ಯಶ್ ತಾಯಿ ಪುಷ್ಪಾ ಅರುಣ್ ಕುಮಾರ್, ಪೃಥ್ವಿ ಅಂಬಾರ್ ಅಭಿನಯದಲ್ಲಿ ‘ಕೊತ್ತಲವಾಡಿ’ ಎಂಬ ಚಿತ್ರವನ್ನು ನಿರ್ಮಿಸುತ್ತಿದ್ದು, ಈ ಚಿತ್ರದ ಟೀಸರ್ ಕಳೆದ ತಿಂಗಳು ಬಿಡುಗಡೆಯಾಗಿದೆ. ಟೀಸರ್ ಬಿಡುಗಡೆ ಸಂದರ್ಭದಲ್ಲಿ ಚಿತ್ರದ ಬಿಡುಗಡೆ ಯಾವಾಗ ಎಂಬ ವಿಷಯವನ್ನು ಚಿತ್ರತಂಡ ಬಹಿರಂಗಪಡಿಸಿರಲಿಲ್ಲ.
ಇದೀಗ ಚಿತ್ರದ ಬಿಡುಗಡೆ ದಿನಾಂಕ ನಿಗದಿಯಾಗಿದ್ದು, ಆಗಸ್ಟ್.01ರಂದು ಚಿತ್ರವು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈ ಸಂಬಂಧ ಶುಕ್ರವಾರ ಚಿತ್ರತಂಡದವರು ಹೊಸ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಚಿತ್ರದ ಬಿಡುಗಡೆ ದಿನಾಂಕವನ್ನು ಅಧಿಕೃತವಾಗಿ ಘೋಷಿಸಿದ್ದಾರೆ.
ಎರಡು ವರ್ಷಗಳ ಹಿಂದೆ ಬಿಡುಗಡೆಯಾದ ‘ಲಾಂಗ್ ಡ್ರೈವ್’ ಎಂಬ ಚಿತ್ರವನ್ನು ನಿರ್ದೇಶಿಸಿದ್ದ ಶ್ರೀರಾಜ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಹಿರಿಯ ನಿರ್ದೇಶಕರಾದ ಕೆ.ವಿ. ರಾಜು, ರವಿ ಶ್ರೀವತ್ಸ ಗರಡಿಯಲ್ಲಿ ಕೆಲಸ ಮಾಡಿರುವ ಶ್ರೀರಾಜ್, ‘ಕೊತ್ತಲವಾಡಿ’ ಚಿತ್ರವನ್ನು ನಿರ್ದೇಶಿಸಿದ್ದು, ಇದು ಅವರ ಎರಡನೇ ಚಿತ್ರವಾಗಿದೆ.
ಇದೊಂದು ಗ್ರಾಮೀಣ ಸೊಗಡಿನ ಚಿತ್ರವಾಗಿದ್ದು, ಪೃಥ್ವಿ ಅಂಬಾರ್ ಹಾಗೂ ಕಿರುತೆರೆ ನಟಿ ಕಾವ್ಯಾ ಶೈವ ನಾಯಕ-ನಾಯಕಿಯಾಗಿ ನಟಿಸಿದ್ದಾರೆ. ಗೋಪಾಲಕೃಷ್ಣ ದೇಶಪಾಂಡೆ, ರಾಜೇಶ್ ನಟರಂಗ ಅವರಂತಹ ಅನುಭವಿ ಕಲಾವಿದರು ಈ ಚಿತ್ರದಲ್ಲಿ ನಟಿಸಿದ್ದಾರೆ.
‘ಕೊತ್ತಲವಾಡಿ’ ಚಿತ್ರವನ್ನು ಯಶ್ ತಾಯಿ ಪುಷ್ಪಾ ಅರುಣ್ ಕುಮಾರ್, ಪಿಎ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಾಣ ಮಾಡುತ್ತಿದ್ದಾರೆ. ಚಿತ್ರಕ್ಕೆ ವಿಕಾಸ್ ವಸಿಷ್ಠ ಸಂಗೀತ, ಕಾರ್ತಿಕ್ ಎಸ್. ಛಾಯಾಗ್ರಹಣ, ರಘು ನಿಡುವಳ್ಳಿ ಸಂಭಾಷಣೆ ಇರುವ ಈ ಚಿತ್ರಕ್ಕೆ ವಿ. ನಾಗೇಂದ್ರ ಪ್ರಸಾದ್, ಕಿನ್ನಾಳ್ ರಾಜ್, ಪ್ರಮೋದ್ ಮರವಂತೆ, ಗೌಸ್ ಪಿರ್ ಸಾಹಿತ್ಯ ಬರೆದಿದ್ದಾರೆ.
ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…
ಹಾಸನ: ನಾನು ಜೆಡಿಎಸ್ ಬಿಟ್ಟು ಹೋದರೆ ದ್ರೋಹ ಹೇಗಾಗುತ್ತದೆ? ನಾನು ಅಲ್ಲಿದ್ದರೆ ಇನ್ನೊಂದು ಸೀಟ್ ಜಾಸ್ತಿ ಆಗೋದು ಅಷ್ಟೇ. ಏನು…
ಬೆಂಗಳೂರು: ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕಾಂಗ್ರೆಸ್ ಸದಸ್ಯರು…
ಮಳವಳ್ಳಿ: ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ…
ಮಂಡ್ಯ: ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ತಲುಪಿಸುವ ಕೆಲಸವನ್ನು ಗಾಂಧಿ ಭವನದಲ್ಲಿ ಮಾಡಲಾಗುವುದು ಎಂದು ಮಂಡ್ಯ ಜಿಲ್ಲಾ…
ಮಂಡ್ಯ: ಮಂಡ್ಯ ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತ್‌ಗಳಲ್ಲಿ ದಿನಾಂಕ:31-10-2017ಕ್ಕೂ ಪೂರ್ವದಲ್ಲಿ ಗ್ರಾಮ ಪಂಚಾಯತ್ ನಿಂದ ನೇಮಕಗೊಂಡು ನೀರುಗಂಟಿ, ಸ್ವಚ್ಛತಗಾರ, ಅಟೆಂಡರ್…