ಈ ಹಿಂದೆ ‘ಸುಂಟರಗಾಳಿ’ ಚಿತ್ರದ ಕ್ಲೈಮ್ಯಾಕ್ಸ್ ಭಾಗದಲ್ಲಿ ದರ್ಶನ್, ವೀರಗಾಸೆ ಕಲಾವಿದನ ವೇಷದಲ್ಲಿ ಕಾಣಿಸಿಕೊಂಡಿದ್ದರು. ಇದೀಗ ವಿಜಯ್ ರಾಘವೇಂದ್ರ ಸಹ ವೀರಗಾಸೆ ಕಲಾವಿದನ ವೇಷದಲ್ಲಿ ಕಾಣಿಸಿಕೊಂಡಿದ್ದಾರೆ
ಕರ್ನಾಟಕದ ಜನಪ್ರಿಯ ಜಾನಪದ ಕಲೆಗಳಲ್ಲಿ ವೀರಗಾಸೆ ಸಹ ಒಂದು. ವೀರಗಾಸೆ ಕಲೆ ಹಾಗೂ ಅದರ ಅಧಿದೇವರಾದ ವೀರಭದ್ರ ದೇವರ ಇತಿಹಾಸವನ್ನು ಹೇಳುವ ‘ರುದ್ರಾಭಿಷೇಕಂ’ ಚಿತ್ರದಲ್ಲಿ ಇದೀಗ ವಿಜಯ್ ರಾಘವೇಂದ್ರ ವೀರಗಾಸೆ ಗೆಟಪ್‍ನಲ್ಲಿ ಮೊದಲ ಬಾರಿಗೆ ಕಾಣಿಸಿಕೊಂಡಿದ್ದಾರೆ.
ಇತ್ತೀಚೆಗೆ ಚಿಕ್ಕಬಳ್ಳಾಪುರದ ಶ್ರೀರಂಗನಾಥ ಸ್ವಾಮಿ ದೇವಸ್ಥಾನದಲ್ಲಿ ಚಿತ್ರದ ಕ್ಲೈಮ್ಯಾಕ್ಸ್ ದೃಶ್ಯ ಹಾಗೂ ದೇವನಹಳ್ಳಿಯ ಚಿಕ್ಕತದಮಂಗಲ ಗ್ರಾಮದಲ್ಲಿ ಸೆಟ್ ಹಾಕಿ ಕ್ಲೈಮ್ಯಾಕ್ಸ್ ಹಾಡಿನ ಚಿತ್ರೀಕರಣ ನಡೆಸಲಾಗಿದೆ. ಈ ಹಾಡಿನಲ್ಲಿ ಖುದ್ದು ವಿಜಯ್ ರಾಘವೇಂದ್ರ ಜೊತೆಗೆ ಬೇರೆ ಊರುಗಳಿಂದ ಆಗಮಿಸಿದ ವೀರಗಾಸೆ ಕಲಾವಿದರು ಸಹ ಭಾಗವಹಿಸಿದ್ದರು.
ವೀರಗಾಸೆ ಕುಟುಂಬವೊಂದನ್ನು ಹಿನ್ನೆಲೆಯಾಗಿಟ್ಟುಕೊಂಡು ಆ ಕಲೆಯ ಮೂಲ, ಆ ಕಲಾವಿದರ ಇತಿಹಾಸವನ್ನು ಕಮರ್ಷಿಯಲ್ ಕಥೆಯ ಮೂಲಕ ಹೇಳುವ ಪ್ರಯತ್ನವೇ ‘ರುದ್ರಾಭಿಷೇಕಂ’. ವಸಂತ್ ಕುಮಾರ್ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆಯುವುದರ ಜೊತೆಗೆ ನಿರ್ದೇಶನವನ್ನೂ ಮಾಡುತ್ತಿದ್ದಾರೆ.
ವಿಜಯ್ ರಾಘವೇಂದ್ರ ಈ ಚಿತ್ರದಲ್ಲಿ ಮೊದಲ ಬಾರಿಗೆ ಅಪ್ಪ- ಮಗನಾಗಿ ಎರಡು ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಪ್ರಿಯಾಂಕಾ ತಿಮ್ಮೇಶ್, ಬಲ ರಾಜವಾಡಿ, ವಸಂತ್ ಕುಮಾರ್ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ವಿ. ಮನೋಹರ್ ಸಂಗೀತ ಸಂಯೋಜನೆ, ಮುತ್ತುರಾಜ್ ಛಾಯಾಗ್ರಹಣ ಇರುವ ಈ ಚಿತ್ರವು ಫ್ಯಾನ್ ಇಂಡಿಯಾ ಕ್ರಿಯೇಶನ್ಸ್ ಬ್ಯಾನರ್ ಅಡಿ ನಿರ್ಮಾಣವಾಗುತ್ತಿದೆ.
ಮಧ್ಯ ಪ್ರಾಚ್ಯ ದೇಶಗಳಲ್ಲಿ ಕಳೆದ ೪೦ ದಿನಗಳಿಂದಲೂ ಯುದ್ಧ ನಡೆಯುತ್ತಿರುವುದರಿಂದ ವಿವಿಧ ದೇಶಗಳು ಸಂಕಷ್ಟಕ್ಕೆ ಸಿಲುಕಿವೆ. ಪೋಪ್ ೧೪ನೇ ಲಿಯೋರವರು…
ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಸರ್ಕಾರ ನೀಡುವ ಸ್ಕಾಲರ್‌ಶಿಪ್ ದೊಡ್ಡ ಸಹಾಯವಾಗಿದೆ. ಆದರೆ ವಸತಿ ವೆಚ್ಚ,ಪುಸ್ತಕಗಳು ಹಾಗೂ…
ಕೊಲ್ಲಿಯಲ್ಲಿ ಅಮೆರಿಕ-ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ನಡೆಸುತ್ತಿದ್ದ ಯುದ್ಧದ ನಿಲುಗಡೆಗಾಗಿ ಕರೆಯಲಾಗಿದ್ದ ಪಾಕಿಸ್ತಾನ ನೇತೃತ್ವದ ಸಂಧಾನ ಸಭೆ ವಿಫಲವಾಗುವುದರೊಂದಿಗೆ ಕೊಲ್ಲಿಯಲ್ಲಿ…
ಮೈಸೂರಿನ ಹೆಬ್ಬಾಳ ಕೈಗಾರಿಕಾ ಪ್ರದೇಶದ ರಸ್ತೆ ಹಾಳಾಗಿದ್ದು, ಈ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರು ಹರ ಸಾಹಸ ಮಾಡಬೇಕಾಗಿದೆ. ರಸ್ತೆಯ…
ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿ ಆವರಣದಲ್ಲಿ ಜ್ಯೂಸ್ ಸೆಂಟರ್, ಕಾಫಿ, ಟೀ ಅಂಗಡಿಗಳು ಪ್ಲಾಸ್ಟಿಕ್ ಕವರ್, ನೀರಿನ ಬಾಟಲಿ, ಪ್ಲಾಸ್ಟಿಕ್ ಕಪ್‌ಗಳನ್ನು…
ಭಾರತದ ಹೆಚ್ಚಿನ ಕುಟುಂಬಗಳಿಗೆ ಅಡುಗೆ ಅನಿಲ ಅಥವಾ ಎಲ್‌ಪಿಜಿ ಎಂಬುದು ದಿನಚರಿಯ ಅವಿಭಾಜ್ಯ ಅಂಗವಾಗಿದೆ. ಸಿಲಿಂಡರ್ ಯಾವಾಗ ಖಾಲಿಯಾಗುತ್ತದೆ ಎನ್ನುವುದರತ್ತ…