ಬೆಂಗಳೂರು : ನಗರದಲ್ಲಿ 146 ಮಂದಿ ಕೋವಿಡ್ ಪೀಡಿತರಾಗಿರುವುದು ದೃಢಪಟ್ಟಿದೆ. ಇದರಿಂದಾಗಿ ಸಕ್ರಿಯ ಪ್ರಕರಣಗಳ ಸಂಖ್ಯೆ 637ಕ್ಕೆ ಏರಿಕೆಯಾಗಿದೆ.
ವಾರದಿಂದ ಕೋವಿಡ್ ಹೊಸ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದೆ. ಸೋಂಕಿತರಲ್ಲಿ ಸದ್ಯ 41 ಮಂದಿ ಆಸ್ಪತ್ರೆ ಚಿಕಿತ್ಸೆಗೆ ಒಳಗಾಗಿದ್ದಾರೆ. ಐದು ಮಂದಿ ಐಸಿಯು, ಇಬ್ಬರು ವೆಂಟಿಲೇಟರ್ ಸಹಿತ ಐಸಿಯು ಹಾಗೂ ಒಬ್ಬರು ಎಚ್‌ಡಿಯು ಹಾಸಿಗೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನುಳಿದವರಿಗೆ ಸಾಮಾನ್ಯ ಹಾಸಿಗೆಯಲ್ಲಿ ಚಿಕಿತ್ಸೆ ಒದಗಿಸಲಾಗುತ್ತಿದೆ.
ವಾರದ ಅವಧಿಯಲ್ಲಿ ದೃಢಪಟ್ಟ ಪ್ರಕರಣಗಳನ್ನು ಬಿಬಿಎಂಪಿ ವಾರ್ ರೂಮ್ ವಿಶ್ಲೇಷಿಸಿದೆ. ಏಳು ದಿನಗಳಲ್ಲಿ 19,636 ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, 665 ಮಂದಿ ಕೋವಿಡ್ ಪೀಡಿತರಾಗಿದ್ದಾರೆ. ಈ ಅವಧಿಯಲ್ಲಿ 498 ಮಂದಿ ಚೇತರಿಸಿಕೊಂಡಿದ್ದಾರೆ. ಒಬ್ಬರು ಮೃತಪಟ್ಟಿರುವುದು ದೃಢಪಟ್ಟಿದೆ. ಸೋಂಕು ದೃಢ ಪ್ರಮಾಣ ಸರಾಸರಿ ಶೇ 3.39ರಷ್ಟಿದೆ.
ಕಳೆದ 10 ದಿನಗಳಿಂದ ಬೆಳ್ಳಂದೂರು ವಾರ್ಡ್‌ನಲ್ಲಿ ಸರಾಸರಿ ನಾಲ್ಕು ಪ್ರಕರಣ, ಎಚ್.ಎಸ್.ಆರ್. ಲೇಔಟ್, ಬೇಗೂರು ಹಾಗೂ ದೊಡ್ಡ ನೆಕ್ಕುಂದಿ ವಾರ್ಡ್‌ನಲ್ಲಿ ಸರಾಸರಿ ಮೂರು ಪ್ರಕರಣಗಳು ದೃಢಪಡುತ್ತಿವೆ.
ರಾಜ್ಯದಲ್ಲಿ ರಿಯಲ್ ಎಸ್ಟೇಟ್ ಉದ್ಯಮ ಗರಿಗೆದರಿದ ಬಳಿಕ ಅಲ್ಲಲ್ಲಿ ಕೆರೆ-ಕಟ್ಟೆ, ಸರ್ಕಾರಿ ಜಾಗಗಳ ಒತ್ತುವರಿ ಪ್ರಕರಣ ಮೇಲಿಂದ ಮೇಲೆ ಭಾರೀ…
ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ವಿದ್ಯಮಾನಗಳಿಗೆ ಕಾರಣವಾಯಿತೇ ಹೈಕಮಾಂಡ್ ಮೌನ? ರಾಜ್ಯ ಕಾಂಗ್ರೆಸ್‌ನಲ್ಲಿ ಮುಂದುವರಿದಿರುವ ಗೊಂದಲ ಬಿಜೆಪಿ ಮತ್ತು ಜಾ.ದಳ ಪಾಳೆಯಗಳ ಆತ್ಮವಿಶ್ವಾಸ…
ಏ.೨ರಿಂದ ೨೮ ದಿನಗಳ ಕಾಲ ನಡೆಯಲಿರುವ ಪಂದ್ಯಾವಳಿ; ೩೦೦ಕ್ಕೂ ಅಧಿಕ ತಂಡಗಳು ಪಾಲ್ಗೊಳ್ಳುವ ನಿರೀಕ್ಷೆ ಮಡಿಕೇರಿ:ಕೊಡವ ಕ್ರಿಕೆಟ್ ಅಕಾಡೆಮಿ ಸಹಯೋಗದಲ್ಲಿ…
ಮೈಸೂರು: ನಗರದ ಹೊರವಲಯದ ನಾಲ್ಕು ದಿಕ್ಕುಗಳಲ್ಲಿರುವ ಹಲವು ಪ್ರದೇಶಗಳನ್ನು ಸೇರಿಸಿ ಗ್ರೇಡ್- ೧ ಮೈಸೂರು ಮಹಾನಗರ ಪಾಲಿಕೆಯನ್ನಾಗಿ ರಚಿಸಲು ರಾಜ್ಯಸರ್ಕಾರ…
ಮಂಜು ಕೋಟೆ ಕುರುಬ ಸಮಾಜದ ಎರಡು ಬಣಗಳ ನಡುವೆ ಉಂಟಾಗಿದ್ದ ಗೊಂದಲ; ಸಿಎಂ ಸಿದ್ದರಾಮಯ್ಯ ಸೂಚನೆಯಂತೆ ಕ್ರಮ ಎಚ್.ಡಿ.ಕೋಟೆ: ಮುಖ್ಯಮಂತ್ರಿ…
೩೫ ಕಡೆಗಳಲ್ಲಿ ಹೈಬ್ರಿಡ್ ಸಿಗ್ನಲ್ ಲೈಟ್; ವಾಹನ ಸಂಚಾರ ದಟ್ಟಣೆ ನಿಯಂತ್ರಿಸಲು ಪೊಲೀಸ್ ಇಲಾಖೆ ಕ್ರಮ ಮೈಸೂರು: ಭವಿಷ್ಯದಲ್ಲಿ ರಿಂಗ್…