ಮನರಂಜನೆ

ಸಂಭಾವನೆಯಲ್ಲಿ ದಾಖಲೆ ಬರೆದ ಯಶ್…! ಭಾರತೀಯ ಚಿತ್ರರಂಗದ ಇತಿಹಾಸದಲ್ಲೇ ಮೊದಲು

ಮುಂಬೈ: ಭಾರತೀಯ ಚಿತ್ರರಂಗದ ಇತಿಹಾಸದಲ್ಲಿಯೇ ಖಳನಾಯಕ ಪಾತ್ರಕ್ಕಾಗಿ ಮೊದಲ ಬಾರಿಗೆ ಬರೊಬ್ಬರಿ 200 ಕೋಟಿ ರೂ. ಸಂಭಾವನೆ ಪಡೆಯುವ ಮೂಲಕ ಕನ್ನಡದ ಸ್ಟಾರ್ ಇದೀಗ ಭಾರತೀಯ ಚಿತ್ರರಂಗದಲ್ಲಿ ಹೊಸ ದಾಖಲೆ ಬರೆದಿದ್ದಾರೆ.

ಹೌದು, ಅವರು ಬೇರೆ ಯಾರು ಅಲ್ಲ, ನಮ್ಮ ಕನ್ನಡ ಚಿತ್ರರಂಗದ ಖ್ಯಾತಿಯನ್ನು ವಿಶ್ವಾದ್ಯಂತ ಪಸರಿಸಿದ ಕೆಜಿಎಫ್ ಖ್ಯಾತಿ ರಾಕಿಂಗ್ ಸ್ಟಾರ್ ಯಶ್.

ಇತ್ತೀಚಿನ ದಿನಗಳಲ್ಲಿ ನಟರ ಪಾತ್ರಕ್ಕಿಂತ ವಿಲನ್ ಪಾತ್ರಕ್ಕೆ ಹೆಚ್ಚಿನ ಪ್ರಾಮುಖ್ಯತೆ ಬಂದಿದೆ. ಅಷ್ಟೇ ಅಲ್ಲ, ನಾಯಕರ ಸಂಭಾವನೆಯೂ ಹೆಚ್ಚಾಗಿರುವುದರಿಂದ ಖಳನಾಯಕರ ಸಂಭಾವನೆಯೂ ಹೆಚ್ಚಿದೆ. ಈಗ ಹೈ-ಬಜೆಟ್ ಚಿತ್ರಗಳಲ್ಲಿ ಮುಖ್ಯವಾಹಿನಿಯ ಹೀರೋಗಳು ವಿಲನ್ ಆಗುವ ಸಂಖ್ಯೆ ಹೆಚ್ಚುತ್ತಿದೆ. ಅವರಲ್ಲಿ ಕನ್ನಡದ ನಟರೊಬ್ಬರು ಚಿತ್ರವೊಂದಕ್ಕೆ 200 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ.

ಚಿತ್ರರಂಗದಲ್ಲಿ ಸಾಮಾನ್ಯವಾಗಿ ಬಿ-ಟೌನ್ ಮಂದಿಯೇ ಅತಿಹೆಚ್ಚು ಸಂಭಾವನೆ ಪಡೆದುಕೊಳ್ಳುತ್ತಿದ್ದರು. ಬಳಿಕ ದಕ್ಷಿಣದ ಸ್ಟಾರ್ ಗಳಾದ ರಜನಿಕಾಂತ್, ಕಮಲ್ ಹಾಸನ್ ಮತ್ತು ಪ್ರಭಾಸ್ ಸೇರಿದಂತೆ ಹಲವು ನಟರು ದುಪಟ್ಟು ಸಂಭಾವನೆ ಪಡೆಯುತ್ತಿರುವುದು ವರದಿಯಾಗಿದೆ. ಇದೀಗ ಬಾಲಿವುಡ್ ನ್ ಶಾರುಖ್ ಖಾನ್, ಸಲ್ಮಾನ್, ರಣಬೀರ್ ಕಪೂರ್ ಸೇರಿದಂತೆ ದಕ್ಷಿಣ ನಟರ ಸಂಭಾವನೆಯನ್ನು ಮೀರಿಸಿ ನಮ್ಮ ಕನ್ನಡ ನಟ ಇತಿಹಾಸ ಬರೆದಿದ್ದಾರೆ.

ಬಾಲಿವುಡ್‌ ನ ನಿತೇಶ್ ತಿವಾರಿ ನಿರ್ದೇಶದಲ್ಲಿ ಮೂಡಿ ಬರುತ್ತಿರುವ ರಾಮಾಯಣದಲ್ಲಿ ಚಿತ್ರದಲ್ಲಿ ಯಶ್ ರಾವಣ ಪಾತ್ರ ನಿರ್ವಹಿಸುತ್ತಿದ್ದು, ಈ ಪಾತ್ರಕ್ಕೆ ಬರೊಬ್ಬರಿ 200 ಕೋಟಿ ರೂ. ಸಂಭಾವನೆ(ವಿತರಣೆಯ ಪಾಲು ಮತ್ತು ಸಿನಿಮಾದ ಶುಲ್ಕ) ಇದೆ ಎಂದು ವರದಿಯಾಗಿದೆ. ಅಲ್ಲದೇ, ಈ ಚಿತ್ರದಲ್ಲಿನ ರಾಮನ ಪಾತ್ರಧಾರಿ ರಣಬೀರ್ ಕಪೂರ್ ಗಿಂತ ದುಪಟ್ಟು ಎಂದು ಹೇಳಲಾಗುತ್ತಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಬಂಧನ ನೋಟಿಸ್‌ ಹಿಂಪಡೆದ ಕೋರ್ಟ್‌

ಮೈಸೂರು: ಮೈಸೂರು ಹೆಚ್ಚುವರಿ ಸಿವಿಲ್‌ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ವಿಚಾರಣೆ (ಜಯರಾಮು ಆರ್‌ ವಿರುದ್ಧ ಕರ್ನಾಟಕ ರಾಜ್ಯ) ಪ್ರಕರಣದಲ್ಲಿ…

8 hours ago

ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ

ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ ಮೈಸೂರು ಮೃಗಾಲಯದ ಪ್ರಮುಖ ಆಕರ್ಷಣೆಯಾಗಿದ್ದ ಪ್ರವಾಸಿಗರ ಮನಗೆದ್ದಿದ್ದ ಹೆಮ್ಮೆಯ ಹುಲಿ…

11 hours ago

ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಬಂಧನ

ಬೆಂಗಳೂರು: 42ನೇ ಎಸಿಜೆಎಂ ನ್ಯಾಯಾಲಯ ಅರೆಸ್ಟ್‌ ವಾರೆಂಟ್‌ ಜಾರಿಯ ಹಿನ್ನೆಲೆಯಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಅವರನ್ನು ಪೊಲೀಸರು ಬಂಧಿಸಿದ್ದಾರೆ.…

11 hours ago

ಮಡಿಕೇರಿ| ಗಾಂಜಾ ಮಾರಾಟ: ಮೈಸೂರು ಮೂಲದ ನಾಲ್ವರ ಬಂಧನ

ಮಡಿಕೇರಿ: ವಿರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೈಸೂರು ಮೂಲದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಕೊಡಗು…

11 hours ago

ಹನೂರು: ಚಿರತೆ ದಾಳಿಗೆ ಹಸುವಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಿರತೆ ದಾಳಿ ನಡೆಸಿದ ಪರಿಣಾಮ ಹಸು ತೀವ್ರವಾಗಿ ಗಾಯಗೊಂಡಿರುವ ಘಟನೆ…

11 hours ago

ಹನೂರು: ಬಿಆರ್‌ಟಿ ವಲಯ ವ್ಯಾಪ್ತಿಯಲ್ಲಿ ಮತ್ತೆ ಕಾಡ್ಗಿಚ್ಚು: ಅರಣ್ಯ ಪ್ರದೇಶ ಸುಟ್ಟು ಭಸ್ಮ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಅರಣ್ಯ ಪ್ರದೇಶ ವ್ಯಾಪ್ತಿಯ ಲೊಕ್ಕನಹಳ್ಳಿ ಸಮೀಪದ ಹಾವಿನಮೂಲೆ…

11 hours ago