ಬೆಂಗಳೂರು: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಗೀತಾ ಶಿವರಾಜ್‌ಕುಮಾರ್ ಸ್ಪರ್ಧಿಸುತ್ತಿದ್ದಾರೆ. ನಟ ಶಿವರಾಜ್‌ಕುಮಾರ್ ತಮ್ಮ ಪತ್ನಿ ಪರ ಪ್ರಚಾರ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದು, ಈ ನಡೆ ವಿರುದ್ಧ ಕೂಗು ಕೇಳಿಬಂದಿತ್ತು.
ಶಿವರಾಜ್‌ಕುಮಾರ್ ನಟನೆಯ ಯಾವುದೇ ಚಿತ್ರಗಳು ಹಾಗೂ ಜಾಹೀರಾತುಗಳನ್ನು ದೂರದರ್ಶನ ಹಾಗೂ ಚಿತ್ರಮಂದಿರಗಳಲ್ಲಿ ಪ್ರದರ್ಶಿಸಬಾರದು ಮತ್ತು ದಿನಪತ್ರಿಕೆಗಳಲ್ಲಿಯೂ ಸಹ ಶಿವರಾಜ್‌ಕುಮಾರ್ ಇರುವ ಜಾಹೀರಾತುಗಳನ್ನು ಬಳಸಬಾರದಂತೆ ನಿಷೇಧ ಹೇರಿ ಎಂದು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷ ಕೌಟಿಲ್ಯ ರಘು ಚುನಾವಣಾ ಆಯೋಗಕ್ಕೆ ಪತ್ರ ಬರೆಯುವ ಮೂಲಕ ಮನವಿ ಮಾಡಿಕೊಂಡಿದ್ದರು.
ಈ ಮನವಿಗೆ ಸ್ಪಂದಿಸಿರುವ ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಶಿವರಾಜ್‌ಕುಮಾರ್ ಸಿನಿಮಾಗಳ ಮೇಲೆ ನಿಷೇಧ ಹೇರುವುದು ಸಾಧ್ಯವಿಲ್ಲ ಎಂದಿದ್ದಾರೆ. “ಚುನಾವಣೆಗೆ ಸ್ಪರ್ಧಿಸುವ ಅಥವಾ ಚುನಾವಣಾ ಪ್ರಚಾರದಲ್ಲಿ ಭಾಗವಹಿಸುವ ಕಲಾವಿದರ ಚಿತ್ರಗಳ ಪ್ರದರ್ಶನವನ್ನು ಸರ್ಕಾರದ ಹಣದಿಂದ ನಡೆಸಲ್ಪಡುವ ದೂರದರ್ಶನದಲ್ಲಿ ಮಾತ್ರ ನಾವು ನಿಷೇಧಿಸಬಹುದು. ಖಾಸಗಿ ಟಿವಿ ಚಾನೆಲ್‌ಗಳು ಮತ್ತು ಚಿತ್ರಮಂದಿರಗಳಲ್ಲಿ ವಾಣಿಜ್ಯ ಪ್ರದರ್ಶನಗಳನ್ನು ನಿಲ್ಲಿಸಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.
ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರು…
ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು, ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ಹುದ್ದೆಯ ನೇಮಕಾತಿಗೂ ಜಾಹೀರಾತು…
ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…
ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದ ಚಿಕ್ಕ…
ಲಕ್ನೋ: ಆಕರ್ಷಣೀಯ ಪ್ರವಾಸಿತಾಣಗಳ ಪಟ್ಟಿಯಲ್ಲಿ ಅಯೋಧ್ಯೆ ರಾಮಮಂದಿರವು ತಾಜ್‌ಮಹಲನ್ನು ಹಿಂದಿಕ್ಕಿ ನಂಬರ್ ಒನ್ ಪಟ್ಟ ಪಡೆದಿದೆ. ಈ ಮೂಲಕ ಈಗ…
ಚಿಕ್ಕಬಳ್ಳಾಪುರ: ನಂದಿಗಿರಿಧಾಮದಲ್ಲಿ ಹೊ ವರ್ಷಾಚರಣೆಗೆ ಬ್ರೇಕ್ ನೀಡಲಾಗಿದ್ದು, ಪ್ರವಾಸಿಗರಿಗೆ ಬಿಗ್ ಶಾಕ್ ಎದುರಾಗಿದೆ. ಪ್ರಕೃತಿ ಮಡಿಲಿನಲ್ಲಿ ಕುಣಿಸು ಕುಪ್ಪಳಿಸಿ ಹೊಸ…