ಆರೋಗ್ಯ

ಭಾರತದಲ್ಲಿ ಒಂದೇ ದಿನ 10 ಸಾವಿರಕ್ಕೂ ಹೆಚ್ಚು ಕೊರೊನಾ ಕೇಸ್‌ ದಾಖಲು

ಹೊಸದಿಲ್ಲಿ : ಭಾರತದಲ್ಲಿ ಮತ್ತೆ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ನಾಲ್ಕನೇ ಅಲೆಯ ಭೀತಿ ಶುರುವಾಗಿದೆ. ಕಳೆದ 24 ಗಂಟೆಗಳಲ್ಲಿ 10 ಸಾವಿರಕ್ಕೂ ಹೆಚ್ಚು ಕೋವಿಡ್‌-19 ಪ್ರಕರಣಗಳು ದೇಶದಲ್ಲಿ ಕಂಡುಬಂದಿವೆ. ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 10,158 ಹೊಸ ಕೊರೊನಾ ಸೋಂಕಿನ ಪ್ರಕರಣಗಳು ದಾಖಲಾಗಿವೆ. ಇದು ಬುಧವಾರಕ್ಕಿಂತ ಶೇ.30ರಷ್ಟು ಹೆಚ್ಚಳವಾಗಿದೆ.

ಬುಧವಾರ 7,830 ಪ್ರಕರಣಗಳು ಪತ್ತೆಯಾಗಿದ್ದರೆ ಗುರುವಾರ 10,158 ಸೋಂಕಿನ ಪ್ರಕರಣಗಳು ಕಂಡುಬಂದಿದ್ದು, ಒಂದೇ ದಿನದಲ್ಲಿ ಕೊರೊನಾ ಸೋಂಕು ಭಾರೀ ಏರಿಕೆಯಾಗಿದೆ. ಈ ಮೂಲಕ ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 44,998ಕ್ಕೆ ಏರಿದ್ದು, ಇದರೊಂದಿಗೆ ಕೋವಿಡ್‌ ಪ್ರಕರಣಗಳ ಸಂಖ್ಯೆ 4,42,10,127ಕ್ಕೆ ಏರಿಕೆಯಾಗಿದೆ.

ದಿನದ ಕೊರೊನಾ ಪಾಸಿಟಿವಿಟಿ ದರ ಶೇ.4.42ರಷ್ಟಿದ್ದರೆ, ವಾರದ ಪಾಸಿಟಿವಿಟಿ ದರ ಶೇ.4.02ರಷ್ಟಿದೆ. ಸದ್ಯ ಸಕ್ರಿಯ ಪ್ರಕರಣಗಳ ಸಂಖ್ಯೆ ಒಟ್ಟು ಕೊರೊನಾ ಪ್ರಕರಣಗಳ ಶೇ.0.10ರಷ್ಟಿದೆ. ಇನ್ನು, ಆರೋಗ್ಯ ಸಚಿವಾಲಯದ ವೆಬ್‌ಸೈಟ್‌ನ ಪ್ರಕಾರ ದೇಶಾದ್ಯಂತ ಗುಣಮುಖ ಪ್ರಮಾಣ ಶೇ.98.71ರಷ್ಟಿದೆ. ಸಾವಿನ ಪ್ರಮಾಣ ಶೇ.1.19ರಷ್ಟಿದೆ.

ಭಾರತದಲ್ಲಿ ಕೊರೊನಾ ವೈರಸ್‌ ಸ್ಥಳೀಯ ಹಂತವನ್ನು ಪ್ರವೇಶಿಸಿದೆ. ಮುಂದಿನ 10 ರಿಂದ 12ದಿನಗಳವರೆಗೆ ಕೋವಿಡ್‌ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತವೆ. ಬಳಿಕ ಸೋಂಕಿನ ಪ್ರಕರಣಗಳು ಕಡಿಮೆಯಾಗುತ್ತವೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ. ಒಮಿಕ್ರಾನ್‌ನ XBB.1.16 ಉಪ ತಳಿ ಬಗ್ಗೆ ಯಾವುದೇ ಆತಂಕ ಬೇಡ, ಅದರ ವಿರುದ್ಧ ಕೋವಿಡ್‌ ಲಸಿಕೆಗಳು ಪರಿಣಾಮಕಾರಿಯಾಗಿ ಕೆಲಸ ಮಾಡುತ್ತವೆ ಎಂದು ಆರೋಗ್ಯ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.

ಒಮಿಕ್ರಾನ್‌ನ ಉಪ ತಳಿಗಳ ಹರಡುವಿಕೆಯು ಫೆಬ್ರವರಿಯಲ್ಲಿ ಶೇ.21.6ರಷ್ಟಿದ್ದರೆ, ಮಾರ್ಚ್‌ನಲ್ಲಿ ಶೇ.35.8ಕ್ಕೆ ಏರಿತ್ತು. ಆದರೆ, ಆಸ್ಪತ್ರೆಗೆ ದಾಖಲಾದ ಅಥವಾ ಸಾವಿನ ಯಾವುದೇ ಘಟನೆ ವರದಿಯಾಗಿಲ್ಲ ಎಂದು ಮೂಲಗಳು ತಿಳಿಸಿವೆ. ಒಮಿಕ್ರಾನ್‌ನ ಆರು ಉಪ ತಳಿಗಳು ಭಾರತದಲ್ಲಿ ಕಂಡು ಬಂದಿದ್ದು, ಮುಖ್ಯವಾಗಿ ಎಕ್ಸ್‌ಬಿಬಿ1, ಬಿಎಫ್‌.7, ಎಕ್ಸ್‌ಬಿಬಿ 1.16, ಬಿಎ 2.75, ಬಿಎ 2.10.1, ಎಕ್ಸ್‌ಬಿಬಿ 1.5 ತಳಿಗಳ ಬಗ್ಗೆ ತಜ್ಞರ ತಂಡ ನಿಗಾ ಇರಿಸಿದೆ.

ಎರಡು ದಿನ ನಡೆದಿದ್ದ ಮಾಕ್‌ ಡ್ರಿಲ್‌ : ಕೊರೊನಾ ವೈರಸ್‌ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಕೊರೊನಾ ನಿರ್ವಹಣೆಗೆ ಏಪ್ರಿಲ್‌ 10 ಮತ್ತು 11ರಂದು ದೇಶಾದ್ಯಂತ ಕೊರೊನಾ ಮಾಕ್‌ ಡ್ರಿಲ್‌ ನಡೆಸಲಾಗಿತ್ತು. ದೇಶದ ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಣಕು ಕಾರ್ಯಾಚರಣೆ ನಡೆಸಿದ್ದ ಆರೋಗ್ಯ ಸಿಬ್ಬಂದಿ, ಆಸ್ಪತ್ರೆಗಳಲ್ಲಿನ ಹಾಸಿಗೆ, ಐಸಿಯು, ಆಮ್ಲಜನಕದ ಲಭ್ಯತೆ, ವೆಂಟಿಲೇಟರ್‌, ಆಂಬುಲೆನ್ಸ್‌ಗಳ ಲಭ್ಯತೆಯನ್ನು ಪರೀಕ್ಷಿಸಲಾಗಿತ್ತು.

ನಾಲ್ಕನೇ ಅಲೆ ಭೀತಿ ಇಲ್ಲ : ಕೊರೊನಾ ಪ್ರಕರಣಗಳು ಹೆಚ್ಚಾದರೂ ನಾಲ್ಕನೇ ಅಲೆ ಭೀತಿ ಇಲ್ಲ ಎಂದು ಕೇಂದ್ರ ಆರೋಗ್ಯ ಸಚಿವ ಡಾ ಮನ್ಸುಖ್‌ ಮಾಂಡವೀಯಾ ಈ ಹಿಂದೆ ಹೇಳಿದ್ದರು. ಈ ಪ್ರಕರಣಗಳ ಸಂಖ್ಯೆ ಮುಂದಿನ 10-12 ದಿನ ಹೆಚ್ಚಾಗಲಿದ್ದು, ಬಳಿಕ ಕಡಿಮೆಯಾಗಲಿವೆ ಎನ್ನಲಾಗಿದೆ. ಒಮಿಕ್ರಾನ್‌ನ ಉಪ ತಳಿಗಳ ಸೋಂಕಿತರ ಪತ್ತೆ ಹಾಗೂ ಚಿಕಿತ್ಸೆಗೆ ಸೂಕ್ತ ವ್ಯವಸ್ಥೆ ರೂಪಿಸಿಕೊಳ್ಳಲು ಎಲ್ಲ ರಾಜ್ಯಗಳಿಗೂ ಕೇಂದ್ರ ಆರೋಗ್ಯ ಸಚಿವ ಡಾ. ಮನ್ಸುಖ್‌ ಮಾಂಡವೀಯ ಅವರು ಕಳೆದ ಶುಕ್ರವಾರ ನಡೆದ ತುರ್ತು ಸಭೆಯಲ್ಲಿ ಸೂಚನೆ ನೀಡಿದ್ದರು.

lokesh

Share
Published by
lokesh

Recent Posts

ಹನೂರು ತಾಲ್ಲೂಕಿನಲ್ಲಿ ಕೇಂದ್ರ ಬರ ಅಧ್ಯಯನ ತಂಡದಿಂದ ಎರಡನೇ ದಿನದ ಸಮಗ್ರ ಪರಿಶೀಲನೆ

ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…

10 hours ago

ಬಿರುಗಾಳಿ ಮಳೆಗೆ ಬಾಳೆ ಬೆಳೆ ನೆಲಕಚ್ಚಿ:ರೈತರಿಗೆ ಲಕ್ಷಾಂತರ ರೂ. ನಷ್ಟ!

ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…

10 hours ago

ಕಾಡುಪ್ರಾಣಿಗಳ ಹಾವಳಿ ತಡೆಗೆ ಸ್ಟೀಲ್ ರೋಪ್ ಬ್ಯಾರಿಕೇಡ್

ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ  ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…

10 hours ago

ದಸರೆಯಲ್ಲಿ ಹೊಸ ಸಂಪ್ರದಾಯಕ್ಕೆ ಮುನ್ನುಡಿ ಬರೆದ ಮುಖ್ಯಮಂತ್ರಿ

ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…

11 hours ago

ಪೌರಕಾರ್ಮಿಕರಿಗೆ ಉಚಿತ ಸಾಬೂನು ಗ್ಯಾರಂಟಿ ಕೊಡಿ

ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…

11 hours ago

ಅಸ್ತ್ರಗಳು, ಅಂಧಕಾರ, ಆತಂಕ

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ   ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…

11 hours ago