ಯೋಗರಾಜ್ ಭಟ್ ನಿರ್ದೇಶನದ ‘ಮನದ ಕಡಲು’ ಚಿತ್ರವು ಪ್ರೇಕ್ಷಕರನ್ನು ಸೆಳೆಯಲು ಅಷ್ಟೇನೂ ಯಶಸ್ವಿಯಾಗಲಿಲ್ಲ. ಆ ಚಿತ್ರದ ನಂತರ ಅವರು ಮುಂದೇನು ಮಾಡುತ್ತಾರೆ ಎಂಬ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ಯೋಗರಾಜ್ ಭಟ್, ‘ಮತ್ತೆ ಮೊದಲಿನಿಂದ’ ಶುರು ಮಾಡಿದ್ದಾರೆ.
‘ಮತ್ತೆ ಮೊದಲಿನಿಂದ’ ಎನ್ನುವುದು ಯೋಗರಾಜ್ ಭಟ್ ಅವರ ಹೊಸ ಆಲ್ಬಂ. ಅವರು ಸದ್ದಿಲ್ಲದೆ ಒಂದು ವೀಡಿಯೋ ಆಲ್ಬಂ ನಿರ್ಮಿಸಿ-ನಿರ್ದೇಶಿಸಿದ್ದು, ಈ ಆಲ್ಬಂ ಮೂಲಕ ಸಂಜನ್ ಕಜೆ ಎಂಬ ಹೊಸ ಪ್ರತಿಭೆಯನ್ನ ಪರಿಚಯಿಸುತ್ತಿದ್ದಾರೆ. ಈ ಆಲ್ಬಂ ನಿರ್ಮಾಣದಲ್ಲಿ ಯೋಗರಾಜ್ ಭಟ್ ಅವರಿಗೆ ಶ್ರೀನಿಧಿ ಹಾಗೂ ಪ್ರಸನ್ನ ಸಹ ಜೊತೆಯಾಗಿದ್ದಾರೆ.
‘ಮತ್ತೆ ಮೊದಲಿಂದ’ ಆಲ್ಬಂನಲ್ಲಿ ನಾಲ್ಕು ಹಾಡುಗಳಿದ್ದು, ಈ ಆಲ್ಬಂನಲ್ಲಿ ಕರಾವಳಿ ಮೂಲದ ನೂತನ ಪ್ರತಿಭೆ ಸಂಜನ್ ಕಜೆ ನಾಯಕನಾಗಿ ಮತ್ತು ನಿಧಿ ಸುಬ್ಬಯ್ಯ, ಅಮೀತ ಕುಲಾಲ್, ದೇವಿಕಾ ಶಿಂಧೆ ಹಾಗೂ ಅಂಜಲಿ ಗೌಡ ನಾಯಕಿಯರಾಗಿ ಕಾಣಿಸಿಕೊಂಡಿದ್ದಾರೆ. ಈ ಆಲ್ಬಂನ ‘ಮೋಹದ ಬಣ್ಣ ನೀಲಿ…’ ಎಂಬ ಹಾಡು ಇತ್ತೀಚೆಗೆ ಬಿಡುಗಡೆಯಾಗಿದೆ. ಈ ಹಾಡನ್ನು ಖ್ಯಾತ ಗಾಯಕ ವಿಜಯ್ ಪ್ರಕಾಶ್ ಹಾಡಿದ್ದಾರೆ. ಅನಿರುದ್ಧ್ ಶಾಸ್ತ್ರಿ ಸಂಗೀತ ಸಂಯೋಜಿಸಿದ್ದಾರೆ.
ಈ ಆಲ್ಬಂನಲ್ಲಿ ನಾಲ್ಕು ಗೀತೆಗಳಿದ್ದು, ನಾಲ್ಕೂ ಗೀತೆಗಳನ್ನು ಒಬ್ಬೊಬ್ಬ ಸಂಗೀತ ನಿರ್ದೇಶಕ ಸಂಗೀತ ಸಂಯೋಜಿಸಿದ್ದಾರೆ. ಈ ಹಾಡುಗಳನ್ನು ನಾಲ್ವರು ಗಾಯಕರು ಮತ್ತು ಗಾಯಕಿಯರು ಹಾಡಿರುವುದು ವಿಶೇಷ. ನಾಲ್ಕು ಗೀತೆಗಳ ವೀಡಿಯೋದಲ್ಲಿ ಸಂಜನ್ ಕಜೆ ಜೊತೆ ನಿಧಿ ಸುಬ್ಬಯ್ಯ, ಅಮೀತ ಎಸ್.ಕುಲಾಲ್, ದೇವಿಕಾ ಶಿಂಧೆ, ಅಂಜಲಿ ಗೌಡ ನಾಯಕಿಯರಾಗಿ ಜೊತೆಯಾಗಿದ್ದಾರೆ.
ಸದ್ಯ ಒಂದು ಹಾಡು ಬಿಡುಗಡೆಯಾಗಿದ್ದು, ಮುಂದಿನ ದಿನಗಳಲ್ಲಿ ಮೂರು ಹಾಡುಗಳು ಹಂತಹಂತವಾಗಿ ಬಿಡುಗಡೆ ಆಗಲಿದೆ. ಈ ಹಾಡು ಪಂಚರಂಗಿ ಆಡಿಯೋದಲ್ಲಿ ಬಿಡುಗಡೆ ಆಗಿದೆ.
ನಂಜನಗೂಡು : ನವಜಾತ ಶಿಶುವನ್ನು ನಾಲೆಗೆ ಎಸೆದ ದುರಂತ ಘಟನೆ ನಂಜನಗೂಡು ತಾಲ್ಲೂಕಿನ ನಗರ್ಲೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶ್ರೀ…
ಬಾಗಲಕೋಟೆ : ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ…
ಹನೂರು : ಶ್ರೀಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುವ ದಾಸೋಹ, ಲಾಡು ಪ್ರಸಾದ ತಯಾರಿಸಲು ಯಾವುದೇ ರೀತಿಯ ಸಿಲಿಂಡರ್ ಕೊರತೆಯಾಗಿಲ್ಲ…
ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಯುಗಾದಿ ಜಾತ್ರಾ ಮಹೋತ್ಸವಕ್ಕೆ…
ಮೈಸೂರು : ನಗರದ ಹೊರವಲಯದ ಕೆಂಪೇಗೌಡ ವೃತ್ತ(ಮಣಿಪಾಲ್ ಜಂಕ್ಷನ್)ದಲ್ಲಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ದಿ ಪ್ರಾಧಿಕಾರದಿಂದ ನಡೆಯುತ್ತಿರುವ ಕಾಮಗಾರಿಗಳನ್ನು ಸಂಸದ ಯದುವೀರ್…
ಚಿಕ್ಕಮಗಳೂರು: ತಾಲ್ಲೂಕಿನ ಮುತ್ತೋಡಿ ಅರಣ್ಯ ವಲಯದಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಪ್ರಮಾಣದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದೆ. ಪರಿಣಾಮ ಅಪರೂಪದ ಅರಣ್ಯ…