Mysore
22
haze

Social Media

ಶುಕ್ರವಾರ, 05 ಡಿಸೆಂಬರ್ 2025
Light
Dark

ಆ.1ಕ್ಕೆ ಬಿಡುಗಡೆ ಆಗಲಿದೆ ಯಶ್‌ ತಾಯಿ ನಿರ್ಮಾಣದ ‘ಕೊತ್ತಲವಾಡಿ’

ಯಶ್‍ ತಾಯಿ ಪುಷ್ಪಾ ಅರುಣ್‍ ಕುಮಾರ್‍, ಪೃಥ್ವಿ ಅಂಬಾರ್‍ ಅಭಿನಯದಲ್ಲಿ ‘ಕೊತ್ತಲವಾಡಿ’ ಎಂಬ ಚಿತ್ರವನ್ನು ನಿರ್ಮಿಸುತ್ತಿದ್ದು, ಈ ಚಿತ್ರದ ಟೀಸರ್‍ ಕಳೆದ ತಿಂಗಳು ಬಿಡುಗಡೆಯಾಗಿದೆ. ಟೀಸರ್‍ ಬಿಡುಗಡೆ ಸಂದರ್ಭದಲ್ಲಿ ಚಿತ್ರದ ಬಿಡುಗಡೆ ಯಾವಾಗ ಎಂಬ ವಿಷಯವನ್ನು ಚಿತ್ರತಂಡ ಬಹಿರಂಗಪಡಿಸಿರಲಿಲ್ಲ.

ಇದೀಗ ಚಿತ್ರದ ಬಿಡುಗಡೆ ದಿನಾಂಕ ನಿಗದಿಯಾಗಿದ್ದು, ಆಗಸ್ಟ್.01ರಂದು ಚಿತ್ರವು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈ ಸಂಬಂಧ ಶುಕ್ರವಾರ ಚಿತ್ರತಂಡದವರು ಹೊಸ ಪೋಸ್ಟರ್‍ ಬಿಡುಗಡೆ ಮಾಡುವ ಮೂಲಕ ಚಿತ್ರದ ಬಿಡುಗಡೆ ದಿನಾಂಕವನ್ನು ಅಧಿಕೃತವಾಗಿ ಘೋಷಿಸಿದ್ದಾರೆ.

ಎರಡು ವರ್ಷಗಳ ಹಿಂದೆ ಬಿಡುಗಡೆಯಾದ ‘ಲಾಂಗ್‍ ಡ್ರೈವ್‍’ ಎಂಬ ಚಿತ್ರವನ್ನು ನಿರ್ದೇಶಿಸಿದ್ದ ಶ್ರೀರಾಜ್‍ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಹಿರಿಯ ನಿರ್ದೇಶಕರಾದ ಕೆ.ವಿ. ರಾಜು, ರವಿ ಶ್ರೀವತ್ಸ ಗರಡಿಯಲ್ಲಿ ಕೆಲಸ ಮಾಡಿರುವ ಶ್ರೀರಾಜ್, ‘ಕೊತ್ತಲವಾಡಿ’ ಚಿತ್ರವನ್ನು ನಿರ್ದೇಶಿಸಿದ್ದು, ಇದು ಅವರ ಎರಡನೇ ಚಿತ್ರವಾಗಿದೆ.

ಇದೊಂದು ಗ್ರಾಮೀಣ ಸೊಗಡಿನ ಚಿತ್ರವಾಗಿದ್ದು, ಪೃಥ್ವಿ ಅಂಬಾರ್ ಹಾಗೂ ಕಿರುತೆರೆ ನಟಿ ಕಾವ್ಯಾ ಶೈವ ನಾಯಕ-ನಾಯಕಿಯಾಗಿ ನಟಿಸಿದ್ದಾರೆ. ಗೋಪಾಲಕೃಷ್ಣ ದೇಶಪಾಂಡೆ, ರಾಜೇಶ್ ನಟರಂಗ ಅವರಂತಹ ಅನುಭವಿ ಕಲಾವಿದರು ಈ ಚಿತ್ರದಲ್ಲಿ ನಟಿಸಿದ್ದಾರೆ.

‘ಕೊತ್ತಲವಾಡಿ’ ಚಿತ್ರವನ್ನು ಯಶ್‍ ತಾಯಿ ಪುಷ್ಪಾ ಅರುಣ್ ಕುಮಾರ್, ಪಿಎ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಾಣ ಮಾಡುತ್ತಿದ್ದಾರೆ. ಚಿತ್ರಕ್ಕೆ ವಿಕಾಸ್‌ ವಸಿಷ್ಠ ಸಂಗೀತ, ಕಾರ್ತಿಕ್ ಎಸ್. ಛಾಯಾಗ್ರಹಣ, ರಘು ನಿಡುವಳ್ಳಿ ಸಂಭಾಷಣೆ ಇರುವ ಈ ಚಿತ್ರಕ್ಕೆ ವಿ. ನಾಗೇಂದ್ರ ಪ್ರಸಾದ್, ಕಿನ್ನಾಳ್ ರಾಜ್, ಪ್ರಮೋದ್ ಮರವಂತೆ, ಗೌಸ್ ಪಿರ್ ಸಾಹಿತ್ಯ ಬರೆದಿದ್ದಾರೆ.

Tags:
error: Content is protected !!