ಮನರಂಜನೆ

‘ರೌಡಿ ರೈಮ್ಸ್ …’ ಹೇಳಿಕೊಡ್ತಿದ್ದಾರೆ ಯುವ; ‘ಎಕ್ಕ’ ಚಿತ್ರದ ಇನ್ನೊಂದು ಹಾಡು ಬಿಡುಗಡೆ

‘ಎಕ್ಕ’ ಚಿತ್ರದ ಬಿಡಗಡೆಗೆ ದಿನಗಣನೆ ಪ್ರಾರಂಭವಾಗಿದೆ. ಈಗಾಗಲೇ ಚಿತ್ರದ ಶೀರ್ಷಿಕೆ ಗೀತೆ ಹಾಗೂ ‘ಬ್ಯಾಂಗಲ್ ಬಂಗಾರಿ …’ ಹಾಡುಗಳು ಬಿಡುಗಡೆಯಾಗಿ ಯಶಸ್ವಿಯಾಗಿದೆ. ಈಗ ಇನ್ನೊಂದು ಹಾಡಿನ ಸರದಿ. ‘ಎಕ್ಕ’ ಚಿತ್ರದ ‘ರೌಡಿ ರೈಮ್ಸ್ …’ ಎಂಬ ಹಾಡು ಆನಂದ್ ಆಡಿಯೋ ಯೂಟ್ಯೂಬ್ ಚಾನಲ್‍ನಲ್ಲಿ ಅನಾವರಣ ಮಾಡಲಾಗಿದೆ.

ಈ ಹಾಡಿನಲ್ಲಿ ರೌಡಿಗಳ ಚಿತ್ರಣವೇ ಇದೆ. ಇದರಲ್ಲಿ A to Z ವಿಷಯ ಇದೆ. ಅಂದ್ರೆ A ಅಕ್ಷರದಿಂದ Z ಅಕ್ಷರದವರೆಗೂ ರೌಡಿಗಳ ಮ್ಯಾಟರ್ ಅನ್ನ ಇಲ್ಲಿ ಮಜವಾಗಿಯೇ ಹೇಳಲಾಗಿದೆ. ‘ರೌಡಿ ರೈಮ್ಸ್ …’ ಹಾಡಿಗೆ ನಾಗಾರ್ಜುನ್ ಶರ್ಮಾ ಹಾಗೂ ನಿರ್ದೇಶಕ ರೋಹಿತ್ ಪದಕಿ ಸಾಹಿತ್ಯ ಬರೆದಿದ್ದು, ಚರಣ್‍ ರಾಜ್‍ ಸಂಗೀತ ಸಂಯೋಜಿಸಿದ್ದಾರೆ. ಇನ್ನು, ಚರಣ್ ರಾಜ್ ಹಾಗೂ ರೋಹಿತ್ ಪದಕಿ ರೌಡಿ ರೈಮ್ಸ್ಗೆ ಧ್ವನಿಯಾಗಿದ್ದಾರೆ.

ಇದಕ್ಕೂ ಮುನ್ನ, ‘ಎಕ್ಕ’ ಚಿತ್ರದ ‘ಬ್ಯಾಂಗಲ್ ಬಂಗಾರಿ …’ ಹಾಡು ಕೆಲವು ದಿನಗಳ ಹಿಂದೆ ಬಿಡುಗಡೆಯಾಗಿ ಜನಮನ್ನಣೆ ಪಡೆದಿತ್ತು. ಈ ಹಾಡು ದಾಖಲೆ ಸಂಖ್ಯೆಯಲ್ಲಿ ರೀಲ್ಸ್ ಆಗಿದೆ. ಅಷ್ಟೇ ಅಲ್ಲ, ಈ ಹಾಡು ಕೇವಲ 22 ದಿನಗಳಲ್ಲಿ 10 ಮಿಲಿಯನ್ ವೀಕ್ಷಣೆ ಕಂಡಿದ್ದು, ಅತೀ ಹೆಚ್ಚು ವೀಕ್ಷಣೆ ಪಡೆದ ಹಾಡುಗಳ ಪೈಕಿ 29ನೇ ಸ್ಥಾನ ಪಡೆದಿದೆ. ಈ ಮೂಲಕ ಹೊಸ ದಾಖಲೆ ಬರೆದಿದೆ.

‘ಎಕ್ಕ’ ಚಿತ್ರವನ್ನು ರೋಹಿತ್‍ ಪದಕಿ ನಿರ್ದೇಶನ ಮಾಡಿದ್ದು, ಅಶ್ವಿನಿ ಪುನೀತ್ ರಾಜ್‌ಕುಮಾರ್, ಜಯಣ್ಣ, ಕಾರ್ತಿಕ್ ಗೌಡ ಸೇರಿ ಜಂಟಿಯಾಗಿ ಈ ಸಿನಿಮಾ ನಿರ್ಮಿಸಿದ್ದಾರೆ. ಚಿತ್ರದಲ್ಲಿ ಆದಿತ್ಯ, ಅತುಲ್ ಕುಲಕರ್ಣಿ, ಸಂಜನಾ ಆನಂದ್, ಸಂಪದ ಹುಲಿವಾನ ಸೇರಿ ಇಬ್ಬರು ನಾಯಕಿಯರಿದ್ದಾರೆ. ಚರಣ್‍ ರಾಜ್‍ ಸಂಗೀತ, ಸತ್ಯ ಹೆಗಡೆ ಛಾಯಾಗ್ರಹಣ ಈ ಚಿತ್ರಕ್ಕಿದೆ.

ಜುಲೈ 18ರಂದು ‘ಎಕ್ಕ’ ಸಿನಿಮಾ ರಾಜ್ಯಾದ್ಯಂತ ಬಿಡುಗಡೆ ಆಗುತ್ತಿದೆ.

ಆಂದೋಲನ ಡೆಸ್ಕ್

Recent Posts

ಹೆಣ್ಣು ಮಗು ಮಾರಾಟ ; ಐವರ ಬಂಧನ

ಚಾಮರಾಜನಗರ : ಆರು ತಿಂಗಳ ಹೆಣ್ಣು ಮಗುವನ್ನು ಮಾರಾಟ ಮಾಡಿರುವ ಪ್ರಕರಣ ನಗರದಲ್ಲಿ ನಡೆದಿದ್ದು, ಈ ಸಂಬಂಧ ಪೋಷಕರು ಸೇರಿದಂತೆ…

15 mins ago

ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ : ಗಡಿ ಜಿಲ್ಲೆಯಲ್ಲಿ ಅಮಾನವೀಯ ಘಟನೆ

ಹನೂರು : ಜಮೀನಿನಲ್ಲಿ ಹುರುಳಿ ಫಸಲನ್ನು ಹಸು ಮೇಯ್ದಿದ್ದದನ್ನು ಪ್ರಶ್ನೆಸಿದ್ದಕ್ಕೆ ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ…

51 mins ago

ಹಾಸನದಲ್ಲಿ ಜಾ.ದಳ ಶಕ್ತಿ ಪ್ರದರ್ಶನ : ಚುನಾವಣೆಗೆ ತಯಾರಾಗುವಂತೆ ಕಾರ್ಯಕರ್ತರಿಕೆ ಎಚ್‌ಡಿಕೆ ಕರೆ

ಹಾಸನ : ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಸಿದ್ಧತೆ ನಡೆಸುವ ಸಂದೇಶವನ್ನು ರಾಜ್ಯದ ಜನರಿಗೆ ತಲುಪಿಸುವ ಗುರಿಯೊಂದಿಗೆ ನಗರದಲ್ಲಿ ಆಯೋಜಿಸಿದ್ದ…

1 hour ago

ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ; 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

ಮಳವಳ್ಳಿ : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಹತ್ತುಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಹೊಸಹಳ್ಳಿ…

2 hours ago

ನಂಜನಗೂಡು | ಶ್ರೀಕಂಠೇಶ್ವರ ದೇವಾಲಯದ ಮುಂದಿನ ಅನಧಿಕೃತ ಅಂಗಡಿ ತೆರವು

ನಂಜನಗೂಡು : ಶ್ರೀಕಂಠೇಶ್ವರ ದೇವಾಲಯದ ಆವರಣದಲ್ಲಿನ ಅನಧಿಕೃತ ಅಂಗಡಿಗಳನ್ನು ಇಂದು(ಜ.24) ಮತ್ತೋಮ್ಮೆ ತೆರವು ಗೊಳಿಸಲಾಯಿತು. ದೇವಾಲಯದ ನೂತನ ಕಾರ್ಯನಿರ್ವಾಹಕ ಅಧಿಕಾರ…

2 hours ago

ಚಿನ್ನ ಕಳ್ಳ ಸಾಗಾಣಿಕೆ ಪತ್ತೆ : 2.89 ಕೋಟಿ ರೂ. ಮೌಲ್ಯದ ಚಿನ್ನ ವಶ

ಮುಂಬೈ : ಸೌದಿ ಅರೇಬಿಯಾದಿಂದ ಅಂತರರಾಷ್ಟ್ರೀಯ ಕೊರಿಯರ್ ಟರ್ಮಿನಲ್‌ನಲ್ಲಿ ಸಾಗಿಸುತ್ತಿದ್ದ ಗ್ರೈಂಡರ್‌ನಲ್ಲಿ ಬಚ್ಚಿಟ್ಟಿದ್ದ 2.89 ಕೋಟಿ ರೂ.ಮೌಲ್ಯದ ಚಿನ್ನವನ್ನು ಕಂದಾಯ…

3 hours ago