ಬೆಂಗಳೂರು : ರಾಕಿಂಗ್ ಸ್ಟಾರ್ ಯಶ್ ನಟನೆಯ ಬಹುನಿರೀಕ್ಷಿತ ಟಾಕ್ಸಿಕ್ ಚಿತ್ರದ ಬಿಡುಗಡೆಗೆ ದಿನಾಂಕ ಘೋಷಣೆಯಾಗಿದ್ದು, ಮುಂದಿನ ವರ್ಷ ಸಿನಿಮಾ ತೆರೆಗೆ ಬರಲಿದೆ.
2026ರ ಮಾ.19ಕ್ಕೆ ಸಿನಿಮಾ ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ. ಈ ಮೊದಲು ಇದೇ ಏ.10ಕ್ಕೆ ದಿನಾಂಕ ನಿಗದಿಯಾಗಿದೆ ಎಂದು ಚಿತ್ರತಂಡ ತಿಳಿಸಿತ್ತು. ಆದರೆ, ಇದೀಗ ಇನ್ನೂ ಒಂದು ವರ್ಷ ಮುಂದೂಡಲ್ಪಟ್ಟಿದೆ.
ಏಕಕಾಲದಲ್ಲಿ ಕನ್ನಡ ಮತ್ತು ಇಂಗ್ಲಿಷ್ ಎರಡು ಭಾಷೆಯಲ್ಲೂ ಸಿನಿಮಾ ತೆರೆಗೆ ಬರುತ್ತಿದೆ. ಸಿನಿಮಾ ಇನ್ನೂ ಚಿತ್ರೀಕರಣದ ಹಂತದಲ್ಲಿದ್ದು, ಗೀತು ಮೋಹನ್‌ದಾಸ್ ನಿರ್ದೇಶನ ಮಾಡುತ್ತಿದ್ದಾರೆ. ಕಿವಿಎನ್ ಪ್ರೊಡಕ್ಷನ್ ಹಾಗೂ ಯಶ್ ಅವರ ಮಾನ್‌ಸ್ಟರ್ ಮೈಂಡ್ ಕ್ರಿಯೇಷನ್ಸ್ ನಿರ್ಮಾಣದ ಹೊಣೆ ಹೊತ್ತಿದೆ.





