ಐಪಿಎಲ್‌ನಲ್ಲಿ ಆರ್‌ಸಿಬಿ ಸೋಲಿಗೆ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರೇ ಕಾರಣ ಎಂದು ಸೋಷಿಯಲ್ ಮೀಡಿಯಾಗಳಲ್ಲಿ ಕೆಲವು ದುಷ್ಕರ್ಮಿಗಳು ಅವಾಚ್ಯವಾಗಿ ನಿಂದಿಸಿರುವ ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ಹೆಣ್ಣುಮಕ್ಕಳ ತುಚ್ಛೀಕರಣವನ್ನು ನಮ್ಮ ಸರ್ಕಾರ ಖಂಡಿತ ಸಹಿಸುವುದಿಲ್ಲ. ಇದಕ್ಕೆ ಕಾರಣಕರ್ತರಾದ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಈ ಬಗ್ಗೆ ‘ಎಕ್ಸ್’ನಲ್ಲಿ ಪೋಸ್ಟ್ ಹಾಕಿರುವ ಅವರು, ಹೆಣ್ಣಿಗೆ ಸ್ವಾತಂತ್ರ್ಯವನ್ನು ನಿರಾಕರಿಸಿ ಗುಲಾಮಳನ್ನಾಗಿ ಮಾಡಿ ಮನೆಯೊಳಗೆ ಕೂರಿಸಿದ ಮನುವಾದದ ಸಂಕೋಲೆಯನ್ನು ಮಹಿಳೆಯರೇ ಕಿತ್ತುಹಾಕಿ ಸ್ವತಂತ್ರರಾಗುತ್ತಿದ್ದಾರೆ. ಸಂವಿಧಾನದತ್ತ ಸ್ವಾತಂತ್ರ್ಯದೊಂದಿಗೆ ಪುರುಷರಿಗೆ ಸರಿಸಮಾನರಾಗಿ ಎಲ್ಲ ಕ್ಷೇತ್ರಗಳಲ್ಲಿಯೂ ಮುನ್ನಡೆಯುತ್ತಿದ್ದಾರೆ” ಎಂದು ತಿಳಿಸಿದ್ದಾರೆ.
ಪತಿಯನ್ನು ಕಳೆದುಕೊಂಡು ಹೆಣ್ಣುಮಕ್ಕಳು ಕೂಡಾ ವೈಯಕ್ತಿಕ ಬದುಕಿನ ನೋವುಗಳನ್ನು ನುಂಗಿಕೊಂಡು ಸಾಮಾಜಿಕ ಮತ್ತು ಔದ್ಯಮಿಕ ಕ್ಷೇತ್ರಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಮಾದರಿಯಾಗುತ್ತಿದ್ದಾರೆ. ಈ ಸಾಮಾಜಿಕ ಬದಲಾವಣೆಯಲ್ಲಿ ಬುದ್ಧ, ಬಸವ, ಅಂಬೇಡ್ಕರ್, ಗಾಂಧೀಜಿಯವರಂತಹ ಮಹನೀಯರ ಸಮಾಜ ಸುಧಾರಣೆಯ ಕೊಡುಗೆಯೂ ಇದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಸದ್ದು ಮಾಡದ ಕನ್ನಡ ಶಾಲೆಗಳ ಉಳಿವಿನ ಯೋಜನೆ ವಿಷಯ • ಚಿರಂಜೀವಿ ಸಿ. ಹುಲ್ಲಹಳ್ಳಿ ಮಂಡ್ಯ: ಕನ್ನಡ ನಾಡು ನುಡಿಗೆ…
'ಪುನಶ್ಚತನವಾಗಬೇಕಾಗಿರುವ ಸಾಹಿತ್ಯ ಪ್ರಕಾರಗಳು' ಕುರಿತ ವಿಚಾರಗೋಷ್ಠಿಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಹಕ್ಕುಗಳ ಹೋರಾಟಗಾರ್ತಿ ಅಕೈ ಪದ್ಮಶಾಲಿ ಆಗ್ರಹ ಜಿ.ತಂಗಂ ಗೋಪಿನಾಥಂ ಮಂಡ್ಯ:…
ಜಾಗತಿಕ ನೆಲೆಯಲ್ಲಿ ಕನ್ನಡ ಕಟ್ಟುವ ಬಗೆ ಕುರಿತ ಗೋಷ್ಠಿಯಲ್ಲಿ ಅಮೆರಿಕ ಕನ್ನಡ ಕೂಟ (ಅಕ್ಕ)ದ ಅಧ್ಯಕ್ಷ ಅಮರ್‌ನಾಥ್‌ಗೌಡ ಹೇಮಂತ್ ಕುಮಾರ್…
`ಹೊಸ ತಲೆಮಾರಿನ ಸಾಹಿತ್ಯ' ಕುರಿತ ವಿಚಾರಗೋಷ್ಠಿಯಲ್ಲಿ ವಿಮರ್ಶಕ ವಿಕ್ರಂ ವಿಸಾಜಿ ಅಭಿಮತ • ಜಿ.ತಂಗಂ ಗೋಪಿನಾಥಂ ಮಂಡ್ಯ: ಹೊಸ ತಲೆಮಾರಿನ…
ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರು…