Mysore
24
haze

Social Media

ಶನಿವಾರ, 20 ಡಿಸೆಂಬರ್ 2025
Light
Dark

ಹೆಣ್ಣು ಮಕ್ಳಳ ತುಚ್ಚೀಕರಣವನ್ನು ನಮ್ಮ ಸರ್ಕಾರ ಸಹಿಸಲ್ಲ: ಸಿಎಂ ಸಿದ್ದರಾಮಯ್ಯ

ಐಪಿಎಲ್‌ನಲ್ಲಿ ಆರ್‌ಸಿಬಿ ಸೋಲಿಗೆ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರೇ ಕಾರಣ ಎಂದು ಸೋಷಿಯಲ್ ಮೀಡಿಯಾಗಳಲ್ಲಿ ಕೆಲವು ದುಷ್ಕರ್ಮಿಗಳು ಅವಾಚ್ಯವಾಗಿ ನಿಂದಿಸಿರುವ ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ಹೆಣ್ಣುಮಕ್ಕಳ ತುಚ್ಛೀಕರಣವನ್ನು ನಮ್ಮ ಸರ್ಕಾರ ಖಂಡಿತ ಸಹಿಸುವುದಿಲ್ಲ. ಇದಕ್ಕೆ ಕಾರಣಕರ್ತರಾದ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಈ ಬಗ್ಗೆ ‘ಎಕ್ಸ್‌’ನಲ್ಲಿ ಪೋಸ್ಟ್‌ ಹಾಕಿರುವ ಅವರು, ಹೆಣ್ಣಿಗೆ ಸ್ವಾತಂತ್ರ್ಯವನ್ನು ನಿರಾಕರಿಸಿ ಗುಲಾಮಳನ್ನಾಗಿ ಮಾಡಿ ಮನೆಯೊಳಗೆ ಕೂರಿಸಿದ ಮನುವಾದದ ಸಂಕೋಲೆಯನ್ನು ಮಹಿಳೆಯರೇ ಕಿತ್ತುಹಾಕಿ ಸ್ವತಂತ್ರರಾಗುತ್ತಿದ್ದಾರೆ. ಸಂವಿಧಾನದತ್ತ ಸ್ವಾತಂತ್ರ್ಯದೊಂದಿಗೆ ಪುರುಷರಿಗೆ ಸರಿಸಮಾನರಾಗಿ ಎಲ್ಲ ಕ್ಷೇತ್ರಗಳಲ್ಲಿಯೂ ಮುನ್ನಡೆಯುತ್ತಿದ್ದಾರೆ” ಎಂದು ತಿಳಿಸಿದ್ದಾರೆ.

ಪತಿಯನ್ನು ಕಳೆದುಕೊಂಡು ಹೆಣ್ಣುಮಕ್ಕಳು ಕೂಡಾ ವೈಯಕ್ತಿಕ ಬದುಕಿನ ನೋವುಗಳನ್ನು ನುಂಗಿಕೊಂಡು ಸಾಮಾಜಿಕ ಮತ್ತು ಔದ್ಯಮಿಕ ಕ್ಷೇತ್ರಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಮಾದರಿಯಾಗುತ್ತಿದ್ದಾರೆ. ಈ ಸಾಮಾಜಿಕ ಬದಲಾವಣೆಯಲ್ಲಿ ಬುದ್ಧ, ಬಸವ, ಅಂಬೇಡ್ಕರ್, ಗಾಂಧೀಜಿಯವರಂತಹ ಮಹನೀಯರ ಸಮಾಜ ಸುಧಾರಣೆಯ ಕೊಡುಗೆಯೂ ಇದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

Tags:
error: Content is protected !!