ಮನರಂಜನೆ

ಮೇ 30 ಅಲ್ಲ, ಜೂನ್ 6 ರಂದು ಬಿಡುಗಡೆಯಾಗಲಿದೆ ‘ಮಾದೇವ’

ವಿನೋದ್‍ ಪ್ರಭಾಕರ್‌ ಅಭಿನಯದ ‘ಮಾದೇವ’ ಚಿತ್ರವು ಮೇ 30ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ಘೋಷಿಸಿತ್ತು. ಚಿತ್ರವು ಇದೀಗ ಒಂದು ವಾರ ಮುಂದಕ್ಕೆ ಹೋಗಿದ್ದು, ಚಿತ್ರವು ಇದೀಗ ಜೂನ್‍ 06ರಂದು ಬಿಡುಗಡೆಯಾಗುತ್ತಿದೆ.

ರಾಧಾಕೃಷ್ಣ ಪಿಕ್ಚರ್ಸ್ ಲಾಂಛನದಲ್ಲಿ ಆರ್ ಕೇಶವ (ದೇವಸಂದ್ರ) ನಿರ್ಮಿಸಿರುವ, ನವೀನ್ ರೆಡ್ಡಿ ನಿರ್ದೇಶನದ ‘ಮಾದೇವ’ ಚಿತ್ರದ ಹೊಸ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಇತ್ತೀಚೆಗೆ ಘೋಷಿಸಿದೆ.

ಈ ಸಂದರ್ಭದಲ್ಲಿ ಮತನಾಡಿದ ನಿರ್ದೇಶಕ ನವೀನ್‍ ರೆಡ್ಡಿ, ‘ಮಾದೇವ’ ಚಿತ್ರ 1980ರ ಕಾಲಘಟ್ಟದಲ್ಲಿ ನಡೆಯುವ ಕಥಾಹಂದರ ಹೊಂದಿರುವ ಚಿತ್ರ. ವಿನೋದ್ ಪ್ರಭಾಕರ್ ಅವರು ಈ ಚಿತ್ರದಲ್ಲಿ ನೇಣಿಗೆ ಹಾಕುವವನ ಪಾತ್ರ ಮಾಡಿದ್ದಾರೆ. ವಿನೋದ್ ಪ್ರಭಾಕರ್ ಅವರಿಗೆ ನಾಯಕಿಯಾಗಿ ಸೋನಾಲ್ ಮೊಂತೆರೊ ಅಭಿನಯಿಸಿದ್ದಾರೆ. ವಿಶೇಷ ಪಾತ್ರದಲ್ಲಿ ಶ್ರೀನಗರ ಕಿಟ್ಟಿ ನಟಿಸಿದ್ದಾರೆ. ಮಾಲಾಶ್ರೀ, ಶೃತಿ, ಅಚ್ಯುತ ಕುಮಾರ್, ಕಾಕ್ರೋಜ್ ಸುಧೀ, ಮೈಕೋ ನಾಗರಾಜ್, ಬಲ ರಾಜ್ವಾಡಿ ಮುಂತಾದವರು ತಾರಾಬಳಗದಲ್ಲಿದ್ದಾರೆ’ ಎಂದರು.

ಕೋವಿಡ್ ಸಮಯದಲ್ಲಿ ವಿನೋದ್‍ಗೆ ನಿರ್ದೇಶಕರು ಕಥೆ ಹೇಳಿದರಂತೆ. ‘ಕಥೆ ಬಹಳ ಇಷ್ಟವಾಯಿತು. ನಿರ್ದೇಶಕರು ಹೇಳಿದ ಹಾಗೆ 80ರ ಕಾಲಘಟ್ಟದ ಕಥೆ. ಹ್ಯಾಂಗ್ ಮ್ಯಾನ್ ಪಾತ್ರದಲ್ಲಿ ನಾನು ಅಭಿನಯಿಸಿದ್ದೇನೆ. ನನಗೆ ತಿಳಿದಿರುವ ಹಾಗೆ ಕನ್ನಡದಲ್ಲಿ ಹ್ಯಾಂಗ್ ಮ್ಯಾನ್ ಕುರಿತಾದ ಕಥೆ ಬಂದಿಲ್ಲ. ನಾನು ಈ ಚಿತ್ರದಲ್ಲಿ ಅಭಿನಯಿಸುವಾಗ ಕೆಲವು ಸನ್ನಿವೇಶಗಳು ನಮ್ಮ ತಂದೆ ಪ್ರಭಾಕರ್ ಅವರ ಅಭಿನಯದ ‘ಜಿದ್ದು’ ಹಾಗೂ ‘ಕರುಳಿನ ಕೂಗು’ ಚಿತ್ರಗಳು ನೆನಪಾದವು. ಚಿತ್ರದಲ್ಲಿ ಮೊದಲು ಮೃಗವಾಗಿರುತ್ತೇನೆ. ನನ್ನ ಜೀವನಕ್ಕೆ ಪಾರ್ವತಿ ಎಂಟ್ರಿ ಕೊಟ್ಟ ನಂತರ ಮನುಷ್ಯನಾಗುತ್ತೇನೆ. ನಂತರ ಕಾರಣಾಂತರಗಳಿಂದ ರಾಕ್ಷಸನಾಗುತ್ತೇನೆ. ಯಾಕೆ, ಏನು ಎಂದು ಗೊತ್ತಾಗಬೇಕಿದ್ದರೆ ಚಿತ್ರ ನೋಡಬೇಕು’ ಎಂದರು.

ಈ ಚಿತ್ರದಲ್ಲಿ ಸೋನಲ್‍, ಪಾರ್ವತಿ ಎಂಬ ಹಳ್ಳಿಹುಡುಗಿಯ ಪಾತ್ರ ಮಾಡಿದ್ದಾರಂತೆ. ‘ರಾಬರ್ಟ್’ ಚಿತ್ರದ ನಂತರ ತಾನು ಹಾಗೂ ವಿನೋದ್‍ ಜೊತೆಯಾಗಿ ನಟಿಸಿದ್ದೇವೆ ಎಂದು ಖುಷಿಪಟ್ಟರು. ಪ್ರದ್ಯೋತನ್ ಸಂಗೀತ, ಬಾಲಕೃಷ್ಣ ತೋಟ ಛಾಯಾಗ್ರಹಣ ಈ ಚಿತ್ರಕ್ಕಿದೆ.

ಆಂದೋಲನ ಡೆಸ್ಕ್

Recent Posts

ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಲು ಯತ್ನಿಸಿದ್ದರು: ಸಿಎಂ ಡಿಕೆಶಿ ಬಾಂಬ್

ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

6 hours ago

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್!

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…

7 hours ago

ಎಸ್‌ಐಆರ್‌ ವಿರುದ್ಧ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…

8 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಮತ್ತೆ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…

8 hours ago

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ನಿಧನ

ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…

11 hours ago

ಓದುಗರ ಪತ್ರ: ಪಿಎಚ್‌ಸಿಗಳಲ್ಲಿ ಬಿಪಿ, ಶುಗರ್ ಮಾತ್ರೆಗಳು ಸಿಗುವಂತೆ ಕ್ರಮ ಕೈಗೊಳ್ಳಿ

ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…

12 hours ago