ಶಿಮ್ಲಾ : ಹರಿಯಾಣದ ಸೋಲನ್ ಜಿಲ್ಲೆಯ ನಿವಾಸಿಯೊಬ್ಬರಲ್ಲಿ ಮಂಕಿ ಪಾಕ್ಸ್ ಸೋಂಕಿನ ಲಕ್ಷಣಗಳು ಪತ್ತೆಯಾಗಿರುವುದರ ಬಗ್ಗೆ ರಾಜ್ಯ ಆರೋಗ್ಯ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಸದ್ಯ ಲಕ್ಷಣ ಕಾಣಿಸಿಕೊಂಡಿರುವ ವ್ಯಕ್ತಿಯ ಮಾದರಿಯನ್ನು ಪರೀಕ್ಷೆಗಾಗಿ ಪುಣೆಯ ನ್ಯಾಷನಲ್ ಇನ್ಸ್ ಸ್ಟಿಟ್ಯೂಟ್ ಆಫ್ ವೈರಾಲಜಿಗೆ (NIV) ಕಳುಹಿಸಲಾಗಿದೆ.
ಸೋಂಕು ಕಾಣಿಸಿಕೊಂಡಿರುವ ವ್ಯಕ್ತಿಯ ಬಗ್ಗೆ ಯಾವುದೇ ವಿದೇಶ ಪ್ರಯಾಣದ ಹಿನ್ನೆಲೆ ಇಲ್ಲ. ಕಳೆದ 20 ದಿನಗಳಿಂದ ಲಕ್ಷಣಗಳು ಕಾಣಿಸಿಕೊಳ್ಳುತ್ತಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ. ಆರೋಗ್ಯ ಇಲಾಖೆಯ ಮುನ್ನೆಚ್ಚರಿಕೆ ಕ್ರಮವಾಗಿ ಸಾಕಷ್ಟು ಗಮನಹರಿಸುತ್ತಿದೆ.