ದೆಹಲಿ: ವಾಣಿಜ್ಯ ಕಟ್ಟಡದಲ್ಲಿ ಬೆಂಕಿ ಅವಘಡ, ಏರಿಕೆಗೊಂಡ ಸಾವಿನ ಸಂಖ್ಯೆ

ನವದೆಹಲಿ : ನಗರದಲ್ಲಿರುವ ಮೂರು ಅಂತಸ್ತಿನ ಕಟ್ಟಡವೊಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಸುಮಾರು 27 ಕ್ಕಿಂತ ಹೆಚ್ಚು ಮಂದಿ ಸಾವಿಗೀಡಾಗಿರುವ ಘಟನೆ ನಡೆದಿದೆ.

ದೆಹಲಿಯ ಮುಂಡ್ಕಾದಲ್ಲಿರುವ ಕಟ್ಟಡದಲ್ಲಿ ಬೆಂಕಿನ ಕಾಣಿಸಿಕೊಂಡಿದ್ದು ಸುಮಾರು 30 ಕ್ಕಿಂತ ಹೆಚ್ಚು ಅಗ್ನಿಶಾಮಕ ವಾಹನಗಳಿ ಸ್ಥಳಕ್ಕೆ ಜಾಮಾಯಿಸಿದ್ದು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿ ಕಟ್ಟಡದಲ್ಲಿ ಸಿಲುಕಿದವರನ್ನು ರಕ್ಷಿಸುವ ಕಾರ್ಯ ನಡೆಯುತ್ತಿದ್ದು ಸುಮಾರು 50 ಕ್ಕೂ ಹೆಚ್ಚು ಗಾಯಾಳುವನ್ನು ರಕ್ಷಿಸಿ ಆಸ್ಪತ್ರೆಗೆ ಸಾಗಿಸಲಾಗಿದೆ.

ಕಟ್ಟಡದ ಮೊದಲ ಅಂತಸ್ತಿನಲ್ಲಿ ಏಕಾಏಕಿ ಬೆಂಕಿ ಹೊತ್ತಿಕೊಂಡಿರುವುದು ಸಿಸಿಟಿವಿಯಲ್ಲಿ ಕಾಣಿಸಿಕೊಂಡ ತಕ್ಷಣ ಅನೇಕ ಮಂದಿ ಕಟ್ಟಡದಿಂದ ಜಿಗಿದು ಪ್ರಾಣ ಉಳಿಸಿಕೊಂಡಿದ್ದಾರೆ.

ಅವಘಡ ಸಂಭವಿಸಲು ಕಟ್ಟಡ  ಮಾಲೀಕನ ನಿರ್ಲಕ್ಷ್ಯವೇ ಕಾರಣವೆಂದು ದೂರು ಬಂದ ಹಿನ್ನೆಲೆ ಕಟ್ಟಡ ಮಾಲೀಕನನ್ನು ವಶಕ್ಕೆ ಪಡೆಯಲಾಗಿದೆ. ಸಾವಿಗೀಡಾದವರಿಗೆ ಮುಖ್ಯಮಂತ್ರಿ ಅರವಿಂದ್‌  ಕೇಜ್ರಿವಾಲ್‌, ಮೋದಿ ಸೇರಿದಂತೆ ಅನೇಕರು ತೀವ್ರ ಸಂತಾಪವನ್ನು ಸೂಚಿಸಿದ್ದಾರೆ.