ಏರ್‌ಪೋರ್ಟ್‌ನ ಆರಿಗಾ ಲ್ಯಾಬ್‌ನಲ್ಲಿ ಗೋಲ್ಮಾಲ್ ಆರೋಪ; ಜಿಲ್ಲಾ ಆರೋಗ್ಯಾಧಿಕಾರಿಗಳ ತಂಡದಿಂದ ಪರಿಶೀಲನೆ

ಬೆಂಗಳೂರು: ವಿಮಾನ ನಿಲ್ದಾಣದ ಆರಿಗಾ ಲ್ಯಾಬ್​ನಲ್ಲಿ ಕೊರೊನಾ ಟೆಸ್ಟಿಂಗ್ ಗೋಲ್ಮಾಲ್ ಆರೋಪ ಕೇಳಿಬಂದಿದೆ. ಬಳಿಕ ಎಚ್ಛೆತ್ತುಕೊಂಡ ಅಧಿಕಾರಿಗಳು ತನಿಖೆಗೆ ಮುಂದಾಗಿದ್ದಾರೆ. ಅದರಂತೆ ಇಂದು ದೇವನಹಳ್ಳಿಯ ವಿಮಾನ ನಿಲ್ದಾಣದ ಆರಿಗಾ ಲ್ಯಾಬ್​ಗೆ  ಜಿಲ್ಲಾ ಆರೋಗ್ಯಾಧಿಕಾರಿಗಳ ತಂಡ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದೆ. ಬೆಂಗಳೂರು ಗ್ರಾಮಾಂತರ ಡಿಹೆಚ್ಒ ತಿಪ್ಪೇಸ್ವಾಮಿ ನೇತೃತ್ವದ ತಂಡ, ಲ್ಯಾಬ್​ನಲ್ಲಿ ಎರೆಡೆರಡು ರೀತಿಯ ರಿಪೋರ್ಟ್  ಹೇಗೆ ಬಂತು ಎಂದು ತನಿಖೆ ನಡೆಸುತ್ತಿದೆ.

ಸಂಪೂರ್ಣ ಪರಿಶೀಲನೆ ನಡೆಸಿ ಡಿಸಿಗೆ ಅಧಿಕಾರಿಗಳು ವರದಿ ನೀಡಲಿದ್ದಾರೆ, ನಿನ್ನೆ ಯುವತಿಯೋರ್ವಳಿಗೆ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯ ಲ್ಯಾಬ್​ನಲ್ಲಿ ತಪ್ಪು ವರದಿ ನೀಡಿದೆ. ಇದು ಅಧಿಕಾರಿಗಳ ಗಮನಕ್ಕೆ ಬಂದಿರುವುದರಿಂದ ಅಧಿಕಾರಿಗಳಿಂದ ಇಂದು ಪರಿಶೀಲನೆ ಕಾರ್ಯ ನಡೆಯುತ್ತಿದೆ.