ಮನರಂಜನೆ

ಮಾಸ್ ಆದ ವಿನಯ್‍ ರಾಜಕುಮಾರ್, ‘ಪೆಪೆ’ ಚಿತ್ರಕ್ಕೆ ‘ಎ’

ಇದುವರೆಗೂ ತೆರೆಯ ಮೇಲೆ ಹೆಚ್ಚಾಗಿ ಕ್ಲಾಸ್‍ ಕಾಣಿಸಿಕೊಂಡಿದ್ದ ರಾಘವೇಂದ್ರ ರಾಜಕುಮಾರ್‍ ಅವರ ಮಗ ವಿನಯ್‍ ರಾಜಕುಮಾರ್, ಇದೀಗ ಮಾಸ್‍ ಹೀರೋ ಆಗುವುದಕ್ಕೆ ಹೊರಟಿದ್ದಾರೆ. ವಿನಯ್‍ ಇದೀಗ ‘ಪೆಪೆ’ ಎಂಬ ಚಿತ್ರದಲ್ಲಿ ನಟಿಸಿದ್ದು, ಈ ಚಿತ್ರಕ್ಕೆ ಇತ್ತೀಚೆತೆ ಸೆನ್ಸಾರ್‍ ಮಂಡಳಿಯಿಂದ ‘ಎ’ ಪ್ರಮಾಣಪತ್ರ ಸಿಕ್ಕಿದೆ.

‘ಪೆಪೆ’ ಒಂದು ಆ್ಯಕ್ಷನ್‍ ಥ್ರಿಲ್ಲರ್ ಚಿತ್ರವಾಗಿದ್ದು, ಸುಮಾರು ಒಂದೂವರೆ ವರ್ಷಗಳ ಹಿಂದೆಯೇ ಚಿತ್ರೀಕರಣ ಮುಗಿದಿತ್ತು. ಇಷ್ಟು ದಿನ ಪೋಸ್ಟ್ ಪ್ರೊಡಕ್ಷನ್ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದ ಚಿತ್ರತಂಡವು, ಇದೀಗ ಚಿತ್ರದ ಮೊದಲ ಕಾಪಿ ತೆಗೆದಿದ್ದು, ಇತ್ತೀಚೆಗೆ ಚಿತ್ರವನ್ನು ಸೆನ್ಸಾರ್‍ ಮಂಡಳಿಗೆ ತೋರಿಸಿದೆ. ಮಂಡಳಿಯಿಂದ ಚಿತ್ರಕ್ಕೆ ‘ಎ’ ಪ್ರಮಾಣ ಪತ್ರ ಸಿಕ್ಕಿದೆ.

ಹಳ್ಳಿ ಬ್ಯಾಕ್‌ಡ್ರಾಪ್‌ನಲ್ಲಿ ನಡೆಯುವ ಚಿತ್ರ ಇದಾಗಿದ್ದು, ಇದುವರೆಗೂ ಈ ರೀತಿಯ ಪಾತ್ರದಲ್ಲಿ ವಿನಯ್ ಕಾಣಿಸಿಕೊಂಡಿರಲಿಲ್ಲ. ಶ್ರೀಲೇಶ್‍ ಎಸ್ ನಾಯರ್‍ ಈ ಚಿತ್ರವನ್ನು ನಿರ್ದೇಶಿಸುವುದರ ಜೊತೆಗೆ ಕಥೆ ಮತ್ತು ಚಿತ್ರಕಥೆಯನ್ನು ಸಹ ರಚಿಸಿದ್ದಾರೆ.

‘ಪೆಪೆ’ ಚಿತ್ರದಲ್ಲಿ ವಿನಯ್‍ಗೆ ನಾಯಕಿಯಾಗಿ ಕಾಜಲ್‌ ಕುಂದರ್‌ ನಟಿಸಿದ್ದು, ಮಯೂರ್‌ ಪಟೇಲ್‌, ಯಶ್‌ ಶೆಟ್ಟಿ, ಬಲ ರಾಜವಾಡಿ, ಮೇದಿನಿ ಕೆಳಮನೆ, ಅರುಣಾ ಬಾಲರಾಜ್‌, ನವೀನ್‌ ಡಿ. ಪಡೀಲ್‌ ಮುಂತಾದವರು ನಟಿಸಿದ್ದಾರೆ. ಪೂರ್ಣಚಂದ್ರ ತೇಜಸ್ವಿ ಮತ್ತು ಅಭಿಷೇಕ್‍ ಕಾಸರಗೋಡು ಛಾಯಾಗ್ರಹಣ ಈ ಚಿತ್ರಕ್ಕಿದೆ.

ಬೆಂಗಳೂರು, ಮೈಸೂರು, ಕೊಡಗು, ಸಕಲೇಶಪುರ ಮುಂತಾದ ಕಡೆ ಚಿತ್ರೀಕರಣವಾಗಿರುವ ‘ಪೆಪೆ’ ಚಿತ್ರವನ್ನು ಉದಯ್‌ ಸಿನಿ ವೆಂಚರ್‌, ದೀಪ ಫಿಲ್ಮ್ಸ್ ಬ್ಯಾನರ್‌ನಡಿ ಉದಯ್ ಶಂಕರ್ ಎಸ್ ಹಾಗೂ ಕೋಲಾರದ ಬಿ.ಎಂ. ಶ್ರೀರಾಮ್ ಜೊತೆಯಾಗಿ ನಿರ್ವಹಿಸಿದ್ದಾರೆ.

ವಿನಯ್‍ ರಾಜಕುಮಾರ್‍ ಅಭಿನಯದ ‘ಒಂದು ಸರಳ ಪ್ರೇಮಕಥೆ’ ಚಿತ್ರವು ಕೆಲವು ತಿಂಗಳುಗಳ ಹಿಂದೆ ಬಿಡುಗಡೆಯಾಗಿತ್ತು. ಈಗ ‘ಪೆಪೆ’ ಚಿತ್ರವು ಸೆಪ್ಟೆಂಬರ್‍ನಲ್ಲಿ ಬಿಡುಗಡೆಯಾಗುವ ಸಾಧ್ಯತೆ ಇದೆ.

ಭೂಮಿಕಾ

Recent Posts

ಜಗದ ಸೌಹಾರ್ದ ನದಿ ಗಾಂಧಿ

ಪರಶುರಾಮ್, ನಿರ್ದೇಶಕರು, ಒಡನಾಡಿ ಸೇವಾ ಸಂಸ್ಥೆ ಗಾಂಧಿ ವಿಚಾರಗಳನ್ನು ಸಂವಾದದ ಮೂಲಕ ಮುನ್ನಡೆಸಲು ಸಾಧ್ಯವೇ? ಅಥವಾ ಅನುಸರಿಸಲು ಸಾಧ್ಯವಾಗದಿರುವ ನಡೆಯನ್ನು…

13 mins ago

ಗಾಂಧಿಯನ್ನು ಬದುಕಿಸಿ ಬೆಳಗಿಸಿದ ಆಡು ಪಾಡು

ಡಾ.ರಘುಪತಿ, ಚಿನಾಕಳ್ಳಿ ಅದು ೧೯೧೮ರ ಆಸುಪಾಸು. ಒಂದು ಕಡೆ ಖೇಡಾ ಸತ್ಯಾಗ್ರಹದ ಭರಾಟೆಯಲ್ಲಿ ದೇಶ ಮುಳುಗೇಳುತ್ತಿರುತ್ತದೆ.ಇನ್ನೊಂದೆಡೆ ರೌಲತ್ ಕಾಯ್ದೆಯ ಅಮಾನುಷ…

19 mins ago

ಗಾಂಧಿ ಅಭಿಯಾನ ಅರಿವಿನ ಯಾನ

೨೨ ವಾರಗಳ ಗಾಂಧಿ ಅರಿವಿನ ಯಾನ  ಮಹಾತ್ಮ ಗಾಂಧೀಜಿಯವರ ಜೊತೆಗಿನ ನಿಮ್ಮ ‘ಆಂದೋಲನ’ ಪತ್ರಿಕೆಯ ಅರಿವಿನ ಯಾನದ ಈ ವರ್ಷದ ಕೊನೆಯ…

27 mins ago

ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…

21 hours ago

ನಾಡಹಬ್ಬ ಮೈಸೂರು ದಸರಾ: ಸಂಪ್ರದಾಯದಂತೆ ಪ್ರಮೋದಾ ದೇವಿ ಒಡೆಯರ್ ಗೆ ಆಹ್ವಾನ

ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…

21 hours ago