ಮನರಂಜನೆ

ಹಿರಿಯ ಹಾಸ್ಯ ನಟ ಎಂ.ಎಸ್. ಉಮೇಶ್ ಇನ್ನಿಲ್ಲ

ಬೆಂಗಳೂರು: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಸ್ಯಾಂಡಲ್‌ವುಡ್‌ನ ಹಿರಿಯ ನಟ ಹಾಗೂ ಹಾಸ್ಯ ಕಲಾವಿದ ಉಮೇಶ್‌ ಅವರು ನಿಧನರಾಗಿದ್ದಾರೆ. ಅವರಿಗೆ 80 ವರ್ಷ ವಯಸ್ಸಾಗಿತ್ತು.

ಕನ್ನಡ ಸಿನಿಮಾ ಕ್ಷೇತ್ರದಲ್ಲಿ ಹಾಸ್ಯ ನಟನಾಗಿ , ನಿರ್ದೇಶಕನಾಗಿ ನೂರಾರು ಸಿನಿಮಾಗಳಲ್ಲಿ ಎಂ.ಎಸ್‌ ಉಮೇಶ್‌ ರವರು ಜನಪ್ರಿಯತೆ ಪಡೆದಿದ್ದರು.

ಕಳೆದ ಕೆಲವು ದಿನಗಳಿಂದ ಅವರಿಗೆ ತೀವ್ರ ಅನಾರೋಗ್ಯ ಉಂಟಾಗಿದ್ದು, ಈ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತರಾಗಿದ್ದಾರೆ.

ಉಮೇಶ್ ಅವರು ಕಳೆದ ಕೆಲ ದಿನಗಳ ಹಿಂದೆ ಮನೆಯಲ್ಲೇ ಕಾಲು ಜಾರಿ ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದರು. ಪರೀಕ್ಷೆ ವೇಳೆ ಅವರಿಗೆ 4ನೇ ಹಂತದ ಲಿವರ್ ಕ್ಯಾನ್ಸರ್ ಇರುವುದು ಪತ್ತೆಯಾಗಿತ್ತು. ಅವರು ಕಿಮೊಥೆರಪಿ ಹಾಗೂ ಇಮ್ಯೂನೋಥೆರಪಿ ಮೂಲಕ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದರು .

ಆದರೆ ಈಗ ಉಮೇಶ್ ನಿಧನರಾಗಿರುವುದು ಅಭಿಮಾನಿಗಳಿಗೆ ಮತ್ತು ಕುಟುಂಬದವರಿಗೆ ನೋವುಂಟು ಮಾಡಿದೆ.

ಉಮೇಶ್ ನಿಧನಕ್ಕೆ ಕನ್ನಡ ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದು, ಸಂತಾಪ ಸೂಚಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಕೇರ್ ಟೇಕರ್ ಕೆಲಸಕ್ಕೆ ಸೇರಿ ಮನೆ ದರೋಡೆ; ಆರೋಪಿ ಬಂಧನ

ಮಡಿಕೇರಿ: ವಯೋವೃದ್ಧರೊಬ್ಬರ ಮನೆಯಲ್ಲಿ ಹೋಂ ನರ್ಸಿಂಗ್(ಕೇರ್ ಟೇಕರ್) ಕೆಲಸಕ್ಕೆಂದು ಸೇರಿಕೊಂಡು ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿದ ಆರೋಪಿಯನ್ನು ಬಂಧಿಸುವಲ್ಲಿ…

5 hours ago

ಮಹದೇಶ್ವರ ಬೆಟ್ಟ : ವಿವಿಧ ಸೇವೆಗಳಿಂದ 1.16 ಕೋಟಿ ಸಂಗ್ರಹ

ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಎರಡನೇ ಶನಿವಾರ ಹಾಗೂ ಯುಗಾದಿ ಜಾತ್ರಾ…

6 hours ago

ಹೊರ್ಮುಜ್‌ ಜಲಸಂಧಿ ಶತ್ರುಗಳಿಗೆ ಮಾತ್ರ ಮುಚ್ಚಿದೆ : ಇರಾನ್

ಟೆಹ್ರಾನ್ : ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆಯೂ ಹೊರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಲಾಗಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಶತ್ರು ರಾಷ್ಟ್ರ ಮತ್ತು…

6 hours ago

ಹುಣಸೂರು | ಗುಡುಗು-ಸಿಡಿಲು ಸಹಿತ ಸಾಧಾರಣ ಮಳೆ

ಹುಣಸೂರು : ತಾಲ್ಲೂಕಿನ ಹನಗೋಡು ಹೋಬಳಿ ವ್ಯಾಪ್ತಿ ಸೇರಿದಂತೆ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಅಂಚಿನ ಗ್ರಾಮಗಳಲ್ಲಿ ಸೋಮವಾರ ಸಂಜೆ ಗುಡುಗು-ಸಿಡಿಲು…

7 hours ago

ಕುಕ್ಕರಹಳ್ಳಿ ಕೆರೆಯಲ್ಲಿ ಕಟ್ಟಡ ನಿರ್ಮಾಣಕ್ಕೆ ವಿರೋಧ ; ಪ್ರತಿಭಟನೆ

ಮೈಸೂರು : ಕುಕ್ಕರಹಳ್ಳಿ ಕೆರೆಯ ಪರಿಸರ ಸಂರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿ ಪರಿಸರ ಸಂರಕ್ಷಿಸಿ ಹೋರಾಟ ಸಮಿತಿ ವತಿಯಿಂದ ಕುಕ್ಕರಹಳ್ಳಿ…

7 hours ago

2 ಸಾವಿರ ಬೋಧಕ ಹುದ್ದೆಗಳಿಗೆ ನೇಮಕಾತಿ : ಉನ್ನತ ಶಿಕ್ಷಣ ಸಚಿವ ಸುಧಾಕರ್‌

ಬೆಂಗಳೂರು : ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಎಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್ ಎಂಜಿನಿಯರಿಂಗ್ ಕಾಲೇಜು ಹಾಗೂ ವಿವಿಯಲ್ಲಿ ಖಾಲಿ ಇರುವ…

7 hours ago