ಆರೋಗ್ಯ

ಅಂಗಾಂಗ ದಾನದಲ್ಲಿ ರಾಜ್ಯಕ್ಕೆ 2ನೇ ಸ್ಥಾನ

ಬೆಂಗಳೂರು : ತೆಲಂಗಾಣ ನಂತರ ದಕ್ಷಿಣದ ರಾಜ್ಯಗಳಲ್ಲಿ ಅಂಗಾಂಗ ದಾನದಲ್ಲಿ ಎರಡನೇ ಸ್ಥಾನವನ್ನು ಕರ್ನಾಟಕ ಪಡೆದುಕೊಂಡಿದೆ ಎಂಬುದು ಹೆಮ್ಮೆಯ ವಿಷಯ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಕೆ ಸುಧಾಕರ್ ಹೇಳಿದ್ದಾರೆ.

2022 ಡಿಸೆಂಬರ್ 14 ವರೆಗಿನ ದಾಖಲೆ ಸಂಖ್ಯೆಯ ಆಧಾರದ ಮೇಲೆ 143 ಅಂಗಾಂಗ ದಾನ(Organ Donations)ಗಳೊಂದಿಗೆ ಕರ್ನಾಟಕವು ಎರಡನೇ ಸ್ಥಾನದಲ್ಲಿದೆ. ಅಂಗಾಂದ ದಾನದಂತಹ ಮಹತ್ವದ ಕಾರ್ಯದಿಂದಾಗಿ ಕರ್ನಾಟಕದಾದ್ಯಂತ ಸುಮಾರು 397 ಜನರಿಗೆ  ಅಂಗಾಂಗಗವನ್ನು ನೀಡಿ ಅವರಿಗೆ ಹೊಸ ಜೀವನವನ್ನು ನಡೆಸುತ್ತಿರುವುದು ನಿಜಕ್ಕೂ ರಾಜ್ಯಕ್ಕೆ ಹೆಮ್ಮೆಯ ವಿಷಯ. ತೆಲಂಗಾಣ ನಂತರ ದಕ್ಷಿಣದ ರಾಜ್ಯಗಳಲ್ಲಿ ಅಂಗಾಂಗ ದಾನದಲ್ಲಿ ಎರಡನೇ ಸ್ಥಾನವನ್ನು ಕರ್ನಾಟಕ ಪಡೆದುಕೊಂಡಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಕೆ ಸುಧಾಕರ್ ಹೇಳಿದ್ದಾರೆ.

ಹಿಂದಿನ ವರ್ಷ ಕರ್ನಾಟಕದಲ್ಲಿ 70 ಅಂಗಾಂಗ ದಾನಗಳು ದಾಖಲಿಸಿಲಾಗಿತ್ತು. ನಂತರದ ದಿನಗಳಲ್ಲಿ ಅಂಗಾಂಗ ದಾನಗಳ ಕುರಿತು ಮೂಡಿಸಿದ ಜಾಗೃತಿಯಿಂದಾಗಿ ದೊಡ್ಡ ಪ್ರಮಾಣದ ಅಂಗಾಂಗ ದಾನಗಳಿಗೆ ಕಾರಣವಾಗಿದೆ ಎಂದು ಕರ್ನಾಟಕದ ರಾಜ್ಯ ಅಂಗ ಮತ್ತು ಅಂಗಾಂಶ ಕಸಿ ಸಂಸ್ಥೆಯ ಕಾರ್ಯದರ್ಶಿ ಡಾ ಕಿರಣ್ ಕುಮಾರ್ ಡೆಕ್ಕನ್ ಹೆರಾಲ್ಡ್ ಜೊತೆಗೆ ಹಂಚಿಕೊಂಡಿದ್ದಾರೆ. ವಿಶೇಷವಾಗಿ ದಕ್ಷಿಣ ಕನ್ನಡದಲ್ಲಿ 2021ಕ್ಕೆ ಹೋಲಿಸಿದ್ದರೆ, 2022 ರಲ್ಲಿ ನಾಲ್ಕರಿಂದ ಅಂಗಾಂಗ ದಾನಗಳ ಸಂಖ್ಯೆ 15 ಕ್ಕೆ ಏರಿಕೆ ಕಂಡಿದೆ. ಇದರಲ್ಲಿ 95 ಪ್ರತಿಶತದಷ್ಟು ಮೆದುಳು ನಿಷ್ಕ್ರಿಯಗೊಂಡ ರೋಗಿಗಳ ಕುಟುಂಬದ ಸದಸ್ಯರು ಅಂಗಾಂಗ ದಾನದಂತಹ ಮಹತ್ತರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಇದರಿಂದಾಗಿ 72 ಜನರ ಜೀವಗಳನ್ನು ಉಳಿಸಲಾಯಿತು. ಕೆಲವು ವಾರಗಳ ಹಿಂದೆಯಷ್ಟೇ ಮಂಜೇಶ್ವರ ಕೇರಳದಲ್ಲಿ ಅಪಘಾತಕ್ಕೀಡಾದ ಘಟನೆಯ ಕುರಿತು ಡಾ ಕಿರಣ್ ಕುಮಾರ್ ನೆನಪಿಸಿಕೊಂಡಿದ್ದಾರೆ.

ಕೋಡಿಕಲ್‌ನ ನಿವಾಸಿಯೊಬ್ಬರು , ಐದು ವರ್ಷಗಳಿಂದ ಡಯಾಲಿಸಿಸ್‌ಗೆ ಒಳಗಾಗಿದ್ದರು. ಕಸಿ ಮಾಡಿದ ನಂತರ ಸಾಮಾನ್ಯ ಜೀವನವನ್ನು ನಡೆಸುತ್ತಿರುವುದರಿಂದ ಮೂತ್ರಪಿಂಡವನ್ನು ದಾನ ಮಾಡಿದ ದಾನಿಯ ಕುಟುಂಬವನ್ನು ನೆನಪಿಸಿಕೊಳ್ಳುತ್ತಾರೆ ಎಂದು ಅವರು ಹೇಳಿದರು.

andolanait

Share
Published by
andolanait

Recent Posts

ಪ್ರಜಾಪ್ರಭುತ್ವದಲ್ಲಿ ಹಿಂಸಾಚಾರಕ್ಕೆ ಸ್ಥಾನವಿಲ್ಲ : ದಾಳಿಗೆ ಮೋದಿ ಪ್ರತಿಕ್ರಿಯೆ

ನವದೆಹಲಿ : ವಾಷಿಂಗ್ಟನ್‌ನ ಹಿಲ್ಟನ್ ಹೋಟೆಲ್‌ನಲ್ಲಿ ಡೊನಾಲ್ಡ್ ಟ್ರಂಪ್ ಭಾಗವಹಿಸಿದ್ದ ಡಿನ್ನರ್ ಕಾರ್ಯಕ್ರದಲ್ಲಿ ಗುಂಡಿನ ದಾಳಿ ನಡೆದ ಘಟನೆ ಕುರಿತು…

45 seconds ago

ಆಂದೋಲನ ಹಾಡುಪಾಡು | ಚಾಮರಾಜನಗರದ ರಂಗಭೂಮಿಯ ಕಿರಣ

ಸ್ವಾಮಿ ಪೊನ್ನಾಜಿ... ಕಿರಣ್ ಗಿರ್ಗಿ ಚಾಮರಾಜನಗರದ ಕಿರಿಯ ವಯಸ್ಸಿನ ಪ್ರತಿಭಾವಂತ ರಂಗ ನಿರ್ದೇಶಕ. ಈ ಹಿಂದೆ ಚಾಮರಾಜನಗರದ ರಂಗತರಂಗ ತಂಡದ…

9 mins ago

ಶಂಕಿತ ಶೂಟರ್‌ನ ಚಿತ್ರ, ವಿಡಿಯೊ ಬಿಡುಗಡೆ ಮಾಡಿದ ಟ್ರಂಪ್‌

ವಾಷಿಂಗ್ಟನ್‌ : ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಭಾಗವಹಿಸಿದ್ದ ವೈಟ್‌ ಹೌಸ್‌ ಕರೆಸ್ಪಾಂಡೆಂಟ್ಸ್  ಔತಣಕೂಟ ಕಾರ್ಯಕ್ರಮದ ವೇಳೆ ಗುಂಡಿನ ದಾಳಿ…

20 mins ago

ಟ್ರಂಪ್‌ ಭಾಗವಹಿಸಿದ್ದ ಡಿನ್ನರ್‌ ಕಾರ್ಯಕ್ರಮದಲ್ಲಿ ಗುಂಡಿನ ದಾಳಿ : ಆಗಿದ್ದೇನು?

ವಾಷಿಂಗ್ಟನ್‌ : ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಭಾಗವಹಿಸಿದ್ದ ಔತಣಕೂಟ ಕಾರ್ಯಕ್ರಮದ ವೇಳೆ ಗುಂಡಿನ ದಾಳಿ ನಡೆದಿದೆ. ಡೊನಾಲ್ಡ್ ಟ್ರಂಪ್,…

34 mins ago

ಆಂದೋಲನ ಹಾಡುಪಾಡು | ಸ್ಟೀಲು ಪ್ಲೇಟುಗಳ ಸಾಲ ಕೊಡುವ ಬ್ಯಾಂಕು

ಚಂದ್ರಶೇಖರ್ ಮೂರ್ತಿ ಕೆ.ಎಸ್. ಮೈಸೂರಿನಲ್ಲಿ ಅನೇಕ ಬ್ಯಾಂಕ್‌ಗಳಿವೆ. ಅವು ಹಣಕಾಸು ವ್ಯವಹಾರ ಮಾಡುವ ಬ್ಯಾಂಕ್. ಆದರೆ ಮೈಸೂರಿನ ಜೆ.ಪಿ.ನಗರದ ಅಕ್ಕಮಹಾದೇವಿ…

50 mins ago

ಆಂದೋಲನ ಹಾಡುಪಾಡು | ಹುಲಿಯ ಕಣ್ಣಿನಲ್ಲಿ ಕಂಡ ನನ್ನದೇ ಪ್ರತಿಬಿಂಬ

ಶ್ರೇಯಸ್ ದೇವನೂರು ಭಾರತದ ಅರಣ್ಯಗಳು ಕೇವಲ ಮರಗಳ ಗುಂಪಲ್ಲ; ಅವು ಜೀವವೈವಿಧ್ಯದ ಅದ್ಭುತ ಭಂಡಾರ. ಅಲ್ಲಿ ಪ್ರತಿಯೊಂದು ಕ್ಷಣವೂ ಅನಿರೀಕ್ಷಿತ,…

2 hours ago