ಆತ್ಮಹತ್ಯೆಗೆ ಶರಣಾದ ಬಿಎಸ್ವೈ ಮೊಮ್ಮಗಳು
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪುತ್ರಿ ಪದ್ಮಾವತಿ ಅವರ ಮಗಳು ಡಾ.ಸೌಂದರ್ಯ (30) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇಂದು ಬೆಳಿಗ್ಗೆ ಸುಮಾರು 10 ಗಂಟೆಗೆ ವಸಂತನಗರದ ತಮ್ಮ ಮನೆಯಲ್ಲಿ ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂಬಂಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬೌರಿಂಗ್ ಆಸ್ಪತ್ರೆಗೆ ಮೃತದೇಹ ರವಾನೆ ಮಾಡಲಾಗಿದೆ.
ಸೌಂದರ್ಯ ಅವರು 2018ರಲ್ಲಿ ವೈದ್ಯ ಡಾ. ನೀರಜ್ ಅವರನ್ನು ಮದುವೆಯಾಗಿದ್ದರು. ಕೌಟಿಂಬಿಕ ಕಲಹ ಆತ್ಮಹತ್ಯೆಗೆ ಕಾರಣ ಎನ್ನಲಾಗುತ್ತಿದ್ದು, ಈ ಸಂಬಂಧ ಸೂಕ್ತ ತನಿಖೆಯಿಂದ ಸತ್ಯ ತಿಳಿಯಬೇಕಿದೆ.