Mysore
17
clear sky

Social Media

ಸೋಮವಾರ, 08 ಡಿಸೆಂಬರ್ 2025
Light
Dark

Ekka teaser; ಪೊರಕೆ ಹಿಡಿದು ಹೊಸ ಅವತಾರದಲ್ಲಿ ಯುವ ಎಂಟ್ರಿ

ಯುವ ರಾಜಕುಮಾರ್‌ ತಮ್ಮ ಹುಟ್ಟುಹಬ್ಬವನ್ನು ಬುಧವಾರ (ಏಪ್ರಿಲ್‍ 23) ಆಚರಿಸಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಅವರ ಹೊಸ ಚಿತ್ರ ‘ಎಕ್ಕ’ದ ಟೀಸರ್‌ (Ekka Teaser) ಬಿಡುಗಡೆಯಾಗಲಿದೆ ಎಂದು ಹೇಳಲಾಗಿತ್ತು. ಆದರೆ, ಪುಲ್ವಾಮಾದಲ್ಲಿ ಹಿಂದುಗಳ ಮೇಲೆ ನಡೆದ ದಾಳಿ ಹಿನ್ನೆಲೆಯಲ್ಲಿ, ಮೃತಪಟ್ಟವರ ಗೌರವ ಸೂಚಕವಾಗಿ ಚಿತ್ರದ ಟೀಸರ್‍ ಬಿಡುಗಡೆಯನ್ನು ಗುರುವಾರಕ್ಕೆ ಮುಂದೂಡಲಾಗಿತ್ತು. ಅದರಂತೆ ಇಂದು ಟೀಸರ್‌ ಬಿಡುಗಡೆಯಾಗಿದೆ.

ಇಂದು ಡಾ. ರಾಜಕುಮಾರ್‌ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ ಚಿತ್ರದ ಟೀಸರ್‌ ಬಿಡುಗಡೆ ಮಾಡಲಾಗಿದೆ. ಒಂದು ನಿಮಿಷ ಒಂಬತ್ತು ಸೆಕೆಂಡ್‌ ಇರುವ ಟೀಸರ್‌ನಲ್ಲಿ ಹೊಸ ಅವತಾರದಲ್ಲಿ ಕಾಣಿಸಿಕೊಂಡಿದ್ದು, ಮಗು-ಮೃಗ ಎಂದು ಮಸ್ತ್‌ ಡೈಲಾಗ್‌ ಹೊಡೆಯುತ್ತಾ ಕೈಯಲ್ಲಿ ಪೊರಕೆ ಹಿಡಿದು ವಿಭಿನ್ನ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ‘ಇದು ಇಲ್ಲಿಗೆ ನಿಲ್ಲೋದಿಲ್ಲ’ ಎಂದು ದೊಡ್ಡದಾಗಿ ಏನೋ ಸೂಚನೆ ಕೊಟ್ಟಿದ್ದಾರೆ.

‘ಜಾಕಿ’ ಚಿತ್ರದಲ್ಲಿನ ಒಂದು ದೃಶ್ಯದಲ್ಲಿ ಪುನೀತ್‍ ಮಾನಸಿಕ ಅಸ್ವಸ್ಥರಾಗಿ ಕಾಣಿಸಿಕೊಂಡಂತೆ, ಯುವ ಸಹ ಅದೇ ತರಹ ಗೆಟಪ್‍ನಲ್ಲಿ ಕಾಣಿಸಿಕೊಂಡಿದ್ದಾರೆ. ಬಾಯಲ್ಲಿ ವಿಷಲ್‍ ಊದುತ್ತಾ, ತಲೆಗೆ ಒಂದು ಟೋಪಿ ಧರಿಸಿ, ಒಡೆದ ಕನ್ನಡಕವನ್ನು ತೊಟ್ಟು ಅವರು ಈ ಟೀಸರ್‍ನಲ್ಲಿ ಎಂಟ್ರಿ ಕೊಟ್ಟಿದ್ದಾರೆ.

ರೋಹಿತ್‍ ಪದಕಿ ನಿರ್ದೇಶನದ ಈ ಚಿತ್ರದಲ್ಲಿ ಯುವಗೆ ಸಂಜನಾ ಆನಂದ್‍ ಮತ್ತು ಸಂಪದ ನಾಯಕಿಯರಾಗಿ ನಟಿಸಿದ್ದು, ಮಿಕ್ಕಂತೆ ಅತುಲ್ ಕುಲಕರ್ಣಿ, ಆದಿತ್ಯ, ಶ್ರುತಿ, ಪೂರ್ಣಚಂದ್ರ ಮೈಸೂರು, ಪುನೀತ್‍ ರುದ್ರನಾಗ್‍, ಸಾಧು ಕೋಕಿಲ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಚರಣ್ ರಾಜ್ ಸಂಗೀತ, ಸತ್ಯ ಹೆಗಡೆ ಛಾಯಾಗ್ರಹಣವಿರುವ ಈ ಚಿತ್ರವನ್ನು ರೋಹಿತ್‍ ಪದಕಿ ನಿರ್ದೇಶನ ಮಾಡಿದ್ದಾರೆ.

ಈ ಚಿತ್ರವನ್ನು ಕನ್ನಡದ ಮೂರು ಜನಪ್ರಿಯ ನಿರ್ಮಾಣ ಸಂಸ್ಥೆಗಳಾದ PRK ಪ್ರೊಡಕ್ಷನ್ಸ್, ಜಯಣ್ಣ ಫಿಲಂಸ್‍ ಮತ್ತು KRG ಸ್ಟುಡಿಯೋಸ್‍ ಜೊತೆಯಾಗಿ ಈ ಚಿತ್ರವನ್ನು ನಿರ್ಮಿಸುತ್ತಿರುವುದು ವಿಶೇಷ. ಈ ಚಿತ್ರವನ್ನು ಅಶ್ವಿನಿ ಪುನೀತ್‍ ರಾಜಕುಮಾರ್‌, ಜಯಣ್ಣ, ಭೋಗೇಂದ್ರ, ಕಾರ್ತಿಕ್‍ ಗೌಡ ಮತ್ತು ಯೋಗಿ ಜೊತೆಯಾಗಿ ನಿರ್ಮಿಸುತ್ತಿದ್ದಾರೆ.

Tags:
error: Content is protected !!