ಮನರಂಜನೆ

21 ದಿನಕ್ಕೆ ಓಟಿಟಿಗೆ ಬಂದ ‘ಯುವ’.. ಆದ್ರೆ….

ಕಳೆದ ಮಾರ್ಚ್‌ 29ರಂದು ತೆರೆಗೆ ಅಪ್ಪಳಿಸಿದ್ದ ರಾಜ್‌ವಂಶದ ಕುಡಿ ಯುವ ರಾಜ್‌ಕುಮಾರ್‌ ನಟನೆಯ ಯುವ ಚಿತ್ರಮಂದಿರಗಳಲ್ಲಿ ಯಶಸ್ಸು ಸಾಧಿಸಿದ ಬೆನ್ನಲ್ಲೇ ಇದೀಗ ಓಟಿಟಿಗೆ ಲಗ್ಗೆ ಇಟ್ಟಿದೆ.

ಕೊರೊನಾ ನಂತರ ಚಿತ್ರಮಂದಿರಗಳಲ್ಲಿ ಬಿಡುಗಡೆಯಾದ ಚಿತ್ರಗಳು ಬಹುಬೇಗನೆ ಓಟಿಟಿ ಪ್ರವೇಶಿಸುವುದು ಸಾಮಾನ್ಯವಾಗಿದೆ. ಆದರೆ ಇದೀಗ ಯುವ ಚಿತ್ರ ಬಿಡುಗಡೆಯಾದ ಕೇವಲ 21 ದಿನಗಳಿಗೆ ಓಟಿಟಿಯಲ್ಲಿ ಸ್ಟ್ರೀಮ್‌ ಆಗುತ್ತಿದೆ.

ಅಂದಹಾಗೆ ಯುವ ಚಿತ್ರ ಅಮೆಜಾನ್‌ ಪ್ರೈಮ್‌ ಓಟಿಟಿ ಅಪ್ಲಿಕೇಶನ್‌ನಲ್ಲಿ ಸ್ಟ್ರೀಮ್‌ ಆಗುತ್ತಿದ್ದು, ಸದ್ಯಕ್ಕೆ ಬಾಡಿಗೆ ಆಧಾರದ ಮೇಲೆ ಮಾತ್ರ ಚಿತ್ರವನ್ನು ವೀಕ್ಷಿಸಬಹುದಾಗಿದೆ. ಹೌದು, ಅಮೆಜಾನ್‌ ಪ್ರೈಮ್‌ ಚಂದಾದಾರತ್ವ ಹೊಂದಿರುವ ಎಲ್ಲರೂ ಸಹ ಈ ಚಿತ್ರವನ್ನು ವೀಕ್ಷಿಸಲಾಗುವುದಿಲ್ಲ. ಯುವ ಚಿತ್ರವನ್ನು ವೀಕ್ಷಿಸಬೇಕೆಂದರೆ 349 ರೂಪಾಯಿಗಳನ್ನು ಪಾವತಿಸಿ ಬಾಡಿಗೆಗೆ ಪಡೆಯಬೇಕಿದೆ.

 

ಶ್ರೀನಿವಾಸ ಎ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನನ್ನೂರು. ಡಿ ಬನುಮಯ್ಯ ಕಾಲೇಜಿನಲ್ಲಿ ಪದವಿ ಮುಗಿಸಿದ ನಾನು ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದೇನೆ. ಒನ್‌ಇಂಡಿಯಾ ಕನ್ನಡದಲ್ಲಿ ಸೋಷಿಯಲ್‌ ಮೀಡಿಯಾ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಆರಂಭಿಸಿ ಮೈಖೇಲ್‌ ಕನ್ನಡ ಹಾಗೂ ಕನ್ನಡ ಫಿಲ್ಮಿಬೀಟ್‌ನಲ್ಲಿ ಮೂರು ವರ್ಷಗಳ ಕಾಲ ಸಬ್‌ಎಡಿಟರ್‌ ಆಗಿ ಕೆಲಸ ನಿರ್ವಹಿಸಿದ್ದೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯ ಡಿಜಿಟಲ್‌ ಟೀಮ್‌ ಲೀಡ್‌ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಕ್ರೀಡೆ ಹಾಗೂ ಸಿನಿಮಾ ನನ್ನ ಆಸಕ್ತಿ ಕ್ಷೇತ್ರಗಳಾಗಿದ್ದು, ಪ್ರವಾಸ ಮತ್ತು ಫೋಟೋಗ್ರಫಿ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಕೆ.ಜೆ.ಜಾರ್ಜ್‌ ರಾಜೀನಾಮೆ ಕೊಟ್ಟಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ಇಂಧನ ಇಲಾಖೆಯಲ್ಲಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಹಸ್ತಕ್ಷೇಪಕ್ಕೆ ಬೇಸತ್ತು ಇಂಧನ ಸಚಿವ ಕೆ.ಜೆ.ಜಾರ್ಜ್‌ ರಾಜೀನಾಮೆ ನೀಡಿದ್ದರು ಎಂಬ…

28 mins ago

ವಿಕಲಚೇತನರಿಗಾಗಿಯೇ ಬೃಹತ್‌ ಉದ್ಯೋಗ ಮೇಳ ಆಯೋಜನೆ: ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್‌

ಬೆಂಗಳೂರು: ವಿಕಲಚೇತನರಿಗಾಗಿಯೇ ಮುಂದಿನ ಮೂರು ತಿಂಗಳಲ್ಲಿ ನಗರದ ಕಂಠೀರವ ಕ್ರೀಡಾಂಗಣದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗುವುದು ಎಂದು ಸಚಿವ ಡಾ.ಶರಣಪ್ರಕಾಶ್…

29 mins ago

ಕೊಡಗಿನಲ್ಲಿ ಮುಂದುವರೆದ ಆನೆ–ಮಾನವ ಸಂಘರ್ಷ: ಕಾಡಾನೆ ದಾಳಿಗೆ ವ್ಯಕ್ತಿ ದಾರುಣ ಸಾವು

ಕೊಡಗು: ಜಿಲ್ಲೆಯಲ್ಲಿ ಆನೆ–ಮಾನವ ಸಂಘರ್ಷ ಮತ್ತೆ ಜೀವ ಬಲಿ ಪಡೆದಿದೆ. ಸಿದ್ದಾಪುರ ಸಮೀಪದ ಗೌರಿ ಬೆಟ್ಟ ಬಳಿ ಕಾಡಾನೆ ದಾಳಿಗೆ…

50 mins ago

ವಿಮಾನ ದುರಂತದಲ್ಲಿ ಅಜಿತ್‌ ಪವಾರ್‌ ಸಾವು ಪ್ರಕರಣ: ದುರಂತದ ಸಂಪೂರ್ಣ ತನಿಖೆಯಾಗಲಿದೆ ಎಂದ ಯದುವೀರ್‌ ಒಡೆಯರ್‌

ಮಡಿಕೇರಿ: ವಿಮಾನ ದುರಂತದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಮತಾ ಬ್ಯಾನರ್ಜಿ ಕತೆ ಕಟ್ಟುತ್ತಿದ್ದಾರೆ ಎಂದು…

1 hour ago

ಶಾಲಾ ವಾಹನವನ್ನು ಅಟ್ಟಿಸಿಕೊಂಡು ಬಂದ ಒಂಟಿ ಸಲಗ: ಭಯಭೀತರಾದ ವಿದ್ಯಾರ್ಥಿಗಳು

ಮಡಿಕೇರಿ: ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಸಮೀಪದ ಮಾಲ್ದಾರೆ ವ್ಯಾಪ್ತಿಯಲ್ಲಿ ಬೆಳಿಗ್ಗೆ ಶಾಲಾ ಬಸ್ಸನ್ನು ಒಂಟಿ ಸಲಗ ಅಟ್ಟಿಸಿಕೊಂಡು ಬಂದ ಘಟನೆ…

2 hours ago

ಸುಳ್ವಾಡಿ ವಿಷಪ್ರಸಾದ ದುರಂತ ಪ್ರಕರಣ: ಮಹದೇಶ್ವರ ಬೆಟ್ಟಕ್ಕೆ ಹೋಗದಂತೆ ಇಮ್ಮಡಿ ಮಹದೇವಸ್ವಾಮಿಗೆ ನಿರ್ಬಂಧ

ಚಾಮರಾಜನಗರ: ಸುಳ್ವಾಡಿ ವಿಷಪ್ರಸಾದ ದುರಂತ ಪ್ರಕರಣದ ಆರೋಪಿ ಇಮ್ಮಡಿ ಮಹದೇವಸ್ವಾಮಿಗೆ ಮಲೆ ಮಹದೇಶ್ವರ ಬೆಟ್ಟಕ್ಕೆ ಪ್ರವೇಶ ನಿರ್ಬಂಧಿಸಲಾಗಿದೆ. ಈ ಕುರಿತು…

2 hours ago