ವಯನಾಡು: ಕೇರಳದ ವಯನಾಡು ಭೂಕುಸಿತ ದುರಂತ ಪ್ರಕರಣದಲ್ಲಿ ಸಂಕಷ್ಟದಲ್ಲಿರುವ ಸಂತ್ರಸ್ತರ ಸಹಾಯಕ್ಕೆ ಡಾರ್ಲಿಂಗ್ ಪ್ರಭಾಸ್ ನೆರವಾಗಿದ್ದಾರೆ.
ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೀಕರ ಭೂಕುಸಿತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 400ಕ್ಕೆ ದಾಟಿದ್ದು, ಸಂಕಷ್ಟದಲ್ಲಿರುವ ಸಂತ್ರಸ್ತರಿಗೆ ಡಾರ್ಲಿಂಗ್ ಪ್ರಭಾಸ್ 2 ಕೋಟಿ ರೂಪಾಯಿ ದೇಣಿಗೆ ನೀಡಿದ್ದಾರೆ.
ಕೇರಳ ಸಿಎಂ ಪರಿಹಾರ ನಿಧಿಗೆ 2 ಕೋಟಿ ರೂಪಾಯಿ ದೇಣಿಗೆ ನೀಡುವ ಮೂಲಕ ನಟ ಪ್ರಭಾಸ್ ಮಾನವೀಯತೆ ಮೆರೆದಿದ್ದಾರೆ.
ವಯನಾಡು ಭೂಕುಸಿತ ದುರಂತ ಸಂಭವಿಸಿದ ಹಿನ್ನೆಲೆಯಲ್ಲಿ ಸೂರ್ಯ ದಂಪತಿ, ರಶ್ಮಿಕಾ ಮಂದಣ್ಣ, ಮೆಗಾಸ್ಟಾರ್ ಚಿರಂಜೀವಿ, ಅಲ್ಲು ಅರ್ಜುನ್ ಸೇರಿದಂತೆ ಹಲವರು ದೇಣಿಗೆ ನೀಡಿದ್ದರು. ಈಗ ಡಾರ್ಲಿಂಗ್ ಪ್ರಭಾಸ್ 2 ಕೋಟಿ ದೇಣಿಗೆ ನೀಡಿದ್ದು, ಸಂತ್ರಸ್ತರ ಬಾಳಿಗೆ ಬೆಳಕಾಗಿದ್ದಾರೆ.
ಇನ್ನು ವಯನಾಡು ದುರಂತದಲ್ಲಿ 400ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದು, 200ಕ್ಕೂ ಹೆಚ್ಚು ಜನರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ಈ ಹಿನ್ನೆಲೆಯಲ್ಲಿ ಘಟನಾ ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರಿದಿದ್ದು, ಕಾರ್ಯಾಚರಣೆಗೆ ಪದೇ ಪದೇ ಮಳೆಯೂ ಕೂಡ ಅಡ್ಡಿಪಡಿಸುತ್ತಿದೆ.
ಆದರೂ ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರಿಸಲಾಗಿದ್ದು, ಶವಗಳು ಪತ್ತೆಯಾಗುತ್ತಲೇ ಇವೆ.
ಬೆಂಗಳೂರು: ನಾಯಕತ್ವ ಬದಲಾವಣೆ ಗೊಂದಲ, ಸರ್ಕಾರದಲ್ಲಿ ಶೇಕಡಾ.63 ರ್ಷಟು ಕಮಿಷನ್ ಕುರಿತು ಉಪಲೋಕಾಯುಕ್ತರ ಹೇಳಿಕೆ, ವಿವಿಧ ಇಲಾಖೆಗಳಲ್ಲಿ ನಡೆದಿರುವ ಭ್ರಷ್ಟಾಚಾರ…
ರಾಜ್ಯದಲ್ಲಿ ರಿಯಲ್ ಎಸ್ಟೇಟ್ ಉದ್ಯಮ ಗರಿಗೆದರಿದ ಬಳಿಕ ಅಲ್ಲಲ್ಲಿ ಕೆರೆ-ಕಟ್ಟೆ, ಸರ್ಕಾರಿ ಜಾಗಗಳ ಒತ್ತುವರಿ ಪ್ರಕರಣ ಮೇಲಿಂದ ಮೇಲೆ ಭಾರೀ…
ಕಾಂಗ್ರೆಸ್ನಲ್ಲಿ ನಡೆಯುತ್ತಿರುವ ವಿದ್ಯಮಾನಗಳಿಗೆ ಕಾರಣವಾಯಿತೇ ಹೈಕಮಾಂಡ್ ಮೌನ? ರಾಜ್ಯ ಕಾಂಗ್ರೆಸ್ನಲ್ಲಿ ಮುಂದುವರಿದಿರುವ ಗೊಂದಲ ಬಿಜೆಪಿ ಮತ್ತು ಜಾ.ದಳ ಪಾಳೆಯಗಳ ಆತ್ಮವಿಶ್ವಾಸ…
ಏ.೨ರಿಂದ ೨೮ ದಿನಗಳ ಕಾಲ ನಡೆಯಲಿರುವ ಪಂದ್ಯಾವಳಿ; ೩೦೦ಕ್ಕೂ ಅಧಿಕ ತಂಡಗಳು ಪಾಲ್ಗೊಳ್ಳುವ ನಿರೀಕ್ಷೆ ಮಡಿಕೇರಿ:ಕೊಡವ ಕ್ರಿಕೆಟ್ ಅಕಾಡೆಮಿ ಸಹಯೋಗದಲ್ಲಿ…
ಮೈಸೂರು: ನಗರದ ಹೊರವಲಯದ ನಾಲ್ಕು ದಿಕ್ಕುಗಳಲ್ಲಿರುವ ಹಲವು ಪ್ರದೇಶಗಳನ್ನು ಸೇರಿಸಿ ಗ್ರೇಡ್- ೧ ಮೈಸೂರು ಮಹಾನಗರ ಪಾಲಿಕೆಯನ್ನಾಗಿ ರಚಿಸಲು ರಾಜ್ಯಸರ್ಕಾರ…
ಮಂಜು ಕೋಟೆ ಕುರುಬ ಸಮಾಜದ ಎರಡು ಬಣಗಳ ನಡುವೆ ಉಂಟಾಗಿದ್ದ ಗೊಂದಲ; ಸಿಎಂ ಸಿದ್ದರಾಮಯ್ಯ ಸೂಚನೆಯಂತೆ ಕ್ರಮ ಎಚ್.ಡಿ.ಕೋಟೆ: ಮುಖ್ಯಮಂತ್ರಿ…