ಮನರಂಜನೆ

ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ನಟ ಯಶ್‍ ಪೂಜೆ

ಯಶ್‍ ಅವರು ರಾಮಾಯಣ ಚಿತ್ರದಲ್ಲಿ ನಟಿಸುತ್ತಿರುವ ವಿಷಯ ಗೊತ್ತೇ ಇದೆ. ಈ ಚಿತ್ರದ ಮೊದಲ ಭಾಗ 2026ರ ದೀಪಾವಳಿಗೆ ಪ್ರಾರಂಭವಾಗಲಿದೆ. ಸದ್ಯದಲ್ಲೇ ಈ ಚಿತ್ರದ ಚಿತ್ರೀಕರಣದಲ್ಲಿ ಯಶ್‍ ಭಾಗಿಯಾಗಲಿದ್ದು, ಅದಕ್ಕೂ ಮೊದಲು ಯಶ್‍, ಉಜ್ಜಯಿನಿಯ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಬಂದಿದ್ದಾರೆ.

‘ರಾಮಾಯಣ – ಭಾಗ 1’ರ ಚಿತ್ರೀಕರಣ ಮುಂದಿನ ವಾರದಿಂದ ಮುಂಬೈನಲ್ಲಿ ಪ್ರಾರಂಭವಾಗಲಿದೆಯಂತೆ. ಈ ಚಿತ್ರೀಕರಣದಲ್ಲಿ ಯಶ್‍ ಭಾಗವಹಿಸುತ್ತಿದ್ದು, ಅದಕ್ಕೂ ಮೊದಲು ಉಜ್ಜಯಿನಿಯಲ್ಲಿರುವ ಶ್ರೀ ಮಹಾಕಾಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದೈವಿಕ ಆಶೀರ್ವಾದವನ್ನು ಪಡೆದಿದ್ದಾರೆ. ತಾವು ಶಿವನ ಭಕ್ತನಾದ್ದರಿಂದ, ಶಿವನ ಆಶೀರ್ವಾದ ಪಡೆಯಲು ಬಂದೆ ಎಂದು ಯಶ್‍ ಮಾಧ್ಯಮದವರಿಗೆ ತಿಳಿಸಿದ್ದಾರೆ.

ಈ ಹಿಂದೆ ‘ದಂಗಲ್‍’ ಚಿತ್ರವನ್ನು ನಿರ್ದೇಶಿಸಿದ್ದ ನಿತೀಶ್‍ ತಿವಾರಿ, ಈ ‘ರಾಮಾಯಣ’ ಚಿತ್ರದ ನಿರ್ದೇಶಕರು. ರಾಮನಾಗಿ ರಣಬೀರ್ ‍ಕಪೂರ್ ನಟಿಸುತ್ತಿದ್ದರೆ, ಸೀತೆಯಾಗಿ ಸಾಯಿಪಲ್ಲವಿ ಕಾಣಿಸಿಕೊಳ್ಳುತ್ತಿದ್ದಾರೆ. ಇನ್ನು, ಸನ್ನಿ ಡಿಯೋಲ್‍, ಆಂಜನೇಯನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರದಲ್ಲಿ ರಾವಣನ ಪಾತ್ರವಲ್ಲದೆ, ಬೇರೆ ಯಾವುದೇ ಪಾತ್ರದಲ್ಲೂ ಕಾಣಿಸಿಕೊಳ್ಳುತ್ತಿರಲಿಲ್ಲ ಎಂದು ಯಶ್‍ ಕಳೆದ ವರ್ಷ ನೀಡಿದ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ.

‘ರಾಮಯಾಣ’ ಚಿತ್ರದಲ್ಲಿ ಯಶ್‍, ರಾವಣನಾಗಿ ಅಭಿನಯಿಸುತ್ತಿರುವ ವಿಷಯ ಗೊತ್ತೇ ಇದೆ. ಯಶ್‍ ಈ ಚಿತ್ರದಲ್ಲಿ ಬರೀ ನಟರಷ್ಟೇ ಅಲ್ಲ, ಸಹನಿರ್ಮಾಪಕರೂ ಹೌದು. ಈ ಚಿತ್ರವನ್ನು ಪ್ರೈಮ್‍ ಫೋಕಸ್‍ ಸಂಸ್ಥೆಯ ನಮಿತ್‍ ಮಲ್ಹೋತ್ರಾ ಮತ್ತ ಯಶ್‍ ಜೊತೆಯಾಗಿ ನಿರ್ಮಾಣ ಮಾಡುತ್ತಿದ್ದರೆ.

‘ರಾಮಾಯಣ’ ಚಿತ್ರವು ಎರಡು ಭಾಗಗಳಲ್ಲಿ ಬಿಡುಗಡೆಯಾಗುತ್ತಿದ್ದು, ಮೊದಲ ಭಾಗ 2026ರ ದೀಪಾವಳಿಗೆ ಬಿಡುಗಡೆಯಾದರೆ, ಎರಡನೆಯ ಭಾಗ 2027ರ ದೀಪಾವಳಿಗೆ ಬಿಡುಗಡೆಯಾಗಲಿದೆ.

ಈ ಮಧ್ಯೆ, ‘ಟಾಕ್ಸಿಕ್‍’ ಚಿತ್ರದಲ್ಲೂ ಯಶ್‍ ನಟಿಸುತ್ತಿದ್ದು, ಈ ಚಿತ್ರವು 2026ರ ಮಾರ್ಚ್ 19ರಂದು ಯುಗಾದ ಹಬ್ಬದ ಪ್ರಯುಕ್ತ ಬಿಡುಗಡೆಯಾಗಲಿದೆ.

ಆಂದೋಲನ ಡೆಸ್ಕ್

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

1 hour ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

5 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

5 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

5 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

5 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

5 hours ago