ಮನರಂಜನೆ

ಕಿಚ್ಚ ಸುದೀಪ್‌ ವಿರುದ್ಧ ರಣಹದ್ದು ಸಂರಕ್ಷಣಾ ಟ್ರಸ್ಟ್‌ ದೂರು: ಕಾರಣ ಇಷ್ಟೇ.!

ಬೆಂಗಳೂರು: ಬಿಗ್‌ಬಾಸ್-‌12 ರಿಯಾಲಿಟಿ ಶೋನಲ್ಲಿ ರಣಹದ್ದುಗಳ ಬಗ್ಗೆ ನಟ ಕಿಚ್ಚ ಸುದೀಪ್‌ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಲಾಗಿದ್ದು, ಈ ಸಂಬಂಧ ರಣಹದ್ದು ಸಂರಕ್ಷಣಾ ಟ್ರಸ್ಟ್‌ ಡಿಎಫ್‌ಒಗೆ ದೂರು ನೀಡಿದೆ.

ರಣಹದ್ದುಗಳ ಬಗ್ಗೆ ನಟ ಕಿಚ್ಚ ಸುದೀಪ್‌ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ. ಹೊಂಚು ಹಾಕಿ ಸಂಚು ಮಾಡಿ ಹಿಡಿಯುವುದು ಎಂಬ ಪದ ಬಳಕೆ ಮಾಡಿದ್ದಾರೆ. ಸುದೀಪ್‌ ಈ ಪದ ಬಳಕೆ ಮಾಡಿದ್ದು ತಪ್ಪು. ಈ ಬಗ್ಗೆ ಪ್ರೇಕ್ಷಕರಿಗೆ ನಟ ಸುದೀಪ್‌ ಕ್ಲಾರಿಟಿ ಕೊಡಬೇಕು. ಸರಿಯಾದ ವಿವರಣೆ ಕೊಡಲಿ ಎಂದು ಕರ್ನಾಟಕ ರಣಹದ್ದು ಸಂರಕ್ಷಣಾ ಟ್ರಸ್ಟ್‌ ಆಗ್ರಹಿಸಿದೆ.

ರಣಹದ್ದು ಯಾವಾಗಲೂ ಜೀವಂತ ಪ್ರಾಣಿಗಳನ್ನು ಬೇಟೆಯಾಡಲ್ಲ. ಸತ್ತ ಪ್ರಾಣಿಗಳನ್ನು ತಿನ್ನುತ್ತದೆ. ಈ ಮೂಲಕ ಪರಿಸರವನ್ನು ಕ್ಲೀನ್‌ ಮಾಡುವ ಕೆಲಸ ಮಾಡುತ್ತದೆ. ಆದರೆ ಸುದೀಪ್‌ ಅವರು ಬಿಗ್‌ಬಾಸ್ ಶೋನಲ್ಲಿ ರಣಹದ್ದು ಹೊಂಚು ಹಾಕಿ ಸಂಚು ಮಾಡಿ ಹಿಡಿಯುತ್ತದೆ ಎಂದು ಹೇಳಿಕೆ ನೀಡಿದ್ದಾರೆ. ಸುದೀಪ್‌ ಹೇಳಿದ ಹಾಗೆ ಹದ್ದು ಆ ತರಹದ ಪಕ್ಷಿಯಲ್ಲ. ಸುದೀಪ್‌ ವೀಕ್ಷಕರಿಗೆ ಸರಿಯಾದ ರೀತಿಯಲ್ಲಿ ಅರ್ಥೈಸಬೇಕು ಎಂದು ದೂರಿನಲ್ಲಿ ಆಗ್ರಹಿಸಲಾಗಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಬೆಂಗಳೂರಿನಲ್ಲಿ ಸಿಸಿಬಿ ಭರ್ಜರಿ ಕಾರ್ಯಾಚರಣೆ: 10 ಕೋಟಿ ಮೌಲ್ಯದ ಡ್ರಗ್ಸ್‌ ಜಪ್ತಿ

ಬೆಂಗಳೂರು: ಸಿಲಿಕಾನ್‌ ಸಿಟಿಯಲ್ಲಿ ಸಿಸಿಬಿ ನಾರ್ಕೋಟಿಕ್ಸ್‌ ವಿಭಾಗದ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಬರೋಬ್ಬರಿ 10 ಕೋಟಿ ರೂಪಾಯಿ ಮೌಲ್ಯದ…

1 hour ago

ಯುದ್ಧಕ್ಕೆ ನಾವು ಸದಾ ಸಿದ್ಧ: ಡೊನಾಲ್ಡ್‌ ಟ್ರಂಪ್‌ ಎಚ್ಚರಿಕೆ

ವಾಷಿಂಗ್ಟನ್:‌ ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಶತ್ರು ರಾಷ್ಟ್ರಗಳಿಗೆ ಖಡಕ್‌ ಎಚ್ಚರಿಕೆ ನೀಡಿದ್ದಾರೆ. ಅಮೇರಿಕಾದ ಬಳಿ ಮುಗಿಯದ ಶಸ್ತ್ರಾಸ್ತ್ರಗಳ ಬೃಹತ್‌…

2 hours ago

ಕಾವೇರಿ ನದಿ ದಡದಲ್ಲಿ ತ್ಯಾಜ್ಯದ ರಾಶಿ..!

ತವರಿನಲ್ಲೇ ಕಣ್ಣೀರಿಡುತ್ತಿರುವ ಜೀವನದಿ; ಸ್ವಚ್ಛತೆಗೆ ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ಹೋರಾಟದ ಎಚ್ಚರಿಕೆ ಕೃಷ್ಣ ಸಿದ್ದಾಪುರ ಸಿದ್ದಾಪುರ: ಕೋಟ್ಯಾಂತರ ಜನರ ಜೀವನಾಡಿಯಾಗಿರುವ…

2 hours ago

ಇಂದು ರಕ್ತ ಚಂದ್ರಗ್ರಹಣ: ದೇವಾಲಯಗಳಲ್ಲಿ ವಿಶೇಷ ಪೂಜೆ, ಪುನಸ್ಕಾರ

ಬೆಂಗಳೂರು: ಇಂದು ನಭೋ ಮಂಡಲ ಚಂದ್ರಗ್ರಹಣದ ಕೌತುಕಕ್ಕೆ ಸಾಕ್ಷಿಯಾಗಲಿದೆ. ಈ ರಕ್ತ ಚಂದ್ರಗ್ರಹಣ ಇಂದು ಮಧ್ಯಾಹ್ನ ಆರಂಭವಾಗಿ ಸಂಜೆ ವೇಳೆಗೆ…

3 hours ago

ಸಾಲೂರು ಶ್ರೀ ರಚಿಸಿದ್ದ ಮಹಾಪ್ರಬಂಧಕ್ಕೆ ಸಂಸ್ಕೃತ ಗ್ರಂಥ ಪುರಸ್ಕಾರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದ ಸಾಲೂರು ಬೃಹನ್ಮಠದ ಪೀಠಾಧಿಪತಿ ಡಾ.ಶ್ರೀ ಶಾಂತಮಲ್ಲಿಕಾರ್ಜುನ…

4 hours ago

ಹನೂರು: ಕಾಡಂಚಿನ ಗ್ರಾಮಗಳಿಗೆ ಮೂಲ ಸೌಕರ್ಯ ಕಲ್ಪಿಸಲು ಕ್ರಮ: ಜಿಲ್ಲಾಧಿಕಾರಿ ಶ್ರೀರೂಪ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಡಂಚಿನ ಗ್ರಾಮಗಳಿಗೆ…

4 hours ago