ಮನರಂಜನೆ

ವೀರಗಾಸೆ ವೇಷದಲ್ಲಿ ವಿಜಯ್‍ ರಾಘವೇಂದ್ರ; ‘ರುದ್ರಾಭಿಷೇಕಂ’ಗೆ ಹಾಡಿನ ಚಿತ್ರೀಕರಣ

ಈ ಹಿಂದೆ ‘ಸುಂಟರಗಾಳಿ’ ಚಿತ್ರದ ಕ್ಲೈಮ್ಯಾಕ್ಸ್ ಭಾಗದಲ್ಲಿ ದರ್ಶನ್‍, ವೀರಗಾಸೆ ಕಲಾವಿದನ ವೇಷದಲ್ಲಿ ಕಾಣಿಸಿಕೊಂಡಿದ್ದರು. ಇದೀಗ ವಿಜಯ್‍ ರಾಘವೇಂದ್ರ ಸಹ ವೀರಗಾಸೆ ಕಲಾವಿದನ ವೇಷದಲ್ಲಿ ಕಾಣಿಸಿಕೊಂಡಿದ್ದಾರೆ

ಕರ್ನಾಟಕದ ಜನಪ್ರಿಯ ಜಾನಪದ ಕಲೆಗಳಲ್ಲಿ ವೀರಗಾಸೆ ಸಹ ಒಂದು. ವೀರಗಾಸೆ ಕಲೆ ಹಾಗೂ ಅದರ ಅಧಿದೇವರಾದ ವೀರಭದ್ರ ದೇವರ ಇತಿಹಾಸವನ್ನು ಹೇಳುವ ‘ರುದ್ರಾಭಿಷೇಕಂ’ ಚಿತ್ರದಲ್ಲಿ ಇದೀಗ ವಿಜಯ್‍ ರಾಘವೇಂದ್ರ ವೀರಗಾಸೆ ಗೆಟಪ್‍ನಲ್ಲಿ ಮೊದಲ ಬಾರಿಗೆ ಕಾಣಿಸಿಕೊಂಡಿದ್ದಾರೆ.

ಇತ್ತೀಚೆಗೆ ಚಿಕ್ಕಬಳ್ಳಾಪುರದ ಶ್ರೀರಂಗನಾಥ ಸ್ವಾಮಿ ದೇವಸ್ಥಾನದಲ್ಲಿ ಚಿತ್ರದ ಕ್ಲೈಮ್ಯಾಕ್ಸ್ ದೃಶ್ಯ ಹಾಗೂ ದೇವನಹಳ್ಳಿಯ ಚಿಕ್ಕತದಮಂಗಲ ಗ್ರಾಮದಲ್ಲಿ ಸೆಟ್ ಹಾಕಿ ಕ್ಲೈಮ್ಯಾಕ್ಸ್ ಹಾಡಿನ ಚಿತ್ರೀಕರಣ ನಡೆಸಲಾಗಿದೆ. ಈ ಹಾಡಿನಲ್ಲಿ ಖುದ್ದು ವಿಜಯ್‍ ರಾಘವೇಂದ್ರ ಜೊತೆಗೆ ಬೇರೆ ಊರುಗಳಿಂದ ಆಗಮಿಸಿದ ವೀರಗಾಸೆ ಕಲಾವಿದರು ಸಹ ಭಾಗವಹಿಸಿದ್ದರು.

ವೀರಗಾಸೆ ಕುಟುಂಬವೊಂದನ್ನು ಹಿನ್ನೆಲೆಯಾಗಿಟ್ಟುಕೊಂಡು ಆ ಕಲೆಯ ಮೂಲ, ಆ ಕಲಾವಿದರ ಇತಿಹಾಸವನ್ನು ಕಮರ್ಷಿಯಲ್ ಕಥೆಯ ಮೂಲಕ ಹೇಳುವ ಪ್ರಯತ್ನವೇ ‘ರುದ್ರಾಭಿಷೇಕಂ’. ವಸಂತ್‍ ಕುಮಾರ್‍ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆಯುವುದರ ಜೊತೆಗೆ ನಿರ್ದೇಶನವನ್ನೂ ಮಾಡುತ್ತಿದ್ದಾರೆ.

ವಿಜಯ್‍ ರಾಘವೇಂದ್ರ ಈ ಚಿತ್ರದಲ್ಲಿ ಮೊದಲ ಬಾರಿಗೆ ಅಪ್ಪ- ಮಗನಾಗಿ ಎರಡು ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಪ್ರಿಯಾಂಕಾ ತಿಮ್ಮೇಶ್‍, ಬಲ ರಾಜವಾಡಿ, ವಸಂತ್‍ ಕುಮಾರ್‍ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ವಿ. ಮನೋಹರ್ ಸಂಗೀತ ಸಂಯೋಜನೆ, ಮುತ್ತುರಾಜ್ ಛಾಯಾಗ್ರಹಣ ಇರುವ ಈ ಚಿತ್ರವು ಫ್ಯಾನ್‍ ಇಂಡಿಯಾ ಕ್ರಿಯೇಶನ್ಸ್ ಬ್ಯಾನರ್‍ ಅಡಿ ನಿರ್ಮಾಣವಾಗುತ್ತಿದೆ.

 

ಆಂದೋಲನ ಡೆಸ್ಕ್

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

1 hour ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

5 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

5 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

5 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

5 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

5 hours ago