Yash Ramayana film first look release possibility in WAVES summit
‘ರಾಮಾಯಣ’ ಚಿತ್ರದ ಚಿತ್ರೀಕರಣದಲ್ಲಿ ಯಶ್ ಸದ್ಯದಲ್ಲೇ ಪ್ರಾರಂಭವಾಗಲಿದ್ದು, ಅದಕ್ಕೂ ಮೊದಲು ಇತ್ತೀಚೆಗಷ್ಟೇ ಉಜ್ಜಯಿನಿಯಲ್ಲಿರುವ ಶ್ರೀ ಮಹಾಕಾಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದ ಸುದ್ದಿ ಸಾಕಷ್ಟು ಸುದ್ದಿ ಮಾಡಿದೆ. ಹೀಗಿರುವಾಗಲೇ, ‘ರಾಮಾಯಣ’ ಚಿತ್ರದ ಮೊದಲ ನೋಟ ಸದ್ಯದಲ್ಲೇ ಬಿಡುಗಡೆಯಾಗುವ ಸೂಚನೆ ಸಿಕ್ಕಿದೆ.
ಮುಂಬೈನಲ್ಲಿ ಮೇ 1 ರಿಂದ 4ರ ವರೆಗೆ ವಿಶ್ವ ಆಡಿಯೋ ವಿಷುಯಲ್ & ಎಂಟರ್ಟೈನ್ಮೆಂಟ್ ಸಮಿಟ್ (WAVES). ಈ ಶೃಂಗಸಭೆಯಲ್ಲಿ ಭಾರತೀಯ ಚಿತ್ರರಂಗದ ಹಲವು ಜನಪ್ರಿಯ ಕಲಾವಿದರು ಮತ್ತು ತಂತ್ರಜ್ಞರು ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಚಿತ್ರದ ಟೀಸರ್ ಅಥವಾ ಮೊದಲ ನೋಟ ಬಿಡುಗಡೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಚಿತ್ರದ ಚಿತ್ರೀಕರಣ ಪ್ರಾರಂಭವಾಗಿ ಒಂದು ವರ್ಷವಾದರೂ, ಚಿತ್ರತಂಡದವರು ಚಿತ್ರವನ್ನು ಗೌಪ್ಯವಾಗಿಯೇ ಇಟ್ಟಿದ್ದಾರೆ. ಈಗ ಮೊದಲ ಬಾರಿಗೆ ಚಿತ್ರದ ತುಣುಕುಗಳು ಹೊರಬರುವ ಸಾಧ್ಯತೆ ಇದೆ.
‘ರಾಮಾಯಣ’ ಚಿತ್ರದಲ್ಲಿ ರಾಮನಾಗಿ ರಣಬೀರ್ ಕಪೂರ್ ನಟಿಸುತ್ತಿದ್ದರೆ, ಸೀತೆಯಾಗಿ ಸಾಯಿಪಲ್ಲವಿ ಕಾಣಿಸಿಕೊಳ್ಳುತ್ತಿದ್ದಾರೆ. ಇನ್ನು, ಸನ್ನಿ ಡಿಯೋಲ್, ಆಂಜನೇಯನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರದಲ್ಲಿ ಯಶ್, ರಾವಣನಾಗಿ ಅಭಿನಯಿಸುತ್ತಿದ್ದಾರೆ. ಲಾರಾ ದತ್ತ, ಇಂದಿರಾ ಕೃಷ್ಣನ್ ಮುಂತದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
ಈ ಹಿಂದೆ ‘ದಂಗಲ್’ ಚಿತ್ರವನ್ನು ನಿರ್ದೇಶಿಸಿದ್ದ ನಿತೀಶ್ ತಿವಾರಿ, ಈ ‘ರಾಮಾಯಣ’ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಇನ್ನು, ಯಶ್ ಈ ಚಿತ್ರಕ್ಕೆ ಬರೀ ನಟರಷ್ಟೇ ಅಲ್ಲ, ಸಹನಿರ್ಮಾಪಕರೂ ಹೌದು. ಈ ಚಿತ್ರವನ್ನು ಪ್ರೈಮ್ ಫೋಕಸ್ ಸಂಸ್ಥೆಯ ನಮಿತ್ ಮಲ್ಹೋತ್ರಾ ಜೊತೆಗೆ ಸೇರಿ ನಿರ್ಮಾಣ ಮಾಡುತ್ತಿರುವುದು ವಿಶೇಷ.
‘ರಾಮಾಯಣ’ ಚಿತ್ರವು ಎರಡು ಭಾಗಗಳಲ್ಲಿ ಬಿಡುಗಡೆಯಾಗುತ್ತಿದ್ದು, ಮೊದಲ ಭಾಗ 2026ರ ದೀಪಾವಳಿಗೆ ಬಿಡುಗಡೆಯಾದರೆ, ಎರಡನೆಯ ಭಾಗ 2027ರ ದೀಪಾವಳಿಗೆ ಬಿಡುಗಡೆಯಾಗಲಿದೆ. ಅದಕ್ಕೂ ಮೊದಲು ಯಶ್ ಅಭಿನಯದ ‘ಟಾಕ್ಸಿಕ್’ ಚಿತ್ರವು ಯುಗಾದ ಹಬ್ಬದ ಸಂದರ್ಭದಲ್ಲಿ ಬಿಡುಗಡೆಯಾಗಲಿದೆ.
1 ಕೆ.ಜಿ.ಬೆಳ್ಳಿಗೆ 3.30 ಲಕ್ಷ ರೂಪಾಯಿ ಹೈದರಾಬಾದ್ : ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಕೆ ನಿಲ್ಲುತ್ತಿಲ್ಲ. ಬುಧವಾರ ಹಳದಿ…
ಮೈಸೂರು : ಸೋಮವಾರ ತಡರಾತ್ರಿ ಯುವಕನೋರ್ವನನ್ನು ಐವರ ಗುಂಪು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉದಯಗಿರಿ…
ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಮೃತಪಟ್ಟಿರುವುದರಿಂದ ಚಿರತೆ…
ಇಡಿ ಬಂಧನದಿಂದ ಬಿಡುಗಡೆ ಕೋರಿ ಮಾಜಿ ಆಯುಕ್ತ ಸಲ್ಲಿಸಿದ್ದ ಅರ್ಜಿ ತಿರಸ್ಕಾರ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ…
ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…
ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…