Mysore
21
overcast clouds

Social Media

ಬುಧವಾರ, 09 ಜುಲೈ 2025
Light
Dark

ಬೆಂಗಳೂರಿನಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ ಏರಿಕೆ

ಬೆಂಗಳೂರು : ನಗರದಲ್ಲಿ 146 ಮಂದಿ ಕೋವಿಡ್ ಪೀಡಿತರಾಗಿರುವುದು ದೃಢಪಟ್ಟಿದೆ. ಇದರಿಂದಾಗಿ ಸಕ್ರಿಯ ಪ್ರಕರಣಗಳ ಸಂಖ್ಯೆ 637ಕ್ಕೆ ಏರಿಕೆಯಾಗಿದೆ.
ವಾರದಿಂದ ಕೋವಿಡ್ ಹೊಸ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದೆ. ಸೋಂಕಿತರಲ್ಲಿ ಸದ್ಯ 41 ಮಂದಿ ಆಸ್ಪತ್ರೆ ಚಿಕಿತ್ಸೆಗೆ ಒಳಗಾಗಿದ್ದಾರೆ. ಐದು ಮಂದಿ ಐಸಿಯು, ಇಬ್ಬರು ವೆಂಟಿಲೇಟರ್ ಸಹಿತ ಐಸಿಯು ಹಾಗೂ ಒಬ್ಬರು ಎಚ್‌ಡಿಯು ಹಾಸಿಗೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನುಳಿದವರಿಗೆ ಸಾಮಾನ್ಯ ಹಾಸಿಗೆಯಲ್ಲಿ ಚಿಕಿತ್ಸೆ ಒದಗಿಸಲಾಗುತ್ತಿದೆ.
ವಾರದ ಅವಧಿಯಲ್ಲಿ ದೃಢಪಟ್ಟ ಪ್ರಕರಣಗಳನ್ನು ಬಿಬಿಎಂಪಿ ವಾರ್‌ ರೂಮ್ ವಿಶ್ಲೇಷಿಸಿದೆ. ಏಳು ದಿನಗಳಲ್ಲಿ 19,636 ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, 665 ಮಂದಿ ಕೋವಿಡ್ ಪೀಡಿತರಾಗಿದ್ದಾರೆ. ಈ ಅವಧಿಯಲ್ಲಿ 498 ಮಂದಿ ಚೇತರಿಸಿಕೊಂಡಿದ್ದಾರೆ. ಒಬ್ಬರು ಮೃತಪಟ್ಟಿರುವುದು ದೃಢಪಟ್ಟಿದೆ. ಸೋಂಕು ದೃಢ ಪ್ರಮಾಣ ಸರಾಸರಿ ಶೇ 3.39ರಷ್ಟಿದೆ.
ಕಳೆದ 10 ದಿನಗಳಿಂದ ಬೆಳ್ಳಂದೂರು ವಾರ್ಡ್‌ನಲ್ಲಿ ಸರಾಸರಿ ನಾಲ್ಕು ಪ್ರಕರಣ, ಎಚ್.ಎಸ್.ಆರ್. ಲೇಔಟ್‌, ಬೇಗೂರು ಹಾಗೂ ದೊಡ್ಡ ನೆಕ್ಕುಂದಿ ವಾರ್ಡ್‌ನಲ್ಲಿ ಸರಾಸರಿ ಮೂರು ಪ್ರಕರಣಗಳು ದೃಢಪಡುತ್ತಿವೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!