‘ಎಕ್ಕ’ ಚಿತ್ರದ ಬಿಡಗಡೆಗೆ ದಿನಗಣನೆ ಪ್ರಾರಂಭವಾಗಿದೆ. ಈಗಾಗಲೇ ಚಿತ್ರದ ಶೀರ್ಷಿಕೆ ಗೀತೆ ಹಾಗೂ ‘ಬ್ಯಾಂಗಲ್ ಬಂಗಾರಿ …’ ಹಾಡುಗಳು ಬಿಡುಗಡೆಯಾಗಿ ಯಶಸ್ವಿಯಾಗಿದೆ. ಈಗ ಇನ್ನೊಂದು ಹಾಡಿನ ಸರದಿ. ‘ಎಕ್ಕ’ ಚಿತ್ರದ ‘ರೌಡಿ ರೈಮ್ಸ್ …’ ಎಂಬ ಹಾಡು ಆನಂದ್ ಆಡಿಯೋ ಯೂಟ್ಯೂಬ್ ಚಾನಲ್‍ನಲ್ಲಿ ಅನಾವರಣ ಮಾಡಲಾಗಿದೆ.
ಈ ಹಾಡಿನಲ್ಲಿ ರೌಡಿಗಳ ಚಿತ್ರಣವೇ ಇದೆ. ಇದರಲ್ಲಿ A to Z ವಿಷಯ ಇದೆ. ಅಂದ್ರೆ A ಅಕ್ಷರದಿಂದ Z ಅಕ್ಷರದವರೆಗೂ ರೌಡಿಗಳ ಮ್ಯಾಟರ್ ಅನ್ನ ಇಲ್ಲಿ ಮಜವಾಗಿಯೇ ಹೇಳಲಾಗಿದೆ. ‘ರೌಡಿ ರೈಮ್ಸ್ …’ ಹಾಡಿಗೆ ನಾಗಾರ್ಜುನ್ ಶರ್ಮಾ ಹಾಗೂ ನಿರ್ದೇಶಕ ರೋಹಿತ್ ಪದಕಿ ಸಾಹಿತ್ಯ ಬರೆದಿದ್ದು, ಚರಣ್ ರಾಜ್ ಸಂಗೀತ ಸಂಯೋಜಿಸಿದ್ದಾರೆ. ಇನ್ನು, ಚರಣ್ ರಾಜ್ ಹಾಗೂ ರೋಹಿತ್ ಪದಕಿ ರೌಡಿ ರೈಮ್ಸ್ಗೆ ಧ್ವನಿಯಾಗಿದ್ದಾರೆ.
ಇದಕ್ಕೂ ಮುನ್ನ, ‘ಎಕ್ಕ’ ಚಿತ್ರದ ‘ಬ್ಯಾಂಗಲ್ ಬಂಗಾರಿ …’ ಹಾಡು ಕೆಲವು ದಿನಗಳ ಹಿಂದೆ ಬಿಡುಗಡೆಯಾಗಿ ಜನಮನ್ನಣೆ ಪಡೆದಿತ್ತು. ಈ ಹಾಡು ದಾಖಲೆ ಸಂಖ್ಯೆಯಲ್ಲಿ ರೀಲ್ಸ್ ಆಗಿದೆ. ಅಷ್ಟೇ ಅಲ್ಲ, ಈ ಹಾಡು ಕೇವಲ 22 ದಿನಗಳಲ್ಲಿ 10 ಮಿಲಿಯನ್ ವೀಕ್ಷಣೆ ಕಂಡಿದ್ದು, ಅತೀ ಹೆಚ್ಚು ವೀಕ್ಷಣೆ ಪಡೆದ ಹಾಡುಗಳ ಪೈಕಿ 29ನೇ ಸ್ಥಾನ ಪಡೆದಿದೆ. ಈ ಮೂಲಕ ಹೊಸ ದಾಖಲೆ ಬರೆದಿದೆ.
‘ಎಕ್ಕ’ ಚಿತ್ರವನ್ನು ರೋಹಿತ್ ಪದಕಿ ನಿರ್ದೇಶನ ಮಾಡಿದ್ದು, ಅಶ್ವಿನಿ ಪುನೀತ್ ರಾಜ್‌ಕುಮಾರ್, ಜಯಣ್ಣ, ಕಾರ್ತಿಕ್ ಗೌಡ ಸೇರಿ ಜಂಟಿಯಾಗಿ ಈ ಸಿನಿಮಾ ನಿರ್ಮಿಸಿದ್ದಾರೆ. ಚಿತ್ರದಲ್ಲಿ ಆದಿತ್ಯ, ಅತುಲ್ ಕುಲಕರ್ಣಿ, ಸಂಜನಾ ಆನಂದ್, ಸಂಪದ ಹುಲಿವಾನ ಸೇರಿ ಇಬ್ಬರು ನಾಯಕಿಯರಿದ್ದಾರೆ. ಚರಣ್ ರಾಜ್ ಸಂಗೀತ, ಸತ್ಯ ಹೆಗಡೆ ಛಾಯಾಗ್ರಹಣ ಈ ಚಿತ್ರಕ್ಕಿದೆ.
ಜುಲೈ 18ರಂದು ‘ಎಕ್ಕ’ ಸಿನಿಮಾ ರಾಜ್ಯಾದ್ಯಂತ ಬಿಡುಗಡೆ ಆಗುತ್ತಿದೆ.





