ಎಚ್‌.ಡಿ.ಕುಮಾರಸ್ವಾಮಿ-ಸುಮಲತಾ ಟಾಕ್‌ ವಾರ್‌ ಬಗ್ಗೆ ಎಚ್‌.ಡಿ.ದೇವೇಗೌಡ ಹೇಳಿದ್ದೇನು?

ಬೆಂಗಳೂರು: ಕೆಆರ್‌ಎಸ್‌ ಅಣೆಕಟ್ಟೆ ವಿಚಾರವಾಗಿ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಮತ್ತು ಸಂಸದೆ ಸುಮಲತಾ ಪರಸ್ಪರರು ಟೀಕಾಪ್ರಹಾರ ನಡೆಸುತ್ತಿದ್ದಾರೆ. ಇದು ರಾಜಕೀಯ ವಲಯದಲ್ಲಿ ವಾದ-ಪ್ರತಿವಾದಕ್ಕೆ ಕಾರಣವಾಗಿದೆ. ಆದರೆ, ಎಚ್‌ಡಿಕೆ ಮತ್ತು ಸುಮಲತಾ ಅವರ ನಡುವಿನ ಟಾಕ್‌ ವಾರ್‌ ಬಗ್ಗೆ ಪ್ರತಿಕ್ರಿಯಿಸಲು ಮಾಜಿ ಪ್ರಧಾನಿ ಹಾಗೂ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ನಿರಾಕರಿಸಿದ್ದಾರೆ.

ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡುವಾಗ, ಇದರ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ನನಗೆ ವಿಷಯ ಗೊತ್ತಿದೆ. ನಾನು ಇದರಲ್ಲಿ ಮಧ್ಯಪ್ರವೇಶ ಮಾಡುವುದಿಲ್ಲ ಎಂದು ಹೇಳಿದ್ದಾರೆ.

ಅಕ್ರಮ ಗಣಿಗಾರಿಕೆಯಿಂದಲೇ ಕೆಆರ್‌ಎಸ್‌ ಬಿರುಕು ಬಿಡಲು ಕಾರಣ ಎಂಬ ಸುಮಲತಾರ ಆರೋಪ ಎಂಬುದಕ್ಕೆ ಪ್ರತಿಕ್ರಿಯಿಸಿ, ವಿಷಯ ಗೊತ್ತಿದೆ, ಚರ್ಚೆ ಬೇಡ ಎಂದು ಮಾತನಾಡಲು ನಿರಾಕರಿಸಿದ್ದಾರೆ.

ಜೆಡಿಎಸ್‌ನಲ್ಲಿ ಭವಿಷ್ಯವಿದ್ದರೆ ಪ್ರಜ್ವಲ್‌ ರೇವಣ್ಣ ಅವರಿಗೆ ಮಾತ್ರ ಎಂದು ಹೇಳಲು ಸುಮಲತಾ ಅವರೇನು ಜ್ಯೋತಿಷಿಯೇ ಎಂದು ಪ್ರಶ್ನಿಸಿದ್ದಾರೆ.