ಕುತೂಹಲ ಮೂಡಿಸಿದ ಸಿಎಂ ಯಡಿಯೂರಪ್ಪ, ಎಚ್‌.ಡಿ.ಕುಮಾರಸ್ವಾಮಿ ಭೇಟಿ

ಬೆಂಗಳೂರು: ಮುಖ್ಯಮಂತ್ರಿ ಗೃಹಕಚೇರಿ ಕೃಷ್ಣದಲ್ಲಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರನ್ನು ಜೆಡಿಎಸ್‌ ವರಿಷ್ಠ ಎಚ್‌.ಡಿ.ಕುಮಾರಸ್ವಾಮಿ ಅವರು ಸೋಮವಾರ ಭೇಟಿಯಾಗಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.

ಕುಮಾರಸ್ವಾಮಿ ಅವರು ಮಂಡ್ಯ ಜಿಲ್ಲೆಯ ಶಾಸಕರೊಂದಿಗೆ ಸಿಎಂ ನಿವಾಸಕ್ಕೆ ತೆರಳಿ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ಸಿಎಂ ಭೇಟಿ ನಂತರ ಮಾತನಾಡಿದ ಎಚ್‌ಡಿಕೆ, ಮೈಷುಗರ್‌ ಕಾರ್ಖಾನೆ ವಿಚಾರವಾಗಿ ಮಂಡ್ಯ ಜಿಲ್ಲೆಯ ರೈತ ಹಿತರಕ್ಷಣಾ ಸಮಿತಿ ಸದಸ್ಯರು ನನ್ನನ್ನು ಭೇಟಿಯಾಗಿದ್ದರು. ಈ ಹಿನ್ನೆಲೆಯಲ್ಲಿ ಮಂಡ್ಯದ ಶಾಸಕರು, ವಿಧಾನಪರಿಷತ್‌ ಸದಸ್ಯರೊಂದಿಗೆ ನಾನು ಸಿಎಂ ಭೇಟಿಯಾದೆ. ಮೈಷುಗರ್‌ ಕಾರ್ಖಾನೆಯನ್ನು ಖಾಸಗಿಯವರಿಗೆ ವಹಿಸಿಕೊಡುವ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಯಾವುದೇ ಕಾರಣಕ್ಕೂ ಐತಿಹಾಸಿಕ ಕಾರ್ಖಾನೆ ಸರ್ಕಾರದ ವ್ಯಾಪ್ತಿಯಲ್ಲೇ ಇರಬೇಕು ಎಂದು ಸಿಎಂಗೆ ಮನವಿ ಮಾಡಿದ್ದೇನೆ. ಕಾರ್ಖಾನೆ ಖಾಸಗಿಯವರ ಪಾಲಾಗಲು ಅವಕಾಶ ನೀಡುವುದಿಲ್ಲ ಎಂದು ಸಿಎಂ ನನಗೆ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.

× Chat with us