Mysore
23
overcast clouds
Light
Dark

ವಿಚ್ಛೇದನ ಪ್ರಕರಣ: ಕೋರ್ಟ್‌ ಮೆಟ್ಟಿಲೇರಿದ ವರನಟ ರಾಜ್‌ಕುಮಾರ್‌ ಕುಡಿ

ಬೆಂಗಳೂರು: ಸ್ಯಾಂಡಲ್‌ವುಡ್‌ ಅಂಗಳದಲ್ಲಿ ಇತ್ತೀಚೆಗೆ ಡಿವೋರ್ಸ್‌ ಪ್ರಕರಣಗಳು ಹೆಚ್ಚಾಗುತ್ತಿದೆ. ಮೊನ್ನೆಯಷ್ಟೇ ಚಂದನವನದ ಕ್ಯೂಟ್‌‌ ಕಪಲ್ ಚಂದನ್‌ ಶೆಟ್ಟಿ ಹಾಗೂ ನಿವೇದಿತಾ ಗೌಡ ಅವರ ವಿಚ್ಛೇದನ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ.

ಕನ್ನಡ ಚಿತ್ರರಂಗದ ಮೇರು ನಟ ಡಾ. ರಾಜ್‌ಕುಮಾರ್‌ ಅವರ ಕುಡಿ ಯುವ ರಾಜ್‌ಕುಮಾರ್‌ ಅವರು ವಿಚ್ಛೇದನ ಪಡೆಯಲು ಮುಂದಾಗಿದ್ದಾರೆ.

ಯುವ ರಾಜ್‌ಕುಮಾರ್‌ ಅವರು ತಮ್ಮ ಪತ್ನಿ ಶ್ರೀದೇವಿ ಅವರಿಂದ ವಿಚ್ಛೇದನ ಕೋರಿ ಕೌಟುಂಬಿಕ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ಅವರಿಬ್ಬರ ನಡುವಿನ ಕೆಲವು ಮನಸ್ಥಾಪಗಳು ಬಂದಿದ್ದು, ಇದರಿಂದಾಗಿ ವಿಚ್ಛೇದನ ಪಡೆಯಲು ಮುಂದಾಗಿದ್ದಾರೆ ಎನ್ನಲಾಗಿದೆ.

ಯುವರಾಜ್‌ ಕುಮಾರ್‌ ಅವರು 4 ವರ್ಷಗಳ ಹಿಂದೆ ಶ್ರೀದೇವಿ ಅವರನ್ನು ಪ್ರೀತಿಸಿ ಮದುವೆಯಾಗಿದ್ದರು. ಇದಾದ ಕೆಲವು ವರ್ಷಗಳ ಬಳಿಕ ಈ ಇಬ್ಬರ ನಡುವೆ ಮನಸ್ಥಾಪಗಳು ಹೆಚ್ಚಾಗಿದ್ದು, ಬೇರಾಗುವ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ.

ಪತ್ನಿಯಿಂದ ಅಗೌರವ, ಮಾನಸಿಕ ಹಿಂಸೆ ಉಂಟಾಗಿದೆ ಎಂದು ಆರೋಪಿಸಿ ವಿಚ್ಛೇದನ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ. ಸದ್ಯ ಇವರಿಗೆ ಸಮನ್ಸ್‌ ಜಾರಿ ಮಾಡಿರುವ ನ್ಯಾಯಾಲಯ ಜುಲೈ 4ಕ್ಕೆ ಪ್ರಕರಣ ಮುಂದೂಡಿದ್ದಾರೆ.