ಬೆಂಗಳೂರು: ಸ್ಯಾಂಡಲ್‌ವುಡ್ ಅಂಗಳದಲ್ಲಿ ಇತ್ತೀಚೆಗೆ ಡಿವೋರ್ಸ್ ಪ್ರಕರಣಗಳು ಹೆಚ್ಚಾಗುತ್ತಿದೆ. ಮೊನ್ನೆಯಷ್ಟೇ ಚಂದನವನದ ಕ್ಯೂಟ್ ಕಪಲ್ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಅವರ ವಿಚ್ಛೇದನ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ.
ಕನ್ನಡ ಚಿತ್ರರಂಗದ ಮೇರು ನಟ ಡಾ. ರಾಜ್‌ಕುಮಾರ್ ಅವರ ಕುಡಿ ಯುವ ರಾಜ್‌ಕುಮಾರ್ ಅವರು ವಿಚ್ಛೇದನ ಪಡೆಯಲು ಮುಂದಾಗಿದ್ದಾರೆ.
ಯುವ ರಾಜ್‌ಕುಮಾರ್ ಅವರು ತಮ್ಮ ಪತ್ನಿ ಶ್ರೀದೇವಿ ಅವರಿಂದ ವಿಚ್ಛೇದನ ಕೋರಿ ಕೌಟುಂಬಿಕ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ಅವರಿಬ್ಬರ ನಡುವಿನ ಕೆಲವು ಮನಸ್ಥಾಪಗಳು ಬಂದಿದ್ದು, ಇದರಿಂದಾಗಿ ವಿಚ್ಛೇದನ ಪಡೆಯಲು ಮುಂದಾಗಿದ್ದಾರೆ ಎನ್ನಲಾಗಿದೆ.
ಯುವರಾಜ್ ಕುಮಾರ್ ಅವರು 4 ವರ್ಷಗಳ ಹಿಂದೆ ಶ್ರೀದೇವಿ ಅವರನ್ನು ಪ್ರೀತಿಸಿ ಮದುವೆಯಾಗಿದ್ದರು. ಇದಾದ ಕೆಲವು ವರ್ಷಗಳ ಬಳಿಕ ಈ ಇಬ್ಬರ ನಡುವೆ ಮನಸ್ಥಾಪಗಳು ಹೆಚ್ಚಾಗಿದ್ದು, ಬೇರಾಗುವ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ.
ಪತ್ನಿಯಿಂದ ಅಗೌರವ, ಮಾನಸಿಕ ಹಿಂಸೆ ಉಂಟಾಗಿದೆ ಎಂದು ಆರೋಪಿಸಿ ವಿಚ್ಛೇದನ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ. ಸದ್ಯ ಇವರಿಗೆ ಸಮನ್ಸ್ ಜಾರಿ ಮಾಡಿರುವ ನ್ಯಾಯಾಲಯ ಜುಲೈ 4ಕ್ಕೆ ಪ್ರಕರಣ ಮುಂದೂಡಿದ್ದಾರೆ.
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…
ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…