ಮನರಂಜನೆ

ವಿಷ್ಣು ಸಮಾಧಿ ತೆರವು | ಕಿಚ್ಚ ಸುದೀಪ್‌ ಭಾವುಕ ಪೋಸ್ಟ್‌…

ಬೆಂಗಳೂರು : ಬೆಂಗಳೂರಿನ ಅಭಿಮಾನ್‌ ಸ್ಟುಡಿಯೊದಲ್ಲಿದದ ವಿಷ್ಣುವರ್ಧನ್‌ ಅವರ ಸಮಾಧಿ ತೆರವು ಮಾಡಿರುವ ಕ್ರಮಕ್ಕೆ ನಟ ಕಿಚ್ಚ ಸುದೀಪದ ಅವರು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.

ಈ ಕುರಿತು ತಮ್ಮ ಸಾಮಾಜಿಕ ತಾಣಗಳ ಖಾತೆಗಳಲ್ಲಿ ವಿಡಿಯೋ ಪೋಸ್ಟ್‌ ಹಾಗೂ ಬರವಣಿಗೆ ಪೋಸ್ಟ್‌ ಮಾಡಿರುವ ಅವರು, ಸಮಾಧಿ ತೆರವು ಮಾಡಿರುವುದು ಹೇಡಿತನದ ಕೃತ್ಯ ಎಂದು ತೀವ್ರವಾಗಿ ಖಂಡಿಸಿದ್ದಾರೆ.

ಸಾಹಸ ಸಿಂಹ ವಿಷ್ಣುವರ್ಧನ್ ಅಂದ್ರೆ ಅದು ಎಂದೂ ಮುಗಿಯದ ಒಂದು ಅಭಿಮಾನ, ಗೌರವ. ಮೊನ್ನೆ ರಾತ್ರಿ, ಅವರ ಸ್ಮಾರಕವನ್ನ ಒಡೆದು ಹಾಕಿರುವುದು, ನಾವು ವರ್ಷಾನೂಗಟ್ಟಲೆ ಇಂದ ನಂಬಿ, ಮೊರೆ ಹೋದಂತಹ ಒಂದು ದೇವರ ದೇವಸ್ಥಾನವನ್ನುಒಡೆದು ಹಾಕಿದಾಗ ಎಷ್ಟು ನೋವು ಆಗುತ್ತದೋ, ಅಷ್ಟೇ ನೋವು ಮತ್ತು ಸಂಕಟ ನನಗಾಗಿದೆ ಎಂದು ಬೇಸರಿಸಿದ್ದಾರೆ.

ಇದು ಹೈ ಕೋರ್ಟ್ ಆದೇಶ, ನ್ಯಾಯಾಲಯದ ಆದೇಶ ಅಂತಾರೆ. ಆದ್ರೆ, ಸರ್ಕಾರಗಳ ಮುಖಾಂತರ, ಸರ್ಕಾರದಲ್ಲಿ ಇರುವ ಮಂತ್ರಿಗಳ ಮುಖಾಂತರ, ವಿಷ್ಣು ಸ್ಮಾರಕವನ್ನ ಉಳಿಸಿಕೊಳ್ಳುವುದಕ್ಕೆ ಏನೇನು ಕ್ರಮ ತೆಗೆದುಕೊಳ್ಳಬೇಕು ಅನ್ನುವುದನ್ನ ನಾವು ತುಂಬಾ ಹೋರಾಟ ಮಾಡಿದೆವು. ಸಂಬಂಧ ಪಟ್ಟ ಮಂತ್ರಿಗಳಿಗೆ ಹೇಳಿದೆವು. ಅದಕ್ಕೆ ಹಣ ಕಾಸು ಬೇಕಾ? ಮತ್ತೇನಾದರೂ ಬೇಕಾ? ಎಲ್ಲದಕ್ಕೂ ನಾವು ಸಿದ್ಧರಿದ್ದೀವಿ ಅಂತ ನಾನೇ ಸ್ವತಃ ಹೇಳಿದ್ದೆ. ಆದರೂ ಸರ್ಕಾರ ಇದರ ಬಗ್ಗೆ ಗಮನ ತೆಗೆದುಕೊಳ್ಳಲಿಲ್ಲವೋ, ಅಥವಾ ನ್ಯಾಯಾಲಯಕ್ಕೆ ಸಮಾಧಿ ಮಾಡದೆ, ಭೂಮಿಯಲ್ಲಿ ಹೂಳದೆ, ಚಿತೆ ಇಟ್ಟ ಕಡೆ ಸ್ಮಾರಕ ಅಲ್ಲ, ಆಗಲೇ ಮೈಸೂರಿನಲ್ಲಿ ಒಂದು ಸ್ಮಾರಕ ಇದೆ.

ಅದನ್ನೇ ಅಧಿಕೃತ ಸ್ಮಾರಕವಾಗಿ ಅವರನ್ನ ಗೌರವಿಸುದುದಕ್ಕೆ ಇಟ್ಟುಕೊಳ್ಳಿ ಅಂತ ಮಾಹಿತಿ ನೀಡಿ ಹೈ ಕೋರ್ಟ್ ಕೂಡ ಆದೇಶ ಮಾಡಿದೆ. ನಾವು ನ್ಯಾಯಾಲಯದ ವಿರುದ್ಧ ಮಾತನಾಡಲು ಆಗುವುದಿಲ್ಲ. ಮತ್ತೆ ನ್ಯಾಯಾಲಯಕ್ಕೆ ಹೋಗಿ, ಯಾವ ಸಂಸ್ಥೆ ಅಥವಾ ವ್ಯಕ್ತಿ ಅದನ್ನ ಖರೀದಿ ಮಾಡಿರುವರೋ, ಅವರ ಮನ ಒಲಿಸಿ, ಅವರಿಗೆ ಸಾಹಸ ಸಿಂಹರ ಸ್ಮಾರಕ ಇದ್ದ, ಅಷ್ಟು ಜಾಗವನ್ನಾದರೂ ನಮಗೆ ಉಳಿಸಿ ಕೊಡುವುದಕ್ಕೆ ಮನವಿ ಮಾಡಲು ನಾನು ತಯಾರಿದ್ದೀನಿ. ಸರಕಾರ ಮಧ್ಯ ಪ್ರವೇಶಿಸುವುದರಿಂದ ಇದು ಬಗೆ ಹರಿಯುತ್ತದೆ ಎನ್ನುವುದಾದರೆ, ಸರ್ಕಾರಕ್ಕೂ ಮನವಿ ಮಾಡಲು ತಯಾರಿದ್ದೀನಿ ಎಂದಿದ್ದಾರೆ.

ನಾನು ವಿಷ್ಣುವರ್ಧನ್ ಅವರ ಒಬ್ಬ ಅಭಿಮಾನಿಯಾಗಿ ಮಾತನಾಡುತ್ತಿದೀನಿ. ಕಿಚ್ಚ ಆಗಿ ಅಲ್ಲ. ಅತಿಯಾದ ನೋವಿದೆ. ವಿಷ್ಣುವರ್ಧನ್ ಅವರಿಗೆ ಆಧ್ಯಾತ್ಮದಲ್ಲಿ ಒಲವಿತ್ತು. ಅವರು ಯಾವಾಗಲೂ ಹೇಳುತ್ತಿದ್ದರು- ನಾನು ರೂಪಕ ಆಗಬೇಕು. ಯಾವುದೋ ಕಟ್ಟಡಕ್ಕೆ ಹೋಗಿ ಸೇರಬಾರದು, ಸ್ಥಾವರಗಳಿಗೆ ಉಳಿಯಬಾರದು. ನಾನು ಪಂಚಭೂತಗಳಲ್ಲಿ ಇರಬೇಕು. ನಾವು ನೇಚರ್ ಗೆ ಸಂಬಂಧ ಪಟ್ಟವರು ಅಂತ. ಒಂದು ಲೆಕ್ಕದಲ್ಲಿ ಅವರ ಇನ್ನೊಂದು ಆಸೆ ಈಡೇರಿದಂತೆ ಅನಿಸುತಿದೆ.

ಆದ್ರೆ, ಇದು ನಾವು ಎಲ್ಲ ಸಾಮಾನ್ಯ ಅಭಿಮಾನಿಗಳಿಗೆ, ಜನರಿಗೆ ಅರ್ಥ ಆಗುವುದಿಲ್ಲ. ಪೋಸ್ಟ್ ಹಾಕಲು ಹೇಗೆ ಒಂದು ಪೋಸ್ಟ್ ಬಾಕ್ಸ್ ಬೇಕೋ, ಹಾಗೆ ನಾವು ಗೌರವ ಸಲ್ಲಿಸಲು, ಪೂಜೆ ಮಾಡಲು ಒಂದು ದೇವಸ್ಥಾನ ಬೇಕು, ಸ್ಮಾರಕ ಬೇಕು. ವಿಷ್ಣುವರ್ಧನ್ ಅಂತಹ ಒಬ್ಬ ಮೇರೂ ನಟರಿಗೆ, ಬೆಂಗಳೂರಿನಂತಹ ಒಂದು ರಾಜಧಾನಿಯಲ್ಲಿ, ಒಂದು ಅರ್ಧ ಎಕರೆ ಜಾಗ ಕೊಡಲಿಲ್ಲ, ಅವರ ಹೆಸರಿನಲ್ಲಿ, ಒಂದು ಪ್ರಾರ್ಥನೆ ಮಾಡಲು, ಅವರನ್ನು ನೋಡಲು, ಅವರ ಜನ್ಮ ದಿನ ಆಚರಿಸಲು, ನಮ್ಮ ಬಳಿ ಒಂದು ಜಾಗ ಇಲ್ಲ ಅಂದರೆ, ಇದು ಅತ್ಯಂತ ಖಂಡನೀಯ ವಿಷಯ. ನಾನು ಕೇಳ್ಪಟ್ಟೆ, ಬಾಲಕೃಷ್ಣ ಅಂತಹ ಹಿರಿಯ ನಟರ ಸಮಾಧಿಯನ್ನು ಕೂಡ ಒಡೆದು ಹಾಕಿದ್ದಾರೆ. ಅಲ್ಲಿದಂತಹ ಒಂದು ಗಣಪತಿ ದೇವಸ್ಥಾನವೂ ಈಗಲ್ಲಿ ಇಲ್ಲ. ವಿಷ್ಣು ಅವರ ಸ್ಮಾರಕ ಕೂಡ ಅಲ್ಲಿ ಇಲ್ಲ ಅಂದರೆ ಏನು ಅರ್ಥ? ಮನುಷ್ಯನ ಭಾವನೆಗಳಿಗಿಂತ, ಗೌರವಕ್ಕಿಂತ, ಅಭಿಮಾನಕ್ಕಿಂತ, ಈ ಒಂದು ಭೂಮಿ ವ್ಯವಹಾರ ಅಷ್ಟು ದೊಡ್ಡದಾಯಿತಾ? ಹಣ ನಮಗೆ ಅಷ್ಟು ಮುಖ್ಯ ಅಲ್ಲ.

ಸರ್ಕಾರ ಮಧ್ಯ ಪ್ರವೇಶ ಮಾಡಬೇಕು. ಇದು ನನ್ನ ವಿನಂತಿ. ನ್ಯಾಯಾಲಯಕ್ಕೆ ಹೋಗುವುದಾದರೆ, ನಾನೂ ಬರಲು ಸಿದ್ಧ. ಸರ್ಕಾರ, ನ್ಯಾಯಾಲಯ ಮತ್ತು ಆ ಭೂಮಿ ಖರೀದಿ ಮಾಡಿರುವವರಲ್ಲಿ ನನ್ನದೊಂದು ಮನವಿ- ನಿಮಗೆ ಏನು ಹಣಕಾಸು ಬೇಕೋ, ಅದನ್ನು ಕೊಡಲು ನಾನು ಮತ್ತು ನನ್ನಂತಹ ಲಕ್ಷಾಂತರ ಜನರು ಮುಂದೆ ಬರುತ್ತೇವೆ. ನಾನೇ ಮುಂದೆ ನಿಂತು ಅದನ್ನು ಮತ್ತೆ ಒಂದು ಸ್ಮಾರಕವಾಗಿ ಮರುಸ್ಥಾಪನೆ ಮಾಡುವುದಕ್ಕೆ ಮುಂದಾಗಿತ್ತೇನೆ. ಅದಕ್ಕೆಒಂದು ಅವಕಾಶ ಮಾಡಿ ಕೊಡಿ. ಅವರು ನಮ್ಮ ಎದೆಯ ಒಳಗೆ ಸದಾ ಇರುತ್ತಾರೆ ನಿಜ. ಹಾಗಂತ ಪ್ರಾರ್ಥನೆ, ಗೌರವಕ್ಕೆ ಸಂಕೇತವಾಗಿ ಒಂದು ಸ್ಥಳ ಬೇಕು. ಆ ಪ್ರೀತಿಗೆ, ಪ್ರೇಮಕ್ಕೆ, ಅಭಿಮಾನಕ್ಕೆ ದ್ರೋಹ ಮಾಡಬೇಡಿ ಅಂತ ನಾನು ವಿನಂತಿ ಮಾಡುತ್ತೇನೆ ಎಂದು ಸುದೀರ್ಘ ಬರವಣಿಗೆ ಮೂಲಕ ತಮ್ಮ ಬೇಸರ ವ್ಯಕ್ತಪಡಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಸಿಎಂಗೆ ವಿದ್ಯಾರ್ಥಿಗಳ ಪತ್ರ

ಮಹಾದೇಶ್ ಎಂ ಗೌಡ ಹನೂರು: ತಮ್ಮ ಊರಿನಿಂದ ದೂರದಲ್ಲಿರುವ ಶಾಲಾ ಕಾಲೇಜುಗಳಿಗೆ ಹೋಗುವುದಕ್ಕೆ ಸಮರ್ಪಕವಾಗಿ ಬಸ್ ಸೌಲಭ್ಯ ಕಲ್ಪಿಸಲು ಕೋರಿ…

35 mins ago

ದಿವ್ಯ ಎಂಬ ಅಂದಿನ ಕಾಲದ ಪಣ ಪರೀಕ್ಷೆ

ಬಿ.ಎಸ್.ವಿನಯ್ ಮೊನ್ನೆ ಯಳಂದೂರಿನ ಬೀದಿಯಲ್ಲಿ ಸಾಗುತ್ತಿದ್ದಾಗ ಬಳೆಮಂಟಪದ ಮುಂದೆ ಪರಿಚಿತ ಹಿರಿಯರೊಬ್ಬರು ಎದುರಾದರು. ‘ಯಜಮಾನರೇ, ಕಾರ್ಯಕ್ರಮಕ್ಕೆ ಯಾಕೆ ಬರಲಿಲ್ಲ?’ ಕೇಳಿದರೆ…

41 mins ago

ಎಮ್ಮೆ ನಿನಗೆ ಸಾಟಿ ಇಲ್ಲ…

ವಿನುತ ಕೋರಮಂಗಲ ನಮ್ಮ ಹಟ್ಟಿಯಿಂದ ನಾಲ್ಕೈದು ಕಿ.ಮೀ. ದೂರವಿರುವ ನಮ್ಮೂರಿನ ಕೆರೆಯ ಅಂಗಳಕ್ಕೆ ನಾವೇನು ನಡೆದುಕೊಂಡು ಹೋಗುತ್ತಿರಲಿಲ್ಲ. ಗಂಗೆ ಎಂದು…

45 mins ago

ಭಾನುವಾರದ ಪುರವಣಿಗಳಲ್ಲಿ ಸಾಹಿತ್ಯ ಯಾಕೆ ಮಾಯ?

ಅಕ್ಷತಾ ಖಾಲಿ ಹಾಳೆಯ ಒಂದೇ ಮಗ್ಗುಲಿನಲ್ಲಿ ಚಿತ್ತಿಲ್ಲದಂತೆ ಬರೆದು, ಪದ ಮಿತಿಯನ್ನು ಬೆರಳು ಲೆಕ್ಕದಲ್ಲಿ ಎಣಿಸಿ, ಪತ್ರಿಕೆಯ ವಿಳಾಸಕ್ಕೆ ಕಳುಹಿಸಿದ…

49 mins ago

ಹನೂರು: ಏಕಕಾಲದಲ್ಲೇ ಕಾಣಿಸಿಕೊಂಡ ಎರಡು ಚಿರತೆಗಳು

ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…

12 hours ago