yash upcoming ramayana movie
ಯಶ್ ಅವರು ರಾಮಾಯಣ ಚಿತ್ರದಲ್ಲಿ ನಟಿಸುತ್ತಿರುವ ವಿಷಯ ಗೊತ್ತೇ ಇದೆ. ಈ ಚಿತ್ರದ ಮೊದಲ ಭಾಗ 2026ರ ದೀಪಾವಳಿಗೆ ಪ್ರಾರಂಭವಾಗಲಿದೆ. ಸದ್ಯದಲ್ಲೇ ಈ ಚಿತ್ರದ ಚಿತ್ರೀಕರಣದಲ್ಲಿ ಯಶ್ ಭಾಗಿಯಾಗಲಿದ್ದು, ಅದಕ್ಕೂ ಮೊದಲು ಯಶ್, ಉಜ್ಜಯಿನಿಯ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಬಂದಿದ್ದಾರೆ.
‘ರಾಮಾಯಣ – ಭಾಗ 1’ರ ಚಿತ್ರೀಕರಣ ಮುಂದಿನ ವಾರದಿಂದ ಮುಂಬೈನಲ್ಲಿ ಪ್ರಾರಂಭವಾಗಲಿದೆಯಂತೆ. ಈ ಚಿತ್ರೀಕರಣದಲ್ಲಿ ಯಶ್ ಭಾಗವಹಿಸುತ್ತಿದ್ದು, ಅದಕ್ಕೂ ಮೊದಲು ಉಜ್ಜಯಿನಿಯಲ್ಲಿರುವ ಶ್ರೀ ಮಹಾಕಾಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದೈವಿಕ ಆಶೀರ್ವಾದವನ್ನು ಪಡೆದಿದ್ದಾರೆ. ತಾವು ಶಿವನ ಭಕ್ತನಾದ್ದರಿಂದ, ಶಿವನ ಆಶೀರ್ವಾದ ಪಡೆಯಲು ಬಂದೆ ಎಂದು ಯಶ್ ಮಾಧ್ಯಮದವರಿಗೆ ತಿಳಿಸಿದ್ದಾರೆ.
ಈ ಹಿಂದೆ ‘ದಂಗಲ್’ ಚಿತ್ರವನ್ನು ನಿರ್ದೇಶಿಸಿದ್ದ ನಿತೀಶ್ ತಿವಾರಿ, ಈ ‘ರಾಮಾಯಣ’ ಚಿತ್ರದ ನಿರ್ದೇಶಕರು. ರಾಮನಾಗಿ ರಣಬೀರ್ ಕಪೂರ್ ನಟಿಸುತ್ತಿದ್ದರೆ, ಸೀತೆಯಾಗಿ ಸಾಯಿಪಲ್ಲವಿ ಕಾಣಿಸಿಕೊಳ್ಳುತ್ತಿದ್ದಾರೆ. ಇನ್ನು, ಸನ್ನಿ ಡಿಯೋಲ್, ಆಂಜನೇಯನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರದಲ್ಲಿ ರಾವಣನ ಪಾತ್ರವಲ್ಲದೆ, ಬೇರೆ ಯಾವುದೇ ಪಾತ್ರದಲ್ಲೂ ಕಾಣಿಸಿಕೊಳ್ಳುತ್ತಿರಲಿಲ್ಲ ಎಂದು ಯಶ್ ಕಳೆದ ವರ್ಷ ನೀಡಿದ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ.
‘ರಾಮಯಾಣ’ ಚಿತ್ರದಲ್ಲಿ ಯಶ್, ರಾವಣನಾಗಿ ಅಭಿನಯಿಸುತ್ತಿರುವ ವಿಷಯ ಗೊತ್ತೇ ಇದೆ. ಯಶ್ ಈ ಚಿತ್ರದಲ್ಲಿ ಬರೀ ನಟರಷ್ಟೇ ಅಲ್ಲ, ಸಹನಿರ್ಮಾಪಕರೂ ಹೌದು. ಈ ಚಿತ್ರವನ್ನು ಪ್ರೈಮ್ ಫೋಕಸ್ ಸಂಸ್ಥೆಯ ನಮಿತ್ ಮಲ್ಹೋತ್ರಾ ಮತ್ತ ಯಶ್ ಜೊತೆಯಾಗಿ ನಿರ್ಮಾಣ ಮಾಡುತ್ತಿದ್ದರೆ.
‘ರಾಮಾಯಣ’ ಚಿತ್ರವು ಎರಡು ಭಾಗಗಳಲ್ಲಿ ಬಿಡುಗಡೆಯಾಗುತ್ತಿದ್ದು, ಮೊದಲ ಭಾಗ 2026ರ ದೀಪಾವಳಿಗೆ ಬಿಡುಗಡೆಯಾದರೆ, ಎರಡನೆಯ ಭಾಗ 2027ರ ದೀಪಾವಳಿಗೆ ಬಿಡುಗಡೆಯಾಗಲಿದೆ.
ಈ ಮಧ್ಯೆ, ‘ಟಾಕ್ಸಿಕ್’ ಚಿತ್ರದಲ್ಲೂ ಯಶ್ ನಟಿಸುತ್ತಿದ್ದು, ಈ ಚಿತ್ರವು 2026ರ ಮಾರ್ಚ್ 19ರಂದು ಯುಗಾದ ಹಬ್ಬದ ಪ್ರಯುಕ್ತ ಬಿಡುಗಡೆಯಾಗಲಿದೆ.
ಮೈಸೂರು : ಮೈಸೂರು ಅರಮನೆ ಮುಂಭಾಗ ನಿನ್ನೆ ಸಂಜೆ ನಡೆದಿದ್ದ ಹೀಲಿಯಂ ಸ್ಫೋಟ ಪ್ರಕರಣದಲ್ಲಿ ಸಾವಿನ ಸಂಖ್ಯೆ ಇದೀಗ ಮೂರಕ್ಕೆ…
ಮೈಸೂರು : ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಗೇಡು ಹತ್ಯೆ ವಿರೋಧಿಸಿ ಮತ್ತು ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾಯಿದೆ ರೂಪಿಸಬೇಕು ಎಂದು…
ಮೈಸೂರು : ಇಲ್ಲಿನ ಕೆ.ಆರ್. ಆಸ್ಪತ್ರೆಯ ಶೆಡ್ ನಲ್ಲಿ ಬೆಂಕಿ ಕಾಣಿಸಿಕೊಂಡು ಆಸ್ಪತ್ರೆಯ ಹಾಸಿಗೆಗಳು ಬೆಂಕಿಗಾಹುತಿಯಾಗಿವೆ. ಆಸ್ಪತ್ರೆಯ ಚೆಲುವಾಂಬ ವಾರ್ಡ್…
ಬೆಂಗಳೂರು : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತಂತೆ ಪ್ರಶ್ನೆಗಳು ಉದ್ಭವಿಸಿರುವ ಸಂದರ್ಭದಲ್ಲಿ, ಹೊಸ ವರ್ಷಾಚರಣೆಯ ವೇಳೆ ಯಾವುದೇ ಅವಘಡ ನಡೆಯದಂತೆ…
ಮೈಸೂರು : ಮೈಸೂರಿನ ವಿಶ್ವ ವಿಖ್ಯಾತ ಅರಮನೆ ಸಮೀಪ ಸಂಭವಿಸಿದ್ದ ಹೀಲಿಯಂ ಗ್ಯಾಸ್ ಸಿಲೆಂಡರ್ ಸ್ಫೋಟ ದುರಂತದಲ್ಲಿ ಸಾವಿನ ಸಂಖ್ಯೆ…
ತಿರುವನಂತಪುರಂ : ಬಿಜೆಪಿಯಿಂದ ಮೊದಲ ಬಾರಿಗೆ ತಿರುವನಂತಪುರಂ ನಗರ ಮೇಯರ್ ಆಗಿ ಆಯ್ಕೆಯಾಗುವ ಮೂಲಕ ವಿ.ವಿ.ರಾಜೇಶ್ ಇತಿಹಾಸ ನಿರ್ಮಿಸಿದ್ದಾರೆ. 49…