ಅಜೇಯ್ ರಾವ್ ಅಭಿನಯದ ಮತ್ತು ನಿರ್ಮಾಣದ ‘ಯುದ್ಧಕಾಂಡ’ ಚಿತ್ರವು ಏಪ್ರಿಲ್ 18ರಂದು ಬಿಡುಗಡೆಯಾಗುತ್ತಿದೆ. ಈ ಮಧ್ಯೆ, ನಟ-ನಿರ್ದೇಶಕ ರವಿಚಂದ್ರನ್ ಅವರು ಚಿತ್ರದ ಐದು ಗೋಲ್ಡ್ ಕ್ಲಾಸ್ ಟಿಕೆಟ್‍ಗಳನ್ನು ಖರೀದಿಸಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.
ಭಾನುವಾರ ಬೆಳಿಗ್ಗೆ ರವಿಚಂದ್ರನ್, ‘ಯುದ್ಧಕಾಂಡ’ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ ಬಂದಿದ್ದರು. ಈ ಸಂದರ್ಭದಲ್ಲಿ ಶಂಖ ಊದುವ ಮೂಲಕ ಟ್ರೇಲರ್ ಬಿಡುಗಡೆ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ರವಿಚಂದ್ರನ್, ‘ನಾನು ಬರುವಾಗ ಅಜೇಯ್ ಅವರ ಒಂದಿಷ್ಟು ಸಂದರ್ಶನಗಳನ್ನು ನೋಡಿಕೊಂಡು ಬಂದೆ. ಈ ಚಿತ್ರಕ್ಕಾಗಿ ಸಾಕಷ್ಟು ಸಾಲ ಮಾಡಿದ್ದೇನೆ ಎಂದು ಅಜೇಯ್ ಹಲವು ಬಾರಿ ಹೇಳಿಕೊಂಡಿದ್ದಾರೆ. ಅದನ್ನು ಕೇಳಿ ನನಗೆ ನನ್ನ ಸಾಲದ ನೆನಪಾಯಿತು. ಸಾಲ ಮಾಡೋದಕ್ಕೆ ತಾಕತ್ತು ಬೇಡ. ಸಾಲ ತೀರಿಸೋಕೆ ತಾಖತ್ತು ಬೇಕು. ನಾನು ಕೋಟಿಗಟ್ಟಲೆ ಹಾಕಿ ಸಿನಿಮಾ ಮಾಡಿದವನು. ನನಗೆ ದುಡ್ಡು ದುಡ್ಡಿನ ಬೆಲೆ ಗೊತ್ತಿಲ್ಲ. ನನಗೆ 100 ಡ್ಯಾನ್ಸರ್ಸ್ ಬೇಕು, 100 ಫೈಟರ್ಸ್ ಬೇಕು ಎಂದು ಹೇಳಿಬಿಡುತ್ತಿದ್ದೆ. ಅಪ್ಪ ಎಲ್ಲಿಂದ ಹಣ ತರುತ್ತಿದ್ದರು ಅಂತ ನಾನು ಯೋಚನೆ ಮಾಡುತ್ತಿರಲಿಲ್ಲ. ಅವರು ಇಲ್ಲದಿದ್ದಾಗ ನನಗೆ ಕಷ್ಟ ಗೊತ್ತಾಯಿತು. ದುಡ್ಡಿಲ್ಲದಿದ್ದರೂ ಇಲ್ಲಿ ಕನಸು ಮುಖ್ಯ. ಎಷ್ಟು ದುಡ್ಡಿದೆಯೋ, ಅಷ್ಟರಲ್ಲಿ ಸಿನಿಮಾ ಮಾಡುವುದನ್ನು ಕಲಿಯಬೇಕು. ಇಲ್ಲಿ ಕಂಟೆಂಟ್ ಮುಖ್ಯ, ಏನು ಹೇಳುತ್ತಿದ್ದೇವೆ ಅನ್ನೋದಷ್ಟೇ ಮುಖ್ಯ’ ಎಂದರು.
‘ಯುದ್ಧಕಾಂಡ’ ಚಿತ್ರವನ್ನು ನೋಡುವುದಾಗಿ ಹೇಳಿದ ರವಿಚಂದ್ರನ್, ‘ನಿಮ್ಮ ಚಿತ್ರತಂಡ ನೋಡಿದರೆ, ನಿಮ್ಮಲ್ಲಿ ಶ್ರದ್ಧೆ ಕಾಣುತ್ತಿದೆ. ನಿಮ್ಮ ತಂಡದಲ್ಲಿ ಒಂದು ತೃಪ್ತಿ ಮತ್ತು ಆತ್ಮವಿಶ್ವಾಸವಿದೆ. ನೀವು ಇಷ್ಟೆಲ್ಲಾ ಮಾಡಿ ಸಿನಿಮಾ ಮಾಡಿರುವಾಗ ನಾನು ಏನು ಕೊಡೋಕೆ ಸಾಧ್ಯ? ನಾನು ಪ್ರೇಕ್ಷಕನಾಗಿ ಸಿನಿಮಾ ನೋಡುತ್ತೇನೆ. ಸಿನಿಮಾ ನೋಡಿ ಫೋನ್ ಮಾಡುತ್ತೇನೆ’ ಎಂದು ತಕ್ಷಣವೇ ಜೇಬಿನಿಂದ ದುಡ್ಡು ತೆಗೆದು ಅಜೇಯ್‍ಗೆ ಕೊಟ್ಟು, ಚಿತ್ರದ ಐದು ಗೋಲ್ಡ್ ಕ್ಲಾಸ್ ಟಿಕೆಟ್ ಕಾದಿರಿಸಿದರು.
‘ಯುದ್ಧಕಾಂಡ’ ಚಿತ್ರಕ್ಕೆ ಪವನ್ ಭಟ್ ಕಥೆ-ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದು, ಚಿತ್ರದಲ್ಲಿ ಅಜೇಯ್ ರಾವ್, ಅರ್ಚನಾ ಜೋಯಿಸ್, ಪ್ರಕಾಶ್ ಬೆಳವಾಡಿ, ಟಿ.ಎಸ್. ನಾಗಾಭರಣ ಮುಂತಾದವರು ನಟಿಸಿದ್ದಾರೆ. ಕಾರ್ತಿಕ್ ಶರ್ಮ ಛಾಯಾಗ್ರಹಣ ಮತ್ತು ಹೇಮಂತ್ ಜೋಯಿಸ್ ಅವರ ಸಂಗೀತ ಈ ಚಿತ್ರಕ್ಕಿದೆ.
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಗೆ ಭಾರತ ಸರ್ಕಾರ ಪ್ರತೀಕಾರ ತೀರಿಸಿಕೊಂಡಿದ್ದು, ನೆರೆಯ ದೇಶ ಪಾಕಿಸ್ತಾನಕ್ಕೆ…
ಶಿವಮೊಗ್ಗ: ಜಮ್ಮು-ಕಾಶ್ಮೀರದ ಪಹಲ್ಗಾಮ್ನಲ್ಲಿ ಉಗ್ರರ ಗುಂಡಿನ ದಾಳಿಗೆ ಬಲಿಯಾದ ಮಂಜುನಾಥ್ ಪಾರ್ಥಿವ ಶರೀರದ ಮೆರವಣಿಗೆ ಹಾಗೂ ಅಂತ್ಯಸಂಸ್ಕಾರ ನೆರವೇರಿಸುವ ಹಿನ್ನೆಲೆಯಲ್ಲಿ…
ಹುಣಸೂರು: ಹುಣಸೂರು ವಿಧಾನಸಭಾ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಶಾಸಕ ಜಿ.ಡಿ.ಹರೀಶ್ಗೌಡ ಆದ್ಯತೆ ನೀಡಿದ್ದು, ಕಳೆದ ಹಲವು ವರ್ಷಗಳಿಂದ ನೆನೆಗುದ್ದಿಗೆ ಬಿದ್ದಿದ್ದ…
ಹನೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ನಾಳೆ ಸಚಿವ ಸಂಪುಟ ಸಭೆ ನಡೆಯಲಿದ್ದು, ಇದಕ್ಕಾಗಿ ಬೆಟ್ಟದಲ್ಲಿ…
ಮೈಸೂರು: ಜಮ್ಮು-ಕಾಶ್ಮೀರದ ಪಹಲ್ಗಾಮ್ನಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಉಗ್ರರು ಗುಂಡಿನ ದಾಳಿ ನಡೆಸಿದ್ದು, ಹಲವರು ಸಾವನ್ನಪ್ಪಿದ್ದಾರೆ. ಉಗ್ರರ ದಾಳಿಗೆ ಸಿಲುಕಿ ಸಾವನ್ನಪ್ಪಿರುವವರಿಗೆ…
ಮೈಸೂರು: ಜಮ್ಮು-ಕಾಶ್ಮೀರದ ಪಹಲ್ಗಾಮ್ನಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಉಗ್ರರು ಗುಂಡಿನ ದಾಳಿ ನಡೆಸಿದ್ದು, ಹಲವರು ಸಾವನ್ನಪ್ಪಿದ್ದಾರೆ. ಉಗ್ರರ ದಾಳಿಗೆ ಸಿಲುಕಿ ಸಾವನ್ನಪ್ಪಿರುವವರಿಗೆ…