ಮನರಂಜನೆ

ಅಪ್ಪನ ಸ್ನೇಹಿತನಿಗೆ ನಾಯಕಿಯಾಗ್ತಾರಾ ಶ್ರುತಿ ಹಾಸನ್‍?

ರಜನಿಕಾಂತ್‍ ಅಭಿನಯದ ‘ಕೂಲಿ’ ಚಿತ್ರದಿಂದ ದಿನಕ್ಕೊಂದು ಅಪ್ಡೇಟ್‍ಗಳು ಬರುತ್ತಿವೆ. ಇತ್ತೀಚೆಗೆ ಚಿತ್ರದಲ್ಲಿ ಕನ್ನಡದ ನಟ ಉಪೇಂದ್ರ ನಟಿಸುತ್ತಾರೆ ಎಂದು ಹೇಳಲಾಯ್ತು. ನಂತರ ಬಾಲಿವುಡ್‍ ನಟ ಆಮೀರ್‍ ಖಾನ್‍ ಚಿತ್ರದಲ್ಲೊಂದು ಅತಿಥಿ ಪಾತ್ರದಲ್ಲಿ ನಟಿಸುತ್ತಿದ್ದಾರೆ ಎಂದು ಸುದ್ದಿಯಾಯ್ತು. ಇದಾದ ಮೇಲೆ ತೆಲುಗು ನಟ ನಾಗಾರ್ಜುನ ಹಾಗೂ ಮಲಯಾಳಂ ನಟ ಶೌಬಿನ್‍ ಅವರ ಪಾತ್ರಗಳನ್ನು ಪರಿಚಯಿಸುವ ಪೋಸ್ಟರ್‍ಗಳನ್ನು ಬಿಡುಗಡೆ ಮಾಡಲಾಯಿತು.

ಇದೀಗ ಚಿತ್ರಕ್ಕೆ ಶ್ರುತಿ ಹಾಸನ್‍ ಸೇರ್ಪಡೆಯಾಗಿರುವ ಸುದ್ದಿ ಬಂದಿದೆ. ಈ ಚಿತ್ರದಲ್ಲಿ ಅವರು ಪ್ರೀತಿ ಎಂಬ ಪಾತ್ರವನ್ನು ನಿರ್ವಹಿಸುತ್ತಿದ್ದು, ಇತ್ತೀಚೆಗೆ ಪೋಸ್ಟರ್‍ ಬಿಡುಗಡೆಯಾಗಿದೆ. ಈ ಚಿತ್ರದಲ್ಲಿ ಅವರು ನಾಯಕಿಯಾಗಿ ನಟಿಸುತ್ತಾರಾ? ಎಂಬ ಗುಸುಗುಸು ಸಹ ಕೇಳಿಬರುತ್ತಿದೆ.

ಶ್ರುತಿ ಹಾಸನ್‍, ಕಮಲ್ ಹಾಸನ್‍ ಅವರ ಮಗಳು. ಕಮಲ್‍ ಹಾಸನ್‍ ಮತ್ತು ರಜನಿಕಾಂತ್‍ ಹಲವು ವರ್ಷಗಳ ಗೆಳೆಯರು. ಇಬ್ಬರೂ ಹೆಚ್ಚೂ ಕಡಿಮೆ ಒಟ್ಟಿಗೆ ಚಿತ್ರರಂಗಕ್ಕೆ ಬಂದಿದ್ದಷ್ಟೇ ಅಲ್ಲ, ಹಲವು ಚಿತ್ರಗಳಲ್ಲಿ ಜೊತೆಯಾಗಿ ನಟಿಸಿದವರು. ಈಗ ಅಪ್ಪನ ಸ್ನೇಹಿತನ ಜೊತೆಗೆ ಶ್ರುತಿ ನಾಯಕಿಯಾಗಿ ನಟಿಸುತ್ತಿದ್ದಾರಾ? ಎಂಬ ಪ್ರಶ್ನೆಯೊಂದು ಕೇಳಿ ಬರುತ್ತಿದೆ. ಆದರೆ, ಚಿತ್ರತಂಡದವರಾಗಲೀ, ಶ್ರುತಿ ಹಾಸನ್‍ ಆಗಲೀ, ಈ ಬಗ್ಗೆ ಯಾವ ಪ್ರತಿಕ್ರಿಯೆ ನೀಡಿಲ್ಲ.

ಹೀಗಾಗುತ್ತಿರುವುದು ಇದು ಮೊದಲೇನಲ್ಲ. ಇದಕ್ಕೂ ಮುನ್ನ, ಚಿರಂಜೀವಿ ಅಭಿನಯದ ‘ವಾಲ್ಟರ್‍ ವೀರಯ್ಯ’ ಚಿತ್ರದಲ್ಲಿ ಶ್ರುತಿ ಹಾಸನ್‍ ನಾಯಕಿಯಾಗಿ ಕಾಣಿಸಿಕೊಂಡಿದ್ದರು. ಚಿರಂಜೀವಿ ಸಹ ಕಮಲ್ ಹಾಸನ್‍ ಅವರ ಸ್ನೇಹಿತನೇ. ಇನ್ನು, ರಜನಿಕಾಂತ್‍ ಅಭಿನಯದ ‘ಲಿಂಗ’ ಚಿತ್ರದಲ್ಲಿ ಸೋನಾಕ್ಷಿ ಸಿನ್ಹಾ ನಾಯಕಿಯಾಗಿದ್ದರು. ವಿಶೇಷವೆಂದರೆ, ಸೋನಾಕ್ಷಿ ತಂದೆ ಶತ್ರುಘ್ನ ಸಿನ್ಹಾ ಮತ್ತು ರಜನಿಕಾಂತ್‍ ಹಲವು ವರ್ಷಗಳ ಗೆಳೆಯರು.

ಅಂದಹಾಗೆ, ‘ಕೂಲಿ’ ಚಿತ್ರದಲ್ಲಿ ಶ್ರುತಿ, ಪ್ರೀತಿ ಎಂಬ ಯುವತಿಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಅವರ ಮೊದಲ ನೋಟ ಸಹ ಇತ್ತೀಚೆಗೆ ಬಿಡುಗಡೆಯಾಗಿದೆ. ಈ ಪೋಸ್ರ್ ಹಂಚಿಕೊಳ್ಳುವ ಮೂಲಕ ನಿರ್ದೇಶಕ ಲೋಕೇಶ್‍ ಕನಕರಾಜ್‍, ಶ್ರುತಿ ಹಾಸನ್‍ ಅವರನ್ನು ಚಿತ್ರತಂಡಕ್ಕೆ ಬರಮಾಡಿಕೊಂಡಿದ್ದಾರೆ.

‘ಕೂಲಿ’ ಚಿತ್ರದಲ್ಲಿ ರಜನಿಕಾಂತ್‍ ಜೊತೆಗೆ ಶ್ರುತಿ ಹಾಸನ್, ಉಪೇಂದ್ರ, ಸತ್ಯರಾಜ್‍, ಮಹೇಂದ್ರನ್‍ ಮುಂತಾದವರು ನಟಿಸುತ್ತಿದ್ದು, ಲೋಕೇಶ್‍ ಕನಕರಾಜ್‍ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರವನ್ನು ಸನ್‍ ಪಿಕ್ಚರ್ಸ್ ನಿರ್ಮಾಣ ಮಾಡುತ್ತಿದೆ.

ಭೂಮಿಕಾ

Recent Posts

ಇನ್ಮುಂದೆ ಕಬ್ಬನ್‌ ಪಾರ್ಕ್‌ನಲ್ಲಿ ಗುಂಪು ಚಟುವಟಿಕೆಗೆ ಅನುಮತಿ ಪಡೆಯುವುದು ಕಡ್ಡಾಯ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನ ಪ್ರಸಿದ್ಧ ಪಾರ್ಕ್‌ ಆದ ಕಬ್ಬನ್‌ ಪಾರ್ಕ್‌ನಲ್ಲಿ ಇನ್ನು ಮುಂದೆ ಯಾವುದೇ ಸಂಘಟನೆಗಳು ತಮ್ಮ ಚಟುವಟಿಕೆ…

2 mins ago

ಮತ್ತೊಮ್ಮೆ ಇತಿಹಾಸ ಸೃಷ್ಟಿಸಿದ ವೈಭವ್‌ ಸೂರ್ಯವಂಶಿ

13 ವರ್ಷದ ವೈಭವ್‌ ಸೂರ್ಯವಂಶಿ ಐಪಿಎಲ್‌ ಹರಾಜಿನಲ್ಲಿ 1.10 ಕೋಟಿಗೆ ರಾಜಸ್ಥಾನ ತಂಡಕ್ಕೆ ಹರಾಜಾಗುವ ಮೂಲಕ ಕಿರಿಯ ವಯಸ್ಸಿಗೆ ಐಪಿಎಲ್‌ಗೆ…

7 mins ago

ಕುವೈತ್‌ ಪ್ರವಾಸದಲ್ಲಿ ಪ್ರಧಾನಿ ಮೋದಿ: ನಾಯಕರೊಂದಿಗೆ ದ್ವಿಪಕ್ಷೀಯ ಮಾತುಕತೆ

ಕುವೈತ್‌: ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಕುವೈತ್‌ ಪ್ರವಾಸ ಕೈಗೊಂಡಿದ್ದು, ಅಲ್ಲಿನ ರಾಜ ಶೇಕ್‌ ಮಿಶಾಲ್‌…

13 mins ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಗೆ ಸಮನ್ಸ್‌ ನೀಡಿದ ರಾಯ್‌ ಬರೇಲಿ ನ್ಯಾಯಾಲಯ

ಉತ್ತರ ಪ್ರದೇಶ: ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಶ್ರೀಮಂತರು ಹಾಗೂ ಬಡವರ ನಡುವಿನ ಆರ್ಥಿಕತೆ, ಅಸಮಾನ ಆಸ್ತಿಗೆ ಸಂಬಂಧಿಸಿದಂತೆ ಹೇಳಿಕೆ ನೀಡಿದ್ದ…

33 mins ago

ರಾಜ್ಯದಲ್ಲಿ ಚಳಿಯ ತೀವ್ರತೆ ಹೆಚ್ಚು: ಮಕ್ಕಳನ್ನು ಕಾಡುತ್ತಿರುವ ಕಾಲು ಬಾಯಿ ರೋಗ

ಬೆಂಗಳೂರು: ಪ್ರಸಕ್ತ ವರ್ಷದಲ್ಲಿ ಚಳಿ ತುಂಬಾ ಜಾಸ್ತಿಯಿದ್ದು, ಶೀತಗಾಳಿ ಹೆಚ್ಚಾಗಲು ಕರಾವಳಿ ತೀರ ಪ್ರದೇಶದಲ್ಲಾದ ವಾತಾವರಣ ಬದಲಾವಣೆ ಕಾರಣ ಎಂದು…

43 mins ago

ವಿವಾದದ ನಡುವೆಯೂ ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳದನಲ್ಲಿ ಬಾಡೂಟ ವಿತರಣೆ

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯುತ್ತಿರುವ 87ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರ ವಿತರಣೆ ಮಾಡಿರುವ ವಿಚಾರ ಭಾರೀ ವಿವಾದಕ್ಕೆ…

54 mins ago