ಬೆಂಗಳೂರು: ಬಿಗ್‌ಬಾಸ್-12 ರಿಯಾಲಿಟಿ ಶೋನಲ್ಲಿ ರಣಹದ್ದುಗಳ ಬಗ್ಗೆ ನಟ ಕಿಚ್ಚ ಸುದೀಪ್ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಲಾಗಿದ್ದು, ಈ ಸಂಬಂಧ ರಣಹದ್ದು ಸಂರಕ್ಷಣಾ ಟ್ರಸ್ಟ್ ಡಿಎಫ್‌ಒಗೆ ದೂರು ನೀಡಿದೆ.
ರಣಹದ್ದುಗಳ ಬಗ್ಗೆ ನಟ ಕಿಚ್ಚ ಸುದೀಪ್ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ. ಹೊಂಚು ಹಾಕಿ ಸಂಚು ಮಾಡಿ ಹಿಡಿಯುವುದು ಎಂಬ ಪದ ಬಳಕೆ ಮಾಡಿದ್ದಾರೆ. ಸುದೀಪ್ ಈ ಪದ ಬಳಕೆ ಮಾಡಿದ್ದು ತಪ್ಪು. ಈ ಬಗ್ಗೆ ಪ್ರೇಕ್ಷಕರಿಗೆ ನಟ ಸುದೀಪ್ ಕ್ಲಾರಿಟಿ ಕೊಡಬೇಕು. ಸರಿಯಾದ ವಿವರಣೆ ಕೊಡಲಿ ಎಂದು ಕರ್ನಾಟಕ ರಣಹದ್ದು ಸಂರಕ್ಷಣಾ ಟ್ರಸ್ಟ್ ಆಗ್ರಹಿಸಿದೆ.
ರಣಹದ್ದು ಯಾವಾಗಲೂ ಜೀವಂತ ಪ್ರಾಣಿಗಳನ್ನು ಬೇಟೆಯಾಡಲ್ಲ. ಸತ್ತ ಪ್ರಾಣಿಗಳನ್ನು ತಿನ್ನುತ್ತದೆ. ಈ ಮೂಲಕ ಪರಿಸರವನ್ನು ಕ್ಲೀನ್ ಮಾಡುವ ಕೆಲಸ ಮಾಡುತ್ತದೆ. ಆದರೆ ಸುದೀಪ್ ಅವರು ಬಿಗ್‌ಬಾಸ್ ಶೋನಲ್ಲಿ ರಣಹದ್ದು ಹೊಂಚು ಹಾಕಿ ಸಂಚು ಮಾಡಿ ಹಿಡಿಯುತ್ತದೆ ಎಂದು ಹೇಳಿಕೆ ನೀಡಿದ್ದಾರೆ. ಸುದೀಪ್ ಹೇಳಿದ ಹಾಗೆ ಹದ್ದು ಆ ತರಹದ ಪಕ್ಷಿಯಲ್ಲ. ಸುದೀಪ್ ವೀಕ್ಷಕರಿಗೆ ಸರಿಯಾದ ರೀತಿಯಲ್ಲಿ ಅರ್ಥೈಸಬೇಕು ಎಂದು ದೂರಿನಲ್ಲಿ ಆಗ್ರಹಿಸಲಾಗಿದೆ.





