ಇದುವರೆಗೂ ತೆರೆಯ ಮೇಲೆ ಹೆಚ್ಚಾಗಿ ಕ್ಲಾಸ್ ಕಾಣಿಸಿಕೊಂಡಿದ್ದ ರಾಘವೇಂದ್ರ ರಾಜಕುಮಾರ್ ಅವರ ಮಗ ವಿನಯ್ ರಾಜಕುಮಾರ್, ಇದೀಗ ಮಾಸ್ ಹೀರೋ ಆಗುವುದಕ್ಕೆ ಹೊರಟಿದ್ದಾರೆ. ವಿನಯ್ ಇದೀಗ ‘ಪೆಪೆ’ ಎಂಬ ಚಿತ್ರದಲ್ಲಿ ನಟಿಸಿದ್ದು, ಈ ಚಿತ್ರಕ್ಕೆ ಇತ್ತೀಚೆತೆ ಸೆನ್ಸಾರ್ ಮಂಡಳಿಯಿಂದ ‘ಎ’ ಪ್ರಮಾಣಪತ್ರ ಸಿಕ್ಕಿದೆ.
‘ಪೆಪೆ’ ಒಂದು ಆ್ಯಕ್ಷನ್ ಥ್ರಿಲ್ಲರ್ ಚಿತ್ರವಾಗಿದ್ದು, ಸುಮಾರು ಒಂದೂವರೆ ವರ್ಷಗಳ ಹಿಂದೆಯೇ ಚಿತ್ರೀಕರಣ ಮುಗಿದಿತ್ತು. ಇಷ್ಟು ದಿನ ಪೋಸ್ಟ್ ಪ್ರೊಡಕ್ಷನ್ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದ ಚಿತ್ರತಂಡವು, ಇದೀಗ ಚಿತ್ರದ ಮೊದಲ ಕಾಪಿ ತೆಗೆದಿದ್ದು, ಇತ್ತೀಚೆಗೆ ಚಿತ್ರವನ್ನು ಸೆನ್ಸಾರ್ ಮಂಡಳಿಗೆ ತೋರಿಸಿದೆ. ಮಂಡಳಿಯಿಂದ ಚಿತ್ರಕ್ಕೆ ‘ಎ’ ಪ್ರಮಾಣ ಪತ್ರ ಸಿಕ್ಕಿದೆ.
ಹಳ್ಳಿ ಬ್ಯಾಕ್‌ಡ್ರಾಪ್‌ನಲ್ಲಿ ನಡೆಯುವ ಚಿತ್ರ ಇದಾಗಿದ್ದು, ಇದುವರೆಗೂ ಈ ರೀತಿಯ ಪಾತ್ರದಲ್ಲಿ ವಿನಯ್ ಕಾಣಿಸಿಕೊಂಡಿರಲಿಲ್ಲ. ಶ್ರೀಲೇಶ್ ಎಸ್ ನಾಯರ್ ಈ ಚಿತ್ರವನ್ನು ನಿರ್ದೇಶಿಸುವುದರ ಜೊತೆಗೆ ಕಥೆ ಮತ್ತು ಚಿತ್ರಕಥೆಯನ್ನು ಸಹ ರಚಿಸಿದ್ದಾರೆ.
‘ಪೆಪೆ’ ಚಿತ್ರದಲ್ಲಿ ವಿನಯ್‍ಗೆ ನಾಯಕಿಯಾಗಿ ಕಾಜಲ್ ಕುಂದರ್ ನಟಿಸಿದ್ದು, ಮಯೂರ್ ಪಟೇಲ್, ಯಶ್ ಶೆಟ್ಟಿ, ಬಲ ರಾಜವಾಡಿ, ಮೇದಿನಿ ಕೆಳಮನೆ, ಅರುಣಾ ಬಾಲರಾಜ್, ನವೀನ್ ಡಿ. ಪಡೀಲ್ ಮುಂತಾದವರು ನಟಿಸಿದ್ದಾರೆ. ಪೂರ್ಣಚಂದ್ರ ತೇಜಸ್ವಿ ಮತ್ತು ಅಭಿಷೇಕ್ ಕಾಸರಗೋಡು ಛಾಯಾಗ್ರಹಣ ಈ ಚಿತ್ರಕ್ಕಿದೆ.
ಬೆಂಗಳೂರು, ಮೈಸೂರು, ಕೊಡಗು, ಸಕಲೇಶಪುರ ಮುಂತಾದ ಕಡೆ ಚಿತ್ರೀಕರಣವಾಗಿರುವ ‘ಪೆಪೆ’ ಚಿತ್ರವನ್ನು ಉದಯ್ ಸಿನಿ ವೆಂಚರ್, ದೀಪ ಫಿಲ್ಮ್ಸ್ ಬ್ಯಾನರ್‌ನಡಿ ಉದಯ್ ಶಂಕರ್ ಎಸ್ ಹಾಗೂ ಕೋಲಾರದ ಬಿ.ಎಂ. ಶ್ರೀರಾಮ್ ಜೊತೆಯಾಗಿ ನಿರ್ವಹಿಸಿದ್ದಾರೆ.
ವಿನಯ್ ರಾಜಕುಮಾರ್ ಅಭಿನಯದ ‘ಒಂದು ಸರಳ ಪ್ರೇಮಕಥೆ’ ಚಿತ್ರವು ಕೆಲವು ತಿಂಗಳುಗಳ ಹಿಂದೆ ಬಿಡುಗಡೆಯಾಗಿತ್ತು. ಈಗ ‘ಪೆಪೆ’ ಚಿತ್ರವು ಸೆಪ್ಟೆಂಬರ್‍ನಲ್ಲಿ ಬಿಡುಗಡೆಯಾಗುವ ಸಾಧ್ಯತೆ ಇದೆ.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…