Mysore
17
few clouds

Social Media

ಭಾನುವಾರ, 07 ಡಿಸೆಂಬರ್ 2025
Light
Dark

ಹೊಸದಾಗಿ 1.590 ಕೋವಿಡ್ ಪ್ರಕರಣಗಳು ದೃಢ

ನವದೆಹಲಿ : ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ ಕೋವಿಡ್ ದೃಢಪಟ್ಟ 1,590 ಪ್ರಕರಣಗಳು ದಾಖಲಾಗಿವೆ.
ಕಳೆದ 146 ದಿನಗಳಲ್ಲೇ ಒಂದು ದಿನದಲ್ಲಿ ದಾಖಲಾದ ಅತ್ಯಧಿಕ ಪ್ರಕರಣಗಳ ಸಂಖ್ಯೆ ಇದಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆಯಿಂದ ತಿಳಿದುಬಂದಿದೆ.
ಇದೇ ಅವಧಿಯಲ್ಲಿ 6 ಮಂದಿ ಸೋಂಕಿನಿಂದ ಮೃತಪಟ್ಟಿದ್ದು, ಮಹಾರಾಷ್ಟ್ರದಲ್ಲಿ ಮೂವರು, ಕರ್ನಾಟಕ, ರಾಜಸ್ಥಾನ ಮತ್ತು ಉತ್ತರಾಖಂಡದಲ್ಲಿ ತಲಾ ಒಬ್ಬರು ಸಾವಿಗೀಡಾಗಿದ್ದಾರೆ. ಈವರೆಗೆ ಕೋವಿಡ್‌ನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 5,30,824ಕ್ಕೆ ಏರಿದೆ.
ದೈನಂದಿನ ಪಾಸಿಟಿವಿಟ ದರ ಶೇಕಡ 1.33ರಷ್ಟಿದ್ದು, ವಾರದ ಪಾಸಿಟಿವಿಟ ದರ ಶೇಕಡ ಶೇಕಡ 1.23ರಷ್ಟಾಗಿದೆ.
ಈವರೆಗಿನ ಕೊರೊನಾ ಸೋಂಕಿತರ ಒಟ್ಟು ಸಂಖ್ಯೆ 4,47,02,257ರಷ್ಟಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 8,601ಕ್ಕೆ ಏರಿದೆ.

 

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!