ಮನರಂಜನೆ

‘ಅರೇರೇ ಯಾರೋ ಇವಳು…’ ಎಂದು ಹುಡುಗಿಯ ಹಿಂದೆ ಹೊರಟ ವಿನಯ್

‘ಅಂದೊಂದಿತ್ತು ಕಾಲ’ ಚಿತ್ರದ ‘ಮುಂಗಾರು ಮಳೆಯಲ್ಲಿ…’ ಎಂಬ ಹಾಡು ಕೆಲವು ದಿನಗಳ ಹಿಂದೆ ಬಿಡುಗಡೆಯಾಗಿದೆ ಮೆಚ್ಚುಗೆ ಪಡೆದಿತ್ತು. ಈಗ ಚಿತ್ರದ ಎರಡನೇ ಹಾಡನ್ನು ಬಿಡುಗಡೆ ಮಾಡಲಾಗಿದೆ.

‘ಅರೆರೆ ಯಾರೋ ಇವಳು …’ ಎಂದು ಸಾಗುವ ಈ ಹಾಡಿಗೆ ಅರಸು ಅಂತಾರೆ ಸಾಹಿತ್ಯ ಬರೆದಿದ್ದು, ವಿನಯ್ ರಾಜಕುಮಾರ್ ಹಾಗೂ ನಿಶಾ ಕಾಣಿಸಿಕೊಂಡಿದ್ದಾರೆ. ನಿಹಾಲ್‍ ತಾರೋ ಧ್ವನಿಯಾಗಿರುವ ಹಾಡಿಗೆ ರಾಘವೇಂದ್ರ ಸಂಗೀತ ಸಂಯೋಜಿಸಿದ್ದಾರೆ. ವಿಶೇಷವೆಂದರೆ, ಈ ಚಿತ್ರದಲ್ಲಿ ವಿನಯ್‍ ರಾಜಕುಮಾರ್‌ 16 ವರ್ಷದ ಯುವಕನ ಗೆಟಪ್‍ನಲ್ಲಿ ಕಾಣಿಸಿಕೊಂಡಿದ್ದಾರೆ.

ಈ ಚಿತ್ರದ ಕುರಿತು ಮಾತನಾಡಿದ ವಿನಯ್‍ ರಾಜಕುಮಾರ್, ‘ಇದು ನನ್ನ ಮೆಚ್ಚಿನ ಗೀತೆ. ನಾನು ನಿರ್ದೇಶಕ ಕೀರ್ತಿಗೆ ಇದನ್ನೇ ಮೊದಲು ಬಿಡುಗಡೆ ಮಾಡಿ ಎಂದಿದ್ದೆ. ಈ ಚಿತ್ರದಲ್ಲಿ ನಾನು 16 ವರ್ಷದ ಹುಡುಗನ ಗೆಟಪ್‍ನಲ್ಲಿ ಕಾಣಿಸಿಕೊಂಡಿದ್ದೇನೆ. ಅದು ನಿಜವಾಗಲೂ ಸವಾಲಾಗಿತ್ತು. ಸಾಕಷ್ಟು ತೂಕ ಕಡಿಮೆ ಮಾಡಿಕೊಂಡು ಕಾಣಿಸಿಕೊಂಡಿದ್ದೇನೆ. ಹಾಡು ತುಂಬಾ ಚೆನ್ನಾಗಿ ಬಂದಿದೆ. ಚಿತ್ರದಲ್ಲಿ ಶಾಲಾ ದಿನಗಳಲ್ಲಿ ಇಷ್ಟಪಟ್ಟ ಹುಡುಗಿಯ ಹಿಂದೆ ಓಡಾಡಿದ್ದೇನೆ. ಆದರೆ, ನಿಜ ಜೀವನದಲ್ಲಿ ಹತ್ತನೇ ತರಗತಿ ಓದುವಾಗ ನಾನು ಬಹಳ ಮುಗ್ಧ ಹುಡುಗ. ಈ ಚಿತ್ರದಲ್ಲಿ ನನ್ನ ಪಾತ್ರಕ್ಕೆ ಮೂರು ಶೇಡ್‍ಗಳಿವೆ. ಸಿನಿಮಾ ಎಲ್ಲರಿಗೂ ಇಷ್ಟವಾಗುತ್ತದೆ ಎಂಬ ನಂಬಿಕೆ ಇದೆ’ ಎಂದರು.

ಈ ಹಾಡಿನಲ್ಲಿ ಶಾಲಾ ವಿದ್ಯಾರ್ಥಿಯಾಗಿ ಕಾಣಿಸಿಕೊಂಡಿರುವ ನಿಶಾ ರವಿಕೃಷ್ಣನ್, ‘ಇದರಲ್ಲಿ ನನ್ನದೊಂದು ಸಣ್ಣ ಪಾತ್ರವಾದರೂ ಬಹಳ ಮುಖ್ಯವಾದ ಪಾತ್ರ. ವಿನಯ್ ರಾಜಕುಮಾರ್ ಜೊತೆ ಅಭಿನಯಿಸಿದ್ದು ಖುಷಿ ತಂದಿದೆ’ ಎಂದರು.

ಭುವನ್ ಮ್ಯೂವಿಸ್ ಬ್ಯಾನರ್ ಅಡಿ ಭುವನ್ ಸುರೇಶ್‍ ನಿರ್ಮಿಸಿರುವ ಈ ಚಿತ್ರದಲ್ಲಿ ವಿನಯ್‍ ರಾಜ್‍ಕುಮಾರ್ ಮತ್ತು ಅದಿತಿ ಜೊತೆಗೆ ನಿಶಾ ರವಿಕೃಷ್ಣನ್, ಜಗ್ಗಪ್ಪ, ಅರುಣಾ ಬಾಲರಾಜ್‍ ಮುಂತಾದವರು ನಟಿಸಿದ್ದು, ರವಿಚಂದ್ರನ್‍ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಕೀರ್ತಿ ಕೃಷ್ಣ ಕಥೆ, ಚಿತ್ರಕಥೆ ಬರೆಯುವುದರ ಜೊತೆಗೆ ನಿರ್ದೇಶನ ಮಾಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಸಂಸದ ಯದುವೀರ್‌ ಒಡೆಯರ್‌ ಭೇಟಿಯಾದ ಪ್ರತಾಪ್‌ ಸಿಂಹ

ಮೈಸೂರು: ಮಾಜಿ ಸಂಸದ ಪ್ರತಾಪ್‌ ಸಿಂಹ ಅವರು ಸಂಸದ ಯದುವೀರ್‌ ಒಡೆಯರ್‌ ಅವರನ್ನು ಭೇಟಿಯಾಗಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು…

6 mins ago

ಜಾತಿ, ಅಸಮಾನತೆ, ಸಂವಿಧಾನದ ಮೌಲ್ಯ ಎತ್ತಿ ಹಿಡಿಯುವ “ಲ್ಯಾಂಡ್ ಲಾರ್ಡ್” ಸಿನಿಮಾ ನೋಡಿ : ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಜಾತಿ, ಅಸಮಾನತೆ, ಸಂವಿಧಾನದ ಮೌಲ್ಯ ಎತ್ತಿ ಹಿಡಿಯುವ "ಲ್ಯಾಂಡ್ ಲಾರ್ಡ್" ಸಿನಿಮಾ ನೋಡಿ ಎಂದು ಸಿಎಂ ಸಿದ್ದರಾಮಯ್ಯ ಕರೆ…

51 mins ago

ಜಮ್ಮು-ಕಾಶ್ಮೀರದಲ್ಲಿ ಭಾರೀ ಹಿಮಪಾತ: ಜನಜೀವನ ಅಸ್ತವ್ಯಸ್ತ

ಶ್ರೀನಗರ: ಕಾಶ್ಮೀರದ ಸುತ್ತಮುತ್ತ ಭಾರೀ ಹಿಮಮಳೆಯಾಗುತ್ತಿದ್ದು, ಜನರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಜಮ್ಮು-ಕಾಶ್ಮೀರದಲ್ಲಿ ಹಲವು ವರ್ಷಗಳ ಬಳಿಕ ಇಷ್ಟೊಂದು ಹಿಮಪಾತವಾಗುತ್ತಿದ್ದು, ಜನಜೀವನ…

1 hour ago

ಪಾಕಿಸ್ತಾನ ಮದುವೆ ಸಮಾರಂಭದಲ್ಲಿ ಆತ್ಮಾಹುತಿ ದಾಳಿ: ಐವರು ಸಾವು

ಪೇಶಾವರ: ಪಾಕಿಸ್ತಾನದ ವಾಯುವ್ಯ ಖೈಬರ್‌ ಪಖ್ತುಂಖ್ವಾ ಪ್ರಾಂತ್ಯದ ಶಾಂತಿ ಸಮಿತಿ ಸದಸ್ಯರ ಮನೆಯಲ್ಲಿ ಶುಕ್ರವಾರ ರಾತ್ರಿ ನಡೆದ ವಿವಾಹ ಸಮಾರಂಭದ…

1 hour ago

ಪೌರಾಯುಕ್ತೆಗೆ ಬೆದರಿಕೆ ಹಾಕಿದ ಪ್ರಕರಣ: ರಾಜೀವ್‌ಗೌಡ ಮನೆಗಳಿಗೆ ನೋಟಿಸ್‌ ಅಂಟಿಸಿದ ಪೊಲೀಸರು

ಬೆಂಗಳೂರು: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ನಿಂದನೆ ಹಾಗೂ ಜೀವ ಬೆದರಿಕೆ ಹಾಕಿರುವ ಕಾಂಗ್ರೆಸ್‌ ಮುಖಂಡ ರಾಜೀವ್‌ ಗೌಡ ಪತ್ತೆಗಾಗಿ ಪೊಲೀಸರು…

2 hours ago

ಓದುಗರ ಪತ್ರ: ಶಾಲಾ ಮಕ್ಕಳ ಬ್ಯಾಗ್ ಹೊರೆ ತಗ್ಗಿಸಿ

ಶಾಲಾ ಮಕ್ಕಳು ಭಾರವಾದ ಪುಸ್ತಕಗಳ ಬ್ಯಾಗ್ ಹೊರಲಾರದೆ ತ್ರಾಸದಿಂದಲೇ ಹೊತ್ತುಕೊಂಡು ನಡೆಯುವ ದೃಶ್ಯ ಈಗ ಎಲ್ಲೆಡೆ ಕಂಡುಬರುತ್ತದೆ. ಬ್ಯಾಗ್‌ನಲ್ಲಿ ಪಠ್ಯ…

5 hours ago