ಮನರಂಜನೆ

ಕಲರ್ಸ್ ಕನ್ನಡಕ್ಕೆ ವಿಜಯ್‍ ಸೂರ್ಯ; ನಿರ್ದೇಶನಕ್ಕೆ ರಕ್ಷ್ ರಾಮ್‍

ಸ್ಟಾರ್‍ ಸುವರ್ಣದಲ್ಲಿ ಪ್ರಸಾರವಾದ ‘ನಮ್ಮ ಲಚ್ಚಿ’ ಧಾರಾವಾಹಿಯಲ್ಲಿ ನಟಿಸಿದ್ದ ವಿಜಯ್‍ ಸೂರ್ಯ, ಇದೀಗ ಿನ್ನೊಂದು ಹೊಸ ಧಾರಾವಾಹಿಯಲ್ಲಿ ನಟಿಸುತ್ತಿದ್ದು, ಆ ಧಾರಾವಾಹಿ ಸೆಪ್ಟೆಂಬರ್ 9ರಿಂದ ಸೋಮವಾರದಿಂದ ಶನಿವಾರದವರೆಗೆ ಪ್ರತಿ ಸಂಜೆ ಆರೂವರೆಗೆ ಕಲರ್ಸ ಕನ್ನಡದಲ್ಲಿ ಪ್ರಸಾರವಾಗಲಿದೆ. ಅದೇ ‘ದೃಷ್ಟಿಬೊಟ್ಟು’.

ಈ ಹಿಂದೆ ಕಲರ್ಸ್ ಕನ್ನಡ ವಾಹಿನಿಯಲ್‍ಲಿ ‘ಅಗ್ನಿ ಸಾಕ್ಷಿ’ ಎಂಬ ಹಿಟ್‍ ಧಾರಾವಾಹಿಯಲ್ಲಿ ನಟಿಸಿದ್ದ ವಿಜಯ್‍ ಸೂರ್ಯ, ಆ ನಂತರ ಬೇರೆ ಚಾನಲ್‍ಗಳ ಧಾರಾವಾಹಿಗಳಲ್ಲಿ ಬ್ಯುಸಿಯಾಗಿದ್ದರು. ಈಗ ಬಹಳ ದಿನಗಳ ನಂತರ ಅವರು ಕಲರ್ಸ್ ಕನ್ನಡಕ್ಕೆ ವಾಪಸ್ಸಾಗಿದ್ದಾರೆ. ಈ ಬಾರಿ ಅವರು ‘ದೃಷ್ಟಿಬೊಟ್ಟು’ ಎಂಬ ಧಾರಾವಾಹಿಯಲ್ಲಿ ನಟಿಸಿದ್ದು, ಈ ಧಾರಾವಾಹಿಯನ್ನು ಮತ್ತೊಮ್ಮ ನಟ ರಕ್ಷ್ ರಾಮ್‍ ನಿರ್ಮಿಸುವುದರ ಜೊತಗೆ ಕ್ರಿಯೇಟಿವ್‍ ಡೈರೆಕ್ಟರ್‍ ಆಗಿ ಕೆಲಸ ಮಾಡುತ್ತಿದ್ದಾರೆ.

ಹೌದು, ‘ಬಹದ್ದೂರ್’ ಚೇತನ್‍ ಕುಮಾರ್‍ ನಿರ್ದೇಶನದ ‘ಬರ್ಮ’ ಚಿತ್ರದಲ್ಲಿ ಹೀರೋ ಆಗಿ ನಟಿಸುತ್ತಿರುವ ರಕ್ಷ್, ಅದರ ಜೊತೆಗೆ ಈ ಧಾರಾವಾಹಿಯನ್ನು ಮುನ್ನಡೆಸುವ ಜವಾಬ್ದಾರಿಯನ್ನೂ ಹೊತ್ತಿದ್ದಾರೆ. ಅವರ ಪತ್ನಿ ಅನುಷಾ ಶಿವಪ್ರಸಾದ್‍, ಶ್ರೀ ಸಾಯಿ ಆಂಜನೇಯ ಕಂಪನಿ ಸಂಸ್ಥೆಯಡಿ ನಿರ್ಮಿಸುತ್ತಿದ್ದು, ಕುಮಾರ್‍ ಕೆರೆಗೋಡು ನಿರ್ದೇಶನ ಮಾಡುತ್ತಿದ್ದಾರೆ.

ಎರಡು ವಿಭಿನ್ನ ಕೌಟುಂಬಿಕ ಹಿನ್ನೆಲೆಗಳಿಂದ ಬಂದ ದೃಷ್ಟಿ ಎಂಬ ಹುಡುಗಿ ಹಾಗೂ ದತ್ತ ಶ್ರೀರಾಮ್ ಪಾಟೀಲ್ ಎಂಬ ಹುಡುಗನ ಬದುಕುಗಳು ಸಂಧಿಸಿದಾಗ ನಡೆಯುವ ಕಥೆಯೇ ಈ ‘ದೃಷ್ಟಿಬೊಟ್ಟು’. ದೃಷ್ಟಿಯ ಪಾಲಿಗೆ ರೂಪ ಅನ್ನುವುದೇ ಶಾಪ. ತನ್ನ ರೂಪವನ್ನೇ ಬದಲಾಯಿಸಿಕೊಂಡು ಬದುಕುತ್ತಿರುವ ಅವಳಿಗೆ ತನ್ನ ಸೋದರಿಯನ್ನು ಮರಳಿ ಮನೆಗೆ ಕರೆತಂದು ಕುಟುಂಬವನ್ನು ಒಂದು ಮಾಡಬೇಕೆಂಬ ಗುರಿ. ಮೊದಲು ಮೆಕಾನಿಕ್ ಆಗಿ ಈಗ ರೌಡಿಯಾಗಿರುವ ದತ್ತ, ಸುಂದರವಾಗಿರುವ ಹೆಣ್ಣುಗಳನ್ನ ಕಂಡರೆ ಉರಿದು ಬೀಳುತ್ತಾನೆ. ದುರುಳ ಪೋಲೀಸನೊಬ್ಬನ ಕೈಗೆ ಸಿಕ್ಕ ದೃಷ್ಟಿ ಅವನ ಕಿರುಕುಳಕ್ಕೆ ಸಿಕ್ಕು ಒದ್ದಾಡುತ್ತಿರುವಾಗ, ದತ್ತನ ಪ್ರವೇಶವಾಗುತ್ತದೆ. ಆಮೇಲೆ ಏನಾಗುತ್ತದೆ ಎಂದು ಗೊತ್ತಾಗಬೇಕಿದ್ದರೆ ‘ದೃಷ್ಟಿಬೊಟ್ಟು’ ನೋಡಬೇಕು.

‘ದೃಷ್ಟಿಬೊಟ್ಟು’ ಧಾರಾವಾಹಿಯಲ್ಲಿ ವಿಜಯ್‍ ಲಲಿತಾ ಸೂರ್ಯ ಜೊತೆಗೆ ಅರ್ಪಿತಾ ಮೋಹಿತೆ, ದೀಪಶ್ರೀ ಹರೀಶ್‍, ಅಶೋಕ್‍ ಹೆಗ್ಡೆ, ರಾಘು ಶಿವಮೊಗ್ಗ, ತನ್ಮಯ ಕಶ್ಯಪ್‍ ಮುಂತಾದವರು ನಟಿಸುತ್ತಿದ್ದಾರೆ. ಹಿರಿಯ ನಟಿ ಅಂಬಿಕಾ ಈ ಧಾರಾವಾಹಿ ಮೂಲಕ ಕಿರುತೆರೆಗೆ ಕಾಲಿಡುತ್ತಿದ್ದಾರೆ.

ಭೂಮಿಕಾ

Recent Posts

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಹಿಷ ದಸರಾಗೆ ಡೇಟ್ ಫಿಕ್ಸ್!

ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…

8 hours ago

ಮೈಸೂರು ದಸರಾ 2026: ಸಿಎಂ ಡಿ.ಕೆ.ಶಿವಕುಮಾರ್‌ಗೆ ಅಧಿಕೃತ ಆಹ್ವಾನ

ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

8 hours ago

ಕಾಡಾನೆಗೆ ಲಾರಿ ಡಿಕ್ಕಿ ಹೊಡೆಸಲು ಯತ್ನ: ಚಾಲಕನಿಗೆ ₹5,000 ದಂಡ

ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…

8 hours ago

ಅಕ್ಟೋಬರ್.‌11ಕ್ಕೆ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ

ಮಂಡ್ಯ: ಇದೇ ಅಕ್ಟೋಬರ್.‌11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…

8 hours ago

ಹನೂರು-ಪಾಲಾರ್ ರಸ್ತೆಯ ಕೌದಳ್ಳಿ ಸೇತುವೆ ಹಾನಿ: ಭಾರಿ ವಾಹನ ಸಂಚಾರಕ್ಕೆ ನಿರ್ಬಂಧ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…

9 hours ago

ಮೈಸೂರಿನಲ್ಲಿ ಯುವಕನ ಬರ್ಬರ ಹತ್ಯೆ..!

ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್‌…

10 hours ago