ಯಕ್ಷಗಾನ ಲೋಕದ ಗಾನಕೋಗಿಲೆ, ಭಾಗವತ ಶ್ರೇಷ್ಠ ಎಂದೇ ಪ್ರಸಿದ್ಧರಾಗಿದ್ದ ಸುಬ್ರಮಣ್ಯ ಧಾರೇಶ್ವರ ಅವರು ತಮ್ಮ 67ನೇ ವಯಸ್ಸಿನಲ್ಲಿ ವಿಧಿವಶರಾಗಿದ್ದಾರೆ. ಇಂದು ( ಏಪ್ರಿಲ್ 25 ) ಬೆಂಗಳೂರಿನ ತಮ್ಮ ನಿವಾಸದಲ್ಲಿ ಸುಬ್ರಮಣ್ಯ ಧಾರೇಶ್ವರ ಅವರು ಅಸುನೀಗಿದ್ದು, ಅವರ ಅಂತ್ಯಕ್ರಿಯೆ ಉಡುಪಿಯ ಕುಂದಾಪುರದ ನಾಗೂರಿನಲ್ಲಿ ನಡೆಯಲಿದೆ.
1957ರ ಸೆಪ್ಟೆಂಬರ್ 5ರಂದು ಜನಿಸಿದ್ದ ಸುಬ್ರಮಣ್ಯ ಭಾಗವತ ಅವರು 46 ವರ್ಷಗಳ ಕಾಲ ಯಕ್ಷಗಾನ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದು, ಪತ್ನಿ, ಪುತ್ರ ಹವ್ಯಾಸಿ ಕಲಾವಿದ ಕಾರ್ತಿಕ್ ಹಾಗೂ ಪುತ್ರಿಯನ್ನು ಅಗಲಿ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾರೆ.