ಆರೋಗ್ಯ

ಕೇರಳದಲ್ಲಿ ಹೆಚ್ಚಿದ ನಿಫಾ ವೈರಸ್ ಭೀತಿ : ಸೋಂಕಿತರ ಸಂಖ್ಯೆ 5ಕ್ಕೆ ಏರಿಕೆ

ತಿರುವನಂತಪುರಂ : ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಬುಧವಾರ ಮತ್ತೊಂದು ನಿಫಾ ವೈರಸ್ ಪ್ರಕರಣವನ್ನು ದೃಢಪಡಿಸಿದ್ದು, ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.

ಕೋಯಿಕೋಡ್‌ನ ಖಾಸಗಿ ಆಸ್ಪತ್ರೆಯಲ್ಲಿ 24 ವರ್ಷದ ಆರೋಗ್ಯ ಕಾರ್ಯಕರ್ತೆಯೊಬ್ಬರಿಗೆ ವೈರಸ್ ಇರುವುದು ಪತ್ತೆಯಾಗಿದೆ ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್ ತಿಳಿಸಿದ್ದಾರೆ. ಸದ್ಯ 706 ಜನ ಸಂಪರ್ಕ ಪಟ್ಟಿಯಲ್ಲಿದ್ದಾರೆ. ಅದರಲ್ಲಿ 77 ಮಂದಿ ಹೈ-ರಿಸ್ಕ್‌ನಲ್ಲಿದ್ದಾರೆ ಮತ್ತು 153 ಕಾರ್ಯಕರ್ತರು ಆರೋಗ್ಯವಾಗಿದ್ದಾರೆ. ಹೈ-ರಿಸ್ಕ್ ವರ್ಗದಲ್ಲಿರುವವರಿಗೆ ಪ್ರಸ್ತುತ ಯಾವುದೇ ರೋಗಲಕ್ಷಣಗಳು ಕಾಣಿಸುತ್ತಿಲ್ಲ ಎಂದಿದ್ದಾರೆ.

ಪ್ರಸ್ತುತ 13 ಜನರು ಆಸ್ಪತ್ರೆಯ ನಿಗಾದಲ್ಲಿದ್ದು, ತಲೆ ನೋವಿನಂತಹ ಸಣ್ಣಪುಟ್ಟ ಲಕ್ಷಣಗಳು ಕಾಣಿಸುತ್ತಿವೆ. ಹೈ-ರಿಸ್ಕ್ ವರ್ಗದಲ್ಲಿರುವವರು ತಮ್ಮ ಮನೆಯೊಳಗಿರಬೇಕು ಎಂದು ಸರ್ಕಾರ ಸಲಹೆ ನೀಡಿದೆ. ಈ ಕುರಿತು ಎಲ್ಲಾ ಕ್ರಮಗಳನ್ನು ಸಮನ್ವಯಗೊಳಿಸಲು ಕೇರಳ ಸರ್ಕಾರವು 19 ಕೋರ್ ಕಮಿಟಿಗಳನ್ನು ರಚಿಸಿದೆ. ಐಸೋಲೇಷನ್‌ನಲ್ಲಿ ಇರುವವರಿಗೆ ಅಗತ್ಯ ವಸ್ತುಗಳನ್ನು ತಲುಪಿಸಲು ಸ್ಥಳೀಯ ಸ್ವಯಂಸೇವಕ ತಂಡಗಳನ್ನು ರಚಿಸಲಾಗಿದೆ.

ಮೆದುಳಿಗೆ ಹಾನಿ ಉಂಟುಮಾಡುವ ಈ ವೈರಸ್ ಕೇರಳದಲ್ಲಿ ಇಬ್ಬರನ್ನು ಬಲಿ ತೆಗೆದುಕೊಂಡಿದೆ. ಸೋಂಕಿತ ವ್ಯಕ್ತಿಗಳ ಸಂಪರ್ಕಗಳನ್ನು ಮೊದಲೇ ಪತ್ತೆಹಚ್ಚಲು ಮತ್ತು ರೋಗಲಕ್ಷಣ ಹೊಂದಿರುವವರನ್ನು ಪ್ರತ್ಯೇಕಿಸುವತ್ತ ರಾಜ್ಯ ಆಡಳಿತ ಗಮನ ಹರಿಸುತ್ತಿದೆ ಎಂದು ವೀಣಾ ಜಾರ್ಜ್ ತಿಳಿಸಿದ್ದಾರೆ. ಅಲ್ಲದೇ ಕೋಯಿಕೋಡ್ ಜಿಲ್ಲೆಯ ಏಳು ಗ್ರಾಮ ಪಂಚಾಯತ್‌ಗಳಾದ ಅತಂಚೇರಿ, ಮಾರುತೋಂಕರ, ತಿರುವಳ್ಳೂರು, ಕುಟ್ಟಿಯಾಡಿ, ಕಾಯಕ್ಕೋಡಿ, ವಿಲ್ಲ್ಯಪಲ್ಲಿ ಮತ್ತು ಕವಿಲುಂಪಾರವನ್ನು ಕಂಟೈನ್‌ಮೆಂಟ್ ವಲಯ ಎಂದು ಘೋಷಿಸಲಾಗಿದೆ.

ಕಂಟೈನ್‌ಮೆಂಟ್ ವಲಯದ ಎಲ್ಲಾ ಶಾಲೆಗಳ ವಿದ್ಯಾರ್ಥಿಗಳಿಗೆ ಮನೆಯಿಂದಲೇ ತರಗತಿಗಳಿಗೆ ಹಾಜರಾಗಲು ಆನ್‌ಲೈನ್ ತರತಿಗಳನ್ನು ಆಯೋಜಿಸುವಂತೆ ಶಿಕ್ಷಣ ಸಚಿವ ವಿ.ಶಿವನ್‌ಕುಟ್ಟಿ ಸಾರ್ವಜನಿಕ ಶಿಕ್ಷಣ ನಿರ್ದೇಶಕರಿಗೆ ನಿರ್ದೇಶನ ನೀಡಿದ್ದಾರೆ.

lokesh

Share
Published by
lokesh

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಭಾಷೆ, ಬದುಕು ಕಲಿಸಿದ ನನ್ನಪ್ಪ

ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…

6 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಮತಗಳ ಪರಿಚಯ

ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…

7 hours ago

ರೆಟ್ರೋ ಫೋಟೋಗಳ ಹೊಸ ಅಲೆ

ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…

7 hours ago

ಮಹಾಪಂಚ್‌ ಕಾರ್ಟೂನ್‌

  ಮಹಾಪಂಚ್‌ ಕಾರ್ಟೂನ್‌ | ಸೆಪ್ಟಂಬರ್‌ 12 ಶನಿವಾರ

7 hours ago

ಒಳ್ಳೆಯತನಕ್ಕೂ ಕೆಟ್ಟತನಕ್ಕೂ ಜಾತಿ ಮಾನದಂಡ ಅಲ್ಲ

ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…

7 hours ago

ಓದುಗರ ಪತ್ರ | ‘ಅಕ್ಕ’ ಸಮ್ಮೇಳನದಲ್ಲೂ ‘ನಂದಿನಿ’ ಮಿಂಚಿಂಗ್!

ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…

7 hours ago