ಬೆಂಗಳೂರು: ಇಂದು (ಜೂನ್.16) ವಿಶ್ವ ಅಪ್ಪಂದಿರ ದಿನ. ಕನ್ನಡದ ಸ್ಟಾರ್ ನಟ ದರ್ಶನ್ ಪುತ್ರ ವಿನೀಶ್ ದರ್ಶನ್ ಅವರು ತಮ್ಮ ತಂದೆ ನೆನೆದು ಭಾವುಕ ಪೋಸ್ಟ್ ಮಾಡಿದ್ದಾರೆ.
ಸದ್ಯ ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪೊಲೀಸರ ವಶದಲ್ಲಿ ತನಿಖೆ ಎದುರಿಸುತ್ತಿರುವ ನಟ ದರ್ಶನ್ ನೆನೆದು ಅವರ ಮಗ ಇನ್ಸ್ಟಾ ಗ್ರಾಂ ನಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡು ಅಪ್ಪಂದಿರ ದಿನದ ಶುಭಾಷಯ ಕೋರಿದ್ದಾರೆ. ಸದ್ಯ ಈ ಪೋಸ್ಟ್ ಭಾರೀ ವೈರಲ್ ಆಗುತ್ತಿದೆ.
ತಮ್ಮ ಇನ್ಸ್ಟಾಗ್ರಾಂ ನಲ್ಲಿ ತಂದೆ ದರ್ಶನ್ ಹಾಗೂ ತಾಯಿ ವಿಜಯಲಕ್ಷ್ಮಿ ಜತೆಗಿನ ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ತಂದೆಗೆ ವಿಷ್ ಮಾಡಿದ್ದಾರೆ ವಿನೀಶ್.
ಇನ್ನು ಆ ಫೋಟೋ ಮೇಲೆ “ಅಪ್ಪಂದಿರ ದಿನದ ಶುಭಾಷಯಗಳು ನಾನು ನಿಮ್ಮನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇನೆ. ನಾನು ನಿಮ್ಮನ್ನು ತುಂಬಾ ಪ್ರೀತಿಸುತ್ತಿದ್ದು, ನನ್ನ ಪಾಲಿಗೆ ಯಾವತ್ತಿಗೂ ನೀವೇ ಹೀರೋ” ಎಂದು ಬರೆದುಕೊಂಡಿದ್ದಾರೆ.
ಸದ್ಯ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅವರನ್ನು ಜೂನ್.20 ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಕೋರ್ಟ್ ಆದೇಶ ಹೊರಡಿಸಿದ್ದು, ಸದ್ಯ ದರ್ಶನ್ ವಚಾರಣೆ ಎದುರಿಸುತ್ತಿದ್ದಾರೆ.
ಮೈಸೂರು : ತಿಬ್ಬಾಸ್ ಗ್ರೂಪ್ ಸಹಯೋಗದೊಂದಿಗೆ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರ ಆವರಣದಲ್ಲಿ ಡಿ.೨೮ರಂದು ‘ಫ್ಯೂಚರ್ ಮಾಡೆಲ್ ಆಫ್ ಇಂಡಿಯಾ’ ಶೀರ್ಷಿಕೆಯಡಿ…
ಮೈಸೂರು : ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ವತಿಯಿಂದ ೬೬/೧೧ ಕೆ.ವಿ ದೊಡ್ಡಕೆರೆ ಮೈದಾನ ವಿದ್ಯುತ್ ವಿತರಣಾ ಕೇಂದ್ರದಲ್ಲಿ…
ಬೆಳಗಾವಿ : ವಿರೋಧ ಪಕ್ಷದವರು ಅಸತ್ಯವನ್ನು ಹೇಳುವುದನ್ನು ಸಾಧ್ಯವಾದಷ್ಟು ನಿಲ್ಲಿಸಿ ವಾಸ್ತವದ ತಳಹದಿಯ ಮೇಲೆ ಟೀಕೆಗಳನ್ನು ಮಾಡಬೇಕು. ಉತ್ತರಗಳನ್ನು ಕೊಡುವಾಗ…
ಬೆಳಗಾವಿ : ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಬೆಳಗಾವಿಯಲ್ಲಿ ಬಿಜೆಪಿ ನಾಯಕರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಸುವರ್ಣ…
ಡಿಸಿ ಶಿಲ್ಪಾನಾಗ್ ಸೂಚನೆ ಮೇರೆಗೆ ಅರಣ್ಯ ಇಲಾಖೆಯ ಸಫಾರಿ ವಾಹನದಲ್ಲಿ ಮಕ್ಕಳನ್ನು ಕರೆತರಲು ಕ್ರಮ ಹನೂರು : ಅಂತೂ ಇಂತೂ…
ಬೆಳಗಾವಿ : ನಾನು ಅಡ್ಜಸ್ಟ್ ಮೆಂಟ್ ರಾಜಕಾರಣಿ ಅಲ್ಲ, ನಿಜವಾದ ವಿರೋಧ ಪಕ್ಷದ ನಾಯಕ ನಾನೇ ಎಂದು ವಿಧಾನಸಭೆ ಕಲಾಪದ…