ಬೆಂಗಳೂರು: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಸ್ಯಾಂಡಲ್‌ವುಡ್‌ನ ಹಿರಿಯ ನಟ ಹಾಗೂ ಹಾಸ್ಯ ಕಲಾವಿದ ಉಮೇಶ್ ಅವರು ನಿಧನರಾಗಿದ್ದಾರೆ. ಅವರಿಗೆ 80 ವರ್ಷ ವಯಸ್ಸಾಗಿತ್ತು.
ಕನ್ನಡ ಸಿನಿಮಾ ಕ್ಷೇತ್ರದಲ್ಲಿ ಹಾಸ್ಯ ನಟನಾಗಿ , ನಿರ್ದೇಶಕನಾಗಿ ನೂರಾರು ಸಿನಿಮಾಗಳಲ್ಲಿ ಎಂ.ಎಸ್ ಉಮೇಶ್ ರವರು ಜನಪ್ರಿಯತೆ ಪಡೆದಿದ್ದರು.
ಕಳೆದ ಕೆಲವು ದಿನಗಳಿಂದ ಅವರಿಗೆ ತೀವ್ರ ಅನಾರೋಗ್ಯ ಉಂಟಾಗಿದ್ದು, ಈ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತರಾಗಿದ್ದಾರೆ.
ಉಮೇಶ್ ಅವರು ಕಳೆದ ಕೆಲ ದಿನಗಳ ಹಿಂದೆ ಮನೆಯಲ್ಲೇ ಕಾಲು ಜಾರಿ ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದರು. ಪರೀಕ್ಷೆ ವೇಳೆ ಅವರಿಗೆ 4ನೇ ಹಂತದ ಲಿವರ್ ಕ್ಯಾನ್ಸರ್ ಇರುವುದು ಪತ್ತೆಯಾಗಿತ್ತು. ಅವರು ಕಿಮೊಥೆರಪಿ ಹಾಗೂ ಇಮ್ಯೂನೋಥೆರಪಿ ಮೂಲಕ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದರು .
ಆದರೆ ಈಗ ಉಮೇಶ್ ನಿಧನರಾಗಿರುವುದು ಅಭಿಮಾನಿಗಳಿಗೆ ಮತ್ತು ಕುಟುಂಬದವರಿಗೆ ನೋವುಂಟು ಮಾಡಿದೆ.
ಉಮೇಶ್ ನಿಧನಕ್ಕೆ ಕನ್ನಡ ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದು, ಸಂತಾಪ ಸೂಚಿಸಿದ್ದಾರೆ.





