ಪಿ.ಸಿ. ಶೇಖರ್ ನಿರ್ದೇಶನದ ‘ಬ್ಯಾಡ್’ ಚಿತ್ರ ಕಳೆದ ವಾರವಷ್ಟೇ ಬಿಡುಗಡೆಯಾಗಿದೆ. ಈ ಮಧ್ಯೆ, ಅವರ ಹೊಸ ಚಿತ್ರದ ಶೀರ್ಷಿಕೆ ಅನಾವರಣ ಸದ್ದಿಲ್ಲದೆ ಆಗಿದೆ. ಶೇಖರ್ ಈ ಬಾರಿ ವಿಜಯ್ ರಾಘವೇಂದ್ರ ಅಭಿನಯದಲ್ಲಿ ಚಿತ್ರವೊಂದನ್ನು ನಿರ್ದಶನ ಮಾಡುತ್ತಿದ್ದು, ಈ ಚಿತ್ರಕ್ಕೆ ‘ಮಹಾನ್’ ಎಂದು ಹೆಸರಿಡಲಾಗಿದೆ. ಈ ಶೀರ್ಷಿಕೆಯನ್ನು ಶಿವರಾಜಕುಮಾರ್ ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭ ಕೋರಿದ್ದಾರೆ.
‘ಮಹಾನ್’ ಚಿತ್ರವನ್ನು ಅಲೆಯನ್ಸ್ ಯೂನಿವರ್ಸಿಟಿ ವಿದ್ಯಾ ಸಂಸ್ಥೆಯ ಸಹಯೋಗದೊಂದಿಗೆ ಆಕಾಶ್ ಪಿಕ್ಚರ್ಸ್ ಲಾಂಛನದಲ್ಲಿ ಪ್ರಕಾಶ್ ನಿರ್ಮಿಸುತ್ತಿದ್ದು, ಪಿ.ಸಿ.ಶೇಖರ್ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದ ಚಿತ್ರೀಕರಣ ಸದ್ಯದಲ್ಲೇ ಪ್ರಾರಂಭವಾಗಲಿದೆ.
ಈ ಚಿತ್ರದಲ್ಲಿ ಮನರಂಜನೆ ಜೊತೆಗೆ ಸಂದೇಶವಿದೆ ಎನ್ನುವ ವಿಜಯ್ ರಾಘವೇಂದ್ರ, ‘ಈ ಚಿತ್ರದಲ್ಲಿ ಮನೋರಂಜನೆ ಇದೆ. ಮನೋರಂಜನೆಯ ಹಿಂದೆ ಒಂದು ಸಂದೇಶವಿದೆ. ನಿಜಕ್ಕೂ ಆ ಸಂದೇಶ ‘ಮಹಾನ್’ ಸಂದೇಶವಾಗಿರಲಿದೆ’ ಎನ್ನುತ್ತಾರೆ.
ಇದು ದೇಶಕ್ಕೆ ಅನ್ನ ನೀಡುವ ಅನ್ನದಾತನಾದ ರೈತನ ಕುರಿತಾದ ಕಥೆ ಎನ್ನುವ ಶೇಖರ್, ‘ಅದೇ ಕಾರಣಕ್ಕೆ ಚಿತ್ರಕ್ಕೆ ‘ಮಹಾನ್’ ಎಂದು ಹೆಸರಿಡಲಾಗಿದೆ. ‘ಮಹಾನ್’ ಎಂದರೆ ಪ್ರಮುಖ, ಶ್ರೇಷ್ಠ ಎಂಬ ಅರ್ಥಗಳು ಬರುತ್ತವೆ. ಅನ್ನ ನೀಡುವ ರೈತ ಎಲ್ಲರಿಗಿಂತ ದೊಡ್ಡವನು ಎಂದು ಎಲ್ಲರಿಗೂ ತಿಳಿದ ವಿಷಯ. ಹಾಗಾಗಿ ನಮ್ಮ ಚಿತ್ರಕ್ಕೆ ‘ಮಹಾನ್’ ಎಂದು ಹೆಸರಿಡಲಾಗಿದೆ. ಚಿತ್ರಕ್ಕೆ ಸದ್ಯದಲ್ಲೇ ಚಿತ್ರೀಕರಣ ಆರಂಭವಾಗಲಿದೆ. ಚಿತ್ರದಲ್ಲಿ ಇನ್ನೂ ಪ್ರಮುಖ ಕಲಾವಿದರು ಅಭಿನಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ಹೆಚ್ಚಿನ ಮಾಹಿತಿ ನೀಡುವುದಾಗಿ’ ತಿಳಿಸುತ್ತಾರೆ.
ಈ ಚಿತ್ರ ನಮ್ಮ ಪಾಲಿಗೆ ಕೇವಲ ಒಂದು ಸಿನೆಮಾ ಅಲ್ಲ, ಇದು ನಮ್ಮ ರೈತರಿಗೆ ಅರ್ಪಿಸುವ ಗೌರವ ಎನ್ನುವ ನಿರ್ಮಾಪಕ ಪ್ರಕಾಶ್, ‘ಈ ಪಾತ್ರಕ್ಕೆ ವಿಜಯ್ ರಾಘವೇಂದ್ರ ಅವರಿಗಿಂತ ಹೆಚ್ಚು ಸೂಕ್ತ ವ್ಯಕ್ತಿ ಯಾರೂ ಇಲ್ಲ. ಅವರ ಅಭಿನಯ, ಅವರ ಆತ್ಮೀಯತೆ ಈ ಪಾತ್ರಕ್ಕೆ ಜೀವ ತುಂಬಲಿದೆ’ ಎಂದು ಹೇಳಿದ್ದಾರೆ.
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…
ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಸಾರ್ವಜನಿಕ ಸಂಸ್ಥೆಗಳಿಗೆ ಅತ್ಯಂತ ಮುಖ್ಯವಾದ ಪಾಠ ಯಾವುದೇ ನಾಗರಿಕನು ತನ್ನ…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ದೈಹಿಕ ನ್ಯೂನತೆ ನಡುವೆ ಆರ್ಥಿಕ ಪ್ರಗತಿಯ ಮೆಟ್ಟಿಲೇರಿದ ಮಹಿಳೆ ಹರ‍್ಯಾಣದ ಅಂಬಾಲಾದ ಹಿಮಾಂಶಿಕಾ ಶರ್ಮಾರಿಗೆ…
ಕೆ.ಬಿ.ರಮೇಶನಾಯಕ ರಾಜ್ಯ ಸರ್ಕಾರದ ಗಡುವಿನೊಳಗೆ ಪ್ರಕ್ರಿಯೆ ಮುಗಿಸಲು ಇಲಾಖೆ ಕಸರತ್ತು. ಮೈಸೂರು: ನಕಲಿ ಫಲಾನುಭವಿಗಳನ್ನು ಕೈಬಿಟ್ಟು ಪಾರದರ್ಶಕತೆ ಕಾಯ್ದುಕೊಳ್ಳಲು ಹಾಗೂ…