Mysore
30
few clouds

Social Media

ಬುಧವಾರ, 15 ಏಪ್ರಿಲ 2026
Light
Dark

ಕೋವಿಡ್-19 : ದೇಶದಲ್ಲಿಂದು 3.325 ಹೊಸ ಪ್ರಕರಣ ಪತ್ತೆ ಕೇರಳದಲ್ಲಿ 7 ಸೇರಿದಂತೆ 17 ಮಂದಿ ಸಾವು

ನವದೆಹಲಿ : ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 3,325 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 44,175ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ತಿಳಿಸಿದೆ.

ಮುಂಜಾನೆ 8 ಗಂಟೆಗೆ ಲಭ್ಯವಾದ ಮಾಹಿತಿ ಪ್ರಕಾರ, ಇದೇ ಅವಧಿಯಲ್ಲಿ ಕೇರಳಲ್ಲಿ 7 ಮಂದಿ ಸೇರಿದಂತೆ ದೇಶದಾದ್ಯಂತ 17 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ಈವರೆಗೆ 5,31,564 ಮಂದಿ ಕೋವಿಡ್‌ನಿಂದ ಸಾವಿಗೀಡಾಗಿದ್ದಾರೆ.
ಇದೇ ವೇಳೆ ದೇಶದಲ್ಲಿ ಸೋಂಕಿತರ ಸಂಖ್ಯೆ 4,49,52,996 ಕ್ಕೆ ಏರಿಕೆಯಾಗಿದೆ. ಈ ಪೈಕಿ ಸಕ್ರಿಯ ಪ್ರಕರಣಗಳ ಸಂಖ್ಯೆ 0.11 ಕ್ಕೆ ಇಳಿಕೆಯಾಗಿದೆ. ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಶೇ 98.71 ರಷ್ಟಿದೆ. ಸದ್ಯ ಈವರೆಗೆ 4,43,77,257 ಮಂದಿ ಕೋವಿಡ್‌ನಿಂದ ಗುಣಮುಖರಾಗಿದ್ದಾರೆ ಎಂದು ಸಚಿವಾಲಯ ತಿಳಿಸಿದೆ.

ದೈನಂದಿನ ಮರಣ ಪ್ರಮಾಣ ಶೇ 1.18 ರಷ್ಟಿದೆ. ಸಚಿವಾಲಯದ ವೆಬ್‌ಸೈಟಿನಲ್ಲಿ ನೀಡಲಾಗಿರುವ ಮಾಹಿತಿ ಪ್ರಕಾರ, ದೇಶದಾದ್ಯಂತ ನಡೆಯುತ್ತಿರುವ ಲಸಿಕಾ ಅಭಿಯಾನದ ಅಡಿಯಲ್ಲಿ ಈವರೆಗೆ 220.66 ಕೋಟಿಗೂ ಅಧಿಕ ಕೋವಿಡ್ ಲಸಿಕಾ ಡೋಸ್‌ಗಳನ್ನು ವಿತರಿಸಲಾಗಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!