ಚಿಕ್ಕಬಳ್ಳಾಪುರ : ಡೆಂಗ್ಯೂ ಜ್ವರದಿಂದ ಬಾಲಕಿ ಸಾವು

ಚಿಕ್ಕಬಳ್ಳಾಪುರ : ಬೆಂಗಳೂರು  ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕ್ಕಿನ ಬೀಡಿಕೆರೆ ಗ್ರಾಮದಲ್ಲಿ ಬಾಲಕಿಯೊಬ್ಬಳು ಡೆಂಗ್ಯೂ ಜ್ವರದಿಂದ ಸಾವಿಗೀಡಾಗಿರುವ ಘಟನೆ ನಡೆದಿದೆ.

ಗ್ರಾಮದ ಸವಿತಾ ಹಾಗೂ ಮುನಿರಾಜು ಎಂಬುವವರ ಪುತ್ರಿ 6 ವರ್ಷದ ಚಾರುಲತ ಕಳೆದೊಂದು ವಾರದಿಂದ ಜ್ವರದಿಂದ ಬಳಲುತ್ತಿದ್ದಳು, ಹೆಚ್ಚಿನ ಚಿಕಿತ್ಸೆಗಾಗಿ ನಗರದಿಂದ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ. ಮಳೆಗಾಲವಾದ್ದರಿಂದ ಹೆಚ್ಚಿನ ಸೊಳ್ಳೆಗಳು ಕಾಣಿಸಿಕೊಳ್ಳುತ್ತಿದ್ದು, ಮುಂಜಾಗ್ತಾ ಕ್ರಮವಾಗಿ ಸ್ವಚ್ಚತೆಯನ್ನು ಕಾಪಾಡಿಕೊಳ್ಳಬೇಕೆಂದು ಜನರಿಗೆ ಸೂಚನೆ ನೀಡಲಾಗಿದೆ.