲಿ ನಟಿಸಿದ್ದಾರಂತೆ. ಈ ಚಿತ್ರವನ್ನು ಓಂಕಾರ್‍ ಮೂವೀಸ್‍ ಬ್ಯಾನರ್‍ ಅಡಿ ಎನ್‍.ಎಸ್. ರಾಜಕುಮಾರ್ ನಿರ್ಮಿಸಿದ್ದು, ನಾಗಶ್ರೀ ಜಿ.ಎಸ್‍, ಪ್ರಸನ್ನ ಶೆಟ್ಟಿಗಾರ್ ಮಂದರ್ತಿ, ರವೀಂದ್ರ ದೇವಾಡಿಗ, ಶೀತಲ್‍ ಶೆಟ್ಟಿ, ಉದಯ್‍ ಕಡಬಾಲ್‍ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

 

Tags: